ಮದುವೆ ಆಹ್ವಾನ ಪತ್ರಿಕೆ ನೀಡಲು ತಂದಿದ್ದ ಕಾರನ್ನೇ ಕದ್ದೊಯ್ದ ಕಳ್ಳರು
Team Udayavani, Jan 26, 2021, 12:21 PM IST
ಯಳಂದೂರು: ಆಹ್ವಾನ ಪತ್ರಿಕೆ ನೀಡಲು ದೂರದ ತಮಿಳುನಾಡಿನ ಕೊಯಮತ್ತೂರಿನಿಂದ ತಂದಿದ್ದ ಕಾರನ್ನು ರಾತ್ರೋರಾತ್ರಿ ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ತಾಲೂಕಿನ ಮೆಳ್ಳಹಳ್ಳಿ ಗ್ರಾಮದಲ್ಲಿ ಜರುಗಿದೆ.
ಕೊಯಮತ್ತೂರಿನಲ್ಲಿರುವ ವೆಂಕಟೇಶಕೀರ್ತಿ ಎಂಬುವವರು ತಮ್ಮ ತಂಗಿಯ ವಿವಾಹ ಆಹ್ವಾನ ಪತ್ರಿಕೆಯನ್ನು ನೀಡಲು ಶನಿವಾರ ಸಂಜೆ ಯಳಂದೂರಿಗೆ ಬಂದಿದ್ದಾರೆ. ಇಲ್ಲಿನ ಮೀರೆ ಸಿದ್ದರಾಜು ಎಂಬುವವರಿಗೆ ಆಹ್ವಾನ ಪತ್ರಿಕೆ ನೀಡಿ ನಂತರ ಮೆಳ್ಳಹಳ್ಳಿ ಗ್ರಾಮದಲ್ಲಿರುವ ತಮ್ಮ ಅಜ್ಜಿ ಮನೆಗೆ ತೆರಳಿದ್ದಾರೆ. ಸಂಜೆಯಾಗಿದ್ದರಿಂದ ಅಲ್ಲೇ ವಾಸ್ತವ್ಯ ಹೂಡಿ ತಮ್ಮ ಅಜ್ಜಿ ಮನೆಯಲ್ಲಿ ತಂಗಿದ್ದಾರೆ.
ಮನೆ ಮುಂಭಾಗದಲ್ಲಿ ಕಾರನ್ನು ನಿಲ್ಲಿಸಿದ್ದರು. ಮಧ್ಯರಾತ್ರಿ ಕಳ್ಳರು ಬಂದು ಕಾರನ್ನು ಕದ್ದು ಪರಾರಿಯಾಗಿದ್ದಾರೆ.
ವೆಂಕಟೇಶಕೀರ್ತಿ ತಮ್ಮ ಸ್ನೇಹಿತ ತಮಿಳುನಾಡಿದ ಗುಣಶೇಖರ್‌ಗೆ ಸೇರಿದ ಮಾರುತಿ ಸ್ವಿಫ್ಟ್ ಟಿ.ಎನ್. 38 ಬಿ.ಪಿ 3555 ಸಂಖ್ಯೆ ಕಾರಿನಲ್ಲಿ ಬಂದಿದ್ದರು. ಆದರೆ ರಾತ್ರೋರಾತ್ರಿ ಕಾರು ಕಳ್ಳತನವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇದನ್ನೂ ಓದಿ:ಲಂಚ ಪ್ರಕರಣ: ಕಂದಾಯ ಸಚಿವ ಅಶೋಕ್ ಪಿಎ ವಿರುದ್ಧ ದೂರು ದಾಖಲು
ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳೀಯ ಪೊಲೀಸರು ದೂರು ದಾಖಲಿಸಿಕೊಂಡು ಸ್ಥಳ ಪರಿಶೀಲನೆ ನಡೆಸಿ ಕ್ರಮ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.