ಹೆಣ್ಣು ಮಗು ಮನೆಯ ನಂದಾದೀಪ
ಹೆಣ್ಣು ಮಕ್ಕಳಿಗೂ ಪುರುಷನಷ್ಟೇ ಆದ್ಯತೆ ನೀಡಿ
Team Udayavani, Jan 25, 2021, 3:59 PM IST
ಹೊನ್ನಾಳಿ: ಕತ್ತಲಲ್ಲಿ ಬೆಳಕು ಎಷ್ಟು ಮುಖ್ಯವೋ ಅದೇ ರೀತಿ ಮನೆಗೆ ಹೆಣ್ಣು ಮಗುವೂ ಅಷ್ಟೇ ಮುಖ್ಯ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಬೇಲಿಮಲ್ಲೂರು ಗ್ರಾಮದ ಉಮಾ ಪ್ರಗತಿ ಪ್ರೌಢಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಒಂದು ಕಾಲದಲ್ಲಿ ಹೆಣ್ಣುಮಗು ಹುಟ್ಟಿದರೆ ತಿರಸ್ಕಾರ ಮನೋಭಾವದಿಂದ ನೋಡುತ್ತಿದ್ದ ಸಮಾಜ ಈಗ ಹೆಣ್ಣು ಮಗುವನ್ನು ಮನೆಯ ನಂದಾದೀಪದ ರೀತಿ ನೋಡುತ್ತಿದ್ದಾರೆ ಎಂದರು.
ಸಮಾಜದಲ್ಲಿ ತಾಯಿಗೆ ಸಿಗುವ ಗೌರವ ಎಲ್ಲಿಯೂ ಸಿಗುವುದಿಲ್ಲ. ತಾಯಿ ಗುರುಮಾತೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಮಾಡುವುದು ತಾಯಿ ಮಾತ್ರ. ಜೀವನದಲ್ಲಿ ಮುಂದೆ ಗುರಿ ಇರಬೇಕು, ಹಿಂದೆ ಗುರುಗಳು ಇರಬೇಕು. ತಾಯಿಯೇ ಮೊದಲ ಗುರು ಹಾಗಾಗಿ ಮನೆಯಿಂದ ಬರುವಾಗ
ಮಕ್ಕಳು ತಾಯಿಗೆ ನಮಸ್ಕರಿಸಿ ಬರಬೇಕು. ಹೇಳಿದರಲ್ಲದೇ ತಾಯಿ ಹಾಕಿಕೊಟ್ಟ ಮಾರ್ಗದರ್ಶದಲ್ಲಿ ಹೆಜ್ಜೆ ಇಡುವಂತೆ
ತಿಳಿಸಿದರು.
ಜಿಪಂ ಸದಸ್ಯ ಸುರೇಂದ್ರನಾಯ್ಕ, ತಾಪಂ ಉಪಾಧ್ಯಕ್ಷ ಕೆ.ಎಲ್.ರಂಗನಾಥ್, ಎಂಪಿಎಂಸಿ ಅಧ್ಯಕ್ಷ ಸುರೇಶ್, ಎಸ್ಟಿ ಮೋರ್ಚ ತಾಲೂಕು
ಅಧ್ಯಕ್ಷರಾದ ಉಮೇಶ್ ಇದ್ದರು.
ಶ್ರೀರಾಮನ ಭಾವಚಿತ್ರಕ್ಕೆ ಪುಷ್ಪ ನಮನ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ನಿರ್ಮಾಣಕ್ಕೆ ಬೇಲಿಮಲ್ಲೂರು
ಗ್ರಾಮದಲ್ಲಿ ಬೃಹತ್ ಬ್ಯಾನರ್ ಹಾಕಿದ್ದು, ರಾಮನ ಭಾವಚಿತ್ರಕ್ಕೆ ಶಾಸಕರು ಪುಷ್ಪ ನಮನ ಸಲ್ಲಿಸಿದರು. ರಾಮಮಂದಿರ ನಿರ್ಮಾಣಕ್ಕೆ ಜನರು ಕೈಲಾದಷ್ಟು ದೇಣಿಗೆ ನೀಡುವಂತೆ ಮನವಿ ಮಾಡಿದರು.
ಓದಿ: ಆನ್ ಲೈನ್ ಕ್ಲಾಸ್ ಗೂ ಹಾಜರಾತಿ ಕಡ್ಡಾಯ ಮಾಡುವ ಕುರಿತು ನಿರ್ಧಾರ: ಅಶ್ವಥ್ ನಾರಾಯಣ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.