ಉಚಿತ ಹೊಲಿಗೆ ಯಂತ್ರ ವಿತರಣೆ
ಜಿಲ್ಲಾ ಖನಿಜ ನಿಧಿ ಯಡಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.
Team Udayavani, Jan 25, 2021, 5:51 PM IST
ಸಂಡೂರು: ತಾಲೂಕಿನ ಪ್ರತಿಯೊಬ್ಬ ಮಹಿಳೆಯೂ ಶಿಕ್ಷಣ ಪಡೆಯಬೇಕು, ಸ್ವಾವಲಂಬಿಗಳಾಗಿ ಆರ್ಥಿಕ ಪ್ರಗತಿ ಸಾಧಿಸಬೇಕು ಎನ್ನುವ ಮಹತ್ತರ ಉದ್ದೇಶದಿಂದ ಖನಿಜ ನಿ ಧಿ ಪ್ರತಿಷ್ಠಾನದಿಂದ (ಡಿ.ಎಂ. ಎಫ್.)ಸ್ವ ಉದ್ಯೋಗ ತರಬೇತಿ ಮತ್ತು ಉಚಿತ ಟೈಲರಿಂಗ್ ಯಂತ್ರಗಳನ್ನು ನೀಡಲಾಗುತ್ತಿದ್ದು ಅದರ ಪೂರ್ಣ ಸದುಪಯೋಗಪಡೆದುಕೊಳ್ಳಬೇಕು ಎಂದು ಶಾಸಕ ಈ. ತುಕಾರಾಂ ತಿಳಿಸಿದರು.
ಅವರು ತಾಲೂಕಿನ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಮಹಿಳೆಯರಿಗೆ ಡಿಎಂಎಫ್ ನಿಧಿ ಯಿಂದ ಟೈಲರಿಂಗ್ ತರಬೇತಿಯನ್ನು ನೀಡಿ ಅವರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿ, ಇಂದು ಗಣಿಗಾರಿಕೆಯಲ್ಲಿ ಕೆಲಸ ಮಾಡುತ್ತಿರುವ ಬಹಳಷ್ಟು ಕುಟುಂಬಗಳು ನಿರುದ್ಯೋಗಿಗಳಾಗಿದ್ದರು. ಆದರೆ ಡಿಎಂಎಫ್ ನಿಧಿ ಯಿಂದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ, ಯುವಕರಿಗೆ ಸ್ವ ಉದ್ಯೋಗದ ಮೊಬೈಲ್ ರಿಪೇರಿ, ಕಂಪ್ಯೂಟರ್, ಟಿ.ವಿ. ಇತರೆ ರೀತಿ ತರಬೇತಿಗಳನ್ನು ನೀಡುವ ಮೂಲಕ ಸ್ವ
ಉದ್ಯೋಗವನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅವುಗಳ ಪೂರ್ಣ ಸದುಪಯೋಗವನ್ನು ಪಡಿಸಿಕೊಳ್ಳಬೇಕು, ಸ್ವ ಉದ್ಯೋಗಿಗಳಾಗಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಯನ್ನು ಸಾಧಿ ಸಬೇಕು ಎಂದು
ಕರೆನೀಡಿದರು.
ಈ ಸಂದರ್ಭದಲ್ಲಿ ಸಂಸದ ವೈ. ದೇವೇಂದ್ರಪ್ಪ, ತಹಶೀಲ್ದಾರ್ ರಶ್ಮಿ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರುಗಳು, ಗ್ರಾಮದ ಪ್ರಮುಖರು, ಪಂಚಾಯಿತಿ ಅ ಧಿಕಾರಿಗಳು, ಖನಿಜ
ನಿಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa; ಬೈಕ್ ಸ್ಕಿಡ್; ಪೊಲೀಸ್ ಪೇದೆ ಸಾವು
Road Mishap: ಆಂಧ್ರ ಗಡಿಯಲ್ಲಿ ಮರಕ್ಕೆ ಕಾರು ಢಿಕ್ಕಿ: ಇಬ್ಬರು ವೈದ್ಯರ ಸಹಿತ ಮೂವರ ಸಾವು
Ballari: ಸ್ವಾಮೀಜಿಗಳ ಮೇಲಿನ ಕ್ರಮ, ಕರಿಯಾ ಎಂದವರ ಮೇಲೆ ಏಕಿಲ್ಲ; ಅಶೋಕ್
Bellary; ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆರ್.ಅಶೋಕ್
Bellary; ಕರ್ನಾಟಕ- ಆಂಧ್ರ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.