ನಾಳೆಯಿಂದ ಗುಳೇದ ಲಕ್ಕಮ್ಮದೇವಿ ಜಾತ್ರೆ
2 ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲಿ ಗ್ರಾಮ ತೊರೆದು ಸಾಮೂಹಿಕವಾಗಿಭಾಗವಹಿಸುವ ಗ್ರಾಮಸ್ಥರು
Team Udayavani, Jan 25, 2021, 5:20 PM IST
ಹರಪನಹಳ್ಳಿ: ತಾಲೂಕಿನ ಹುಲಿಕಟ್ಟೆ ಗ್ರಾಮದ ಸಮೀಪದ ಅರಣ್ಯದಲ್ಲಿ ಎರಡು ವರ್ಷಕ್ಕೊಮ್ಮೆ ನಡೆಯುವ ಗುಳೇದ ಲಕ್ಕಮ್ಮದೇವಿ ಜಾತ್ರೋತ್ಸವ ಜ. 26ರಿಂದ 28ರವರೆಗೆ ಎರಡು ದಿನಗಳ ಕಾಲ ಸರಳವಾಗಿ ಆಚರಿಸಲಾಗುವುದು ಎಂದು ತಾಪಂಸದಸ್ಯ ಹುಲಿಕಟ್ಟಿ ಚಂದ್ರಪ್ಪ ತಿಳಿಸಿದರು.
ಹುಲಿಕಟ್ಟಿ ಗ್ರಾಮದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿಯಮಾವಳಿ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತದ ನಿರ್ದೇಶನದ ಮೇರೆಗೆ ಪ್ರತಿ ವರ್ಷದಂತೆ ಜಾತ್ರೆ ಅದ್ಧೂರಿಯಾಗಿ ನಡೆಸುವ ಬದಲು ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಜಾತ್ರೆಗೆ ಆಗಮಿಸುವ ಭಕ್ತರು ಮಾಸ್ಕ್ ಹಾಗೂ ಸ್ಯಾನಿಟೈಸರ್ ಉಪಯೋಗಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಧಾರ್ಮಿಕ ಪೂಜಾ ವಿಧಾನಗಳನ್ನು ನೆರವೇರಿಸಬೇಕು ಎಂದು ವಿನಂತಿಸಿಕೊಂಡರು.
ಜ. 26ರಂದು ರಾತ್ರಿ 10 ಗಂಟೆಗೆ ದೇವಿ ಮೆರವಣಿಗೆಯೊಂದಿಗೆ ಗಂಗೆ ಪೂಜೆ ನೆರವೇರಿಸಿ ಅರಣ್ಯದಲ್ಲಿರುವ ಗದ್ದುಗೆ ಸೇರುವುದು. ಜ. 27ರಂದು ಡೊಳ್ಳಿನ ಮಜಲು, ಕೋಲಿನ ಮೇಳ, ಎತ್ತಿನ ಮೆರವಣಿಗೆ ನಡೆಯಲಿದೆ.
ಜ. 28ರಂದು ಮೆರವಣಿಗೆ ಮೂಲಕ ಗದ್ದುಗೆಯಿಂದ ಹುಲಿಕಟ್ಟಿಯ ದೇವಸ್ಥಾನಕ್ಕೆ ದೇವಿ ಮರಳಲಿದ್ದಾಳೆ. ಜಾತ್ರೋತ್ಸವ ಅಂಗವಾಗಿ
ಶಾಸಕರು ಸ್ವತ್ಛತಾ ಕಾರ್ಯ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಒದಗಿಸಿದ್ದಾರೆ. ಶಾಸಕ ಜಿ. ಕರುಣಾಕರ ರೆಡ್ಡಿ, ಮಾಜಿ ಸಚಿವ ಪಿ.ಟಿ. ಪರಮೇಶ್ವರನಾಯ್ಕ, ಕೆಪಿಸಿಸಿ ಮಹಿಳಾ ಘಟಕ ರಾಜ್ಯ ಕಾರ್ಯದರ್ಶಿ, ದೇವಸ್ಥಾನ ಸಮಿತಿ ಅಧ್ಯಕ್ಷರಾದ ಎಂ.ಪಿ.ಲತಾ ಮಲ್ಲಿಕಾರ್ಜುನ್ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಮುಖಂಡರಾದ ಬಣಕಾರ ಗಂಗಾಧರ್, ಕೊಟ್ರೇಶ್, ಟಿ.ಹಾಲೇಶ್, ಭಾಷುಸಾಬ್, ಚಂದ್ರಪ್ಪ, ಟಿ.ಹನುಮಂತಪ್ಪ, ಬಸವರಾಜ್, ಶಿವಾನಂದಪ್ಪ, ಲಕ್ಕೇಶ್, ಹೋಮ್ಯಪ್ಪ, ಮಹದೇವಪ್ಪ, ಕೆ.ನಾಗರಾಜ್, ಪಕ್ಕೀರೇಶ್, ಬ್ರಾಹಿಂಸಾಬ್ ಮತ್ತಿತರರು ಉಪಸ್ಥಿತರಿದ್ದರು.
ಇಡೀ ಗ್ರಾಮವೇ ಗುಳೆ ಹೋಗಿ ಜಾತ್ರೆ ಆಚರಣೆ: ನಾಲ್ಕಾರು ತಲೆಮಾರಿನ ಹಿಂದೆ ಹುಲಿಕಟ್ಟಿ ಗ್ರಾಮದಲ್ಲಿ ಭೀಕರ ಬರಗಾಲ ಹಾಗೂ
ಪ್ಲೇಗ್, ಕಾಲರಾದಂತಹ ಮಾರಕ ರೋಗಗಳು ಗ್ರಾಮಸ್ಥರಲ್ಲಿ ತಲ್ಲಣ ಮೂಡಿಸಿದ್ದವು. ರೋಗಗಳ ಸಂಕಷ್ಟಕ್ಕೆ ಸಿಲುಕಿದ ಗ್ರಾಮಸ್ಥರು ಗ್ರಾಮವನ್ನೇ ತೆರೆಯಲು ಸಿದ್ಧತೆ ನಡೆಸಿದಾಗ ಗೊರವನೊಬ್ಬ ಊರ ಸಮೀಪದ ಅರಣ್ಯದಲ್ಲಿ ದೈವತ್ವಶಕ್ತಿ ನೆಲೆಯೂರಿದೆ. ಆ ದೈವ ಶಕ್ತಿಗೆ ಶ್ರದ್ಧಾಭಕ್ತಿಯಿಂದ ನಡೆದುಕೊಂಡರೇ ಕಷ್ಟಗಳೆಲ್ಲಾ ದೂರವಾಗಿ ಗ್ರಾಮದಲ್ಲಿ ಸುಭಿಕ್ಷೆ ಸಂಭ್ರಮ ಮನೆ ಮಾಡುತ್ತದೆ ಎಂದು ನುಡಿದಿದ್ದನಂತೆ. ಅದರಂತೆ ನಡೆದುಕೊಂಡಾಗ ಊರಲ್ಲಿ ಸಂಭ್ರಮ ಮನೆ ಮಾಡಿ, ಸಮೃದ್ಧ ಬೆಳೆ ಕೈಸೇರಿತು. ಅಂದಿನಿಂದ ಎರಡು ವರ್ಷಕ್ಕೊಮ್ಮೆ ವೈಭವದಿಂದ ಜಾತ್ರೆ ಸಾಗುತ್ತಾ ಬಂದಿದೆ.
ಇಡೀ ಹುಲಿಕಟ್ಟಿ ಗ್ರಾಮದ ಜನರು ಎರಡು ದಿನಗಳ ಕಾಲ ಊರಲ್ಲಿ ಒಂದು ನರಪಿಳ್ಳೆಯೂ ಇಲ್ಲದಂತೆ ಮಕ್ಕಳು-ಮರಿ, ಸಾಕುಪ್ರಾಣಿ ಸಮೇತ ಜಾತ್ರೆಯಲ್ಲಿ ದೇವಸ್ಥಾನದ ಬಳಿ ಬಿಡಾರ ಹೂಡುತ್ತಾರೆ. ದುರ್ಗಾದೇವಿಯ ಪ್ರತಿರೂಪದಂತಿರುವ ಶ್ರೀಗುಳೆದ ಲಕ್ಕಮ್ಮದೇವಿಗೆ ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಬಲಿ ಕೊಡುವ ಪದ್ಧತಿ ಪ್ರಾರಂಭವಾಗಿದ್ದು, ನಂತರ ಸುತ್ತಲಿನ ನಾಲ್ಕಾರು ಜಿಲ್ಲೆಯ ಅಸಂಖ್ಯಾತ ಭಕ್ತರು ಆಗಮಿಸಿ ದೇವಿಗೆ ಭಕ್ತಿ ಸಮರ್ಪಿಸುತ್ತಿದ್ದಾರೆ. ವಿಶೇಷವಾಗಿ ವಿವಿಧ ಭಾಗಗಳಿಂದ ಬಂಜಾರ ಸಮುದಾಯದ ಭಕ್ತರೇ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿರುವುದು ಮತ್ತೂಂದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.