ಸ್ಮಾರ್ಟ್‌ಸಿಟಿ ವಾಸ್ತವಾಂಶ ಜನರಿಗೆ ತಿಳಿಸಿ

ವಾಸ್ತವ ಸಂಗತಿಗಳ ಮಾಹಿತಿ ತಿಳಿಯದೆ ಕೆಲವರ ವಿರೋಧ

Team Udayavani, Jan 26, 2021, 2:55 PM IST

26-6

ದಾವಣಗೆರೆ: ಕುಂದವಾಡ ಕೆರೆ ದಾವಣಗೆರೆ ನಗರದ ಕುಡಿಯುವ ನೀರಿನ ಪ್ರಮುಖ ಸಂಗ್ರಹಗಾರವಾಗಿದ್ದು, ಸ್ಮಾರ್ಟ್‌ಸಿಟಿ ಯೋಜನೆಯಡಿ ಜನರಿಗೆ ಅಗತ್ಯ ಕುಡಿಯುವ ನೀರು ಪೂರೈಸಲು ಹಾಗೂ ಕೆರೆಯ ಸುತ್ತಮುತ್ತಲ ಪ್ರದೇಶದಲ್ಲಿ ಪರಿಸರವನ್ನು ಜೀವವೈವಿಧ್ಯಗಳ ವಿಕಸನಕ್ಕೆ ನುಕೂಲವಾಗುವಂತೆ ನೈಜ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿರುವ ವಾಸ್ತವಾಂಶಗಳನ್ನು ಸಾರ್ವಜನಿಕರಿಗೆ ತಲುಪುವ ದಿಸೆಯಲ್ಲಿ ಜನಜಾಗೃತಿ ಮೂಡಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಾವಣಗೆರೆ ಸ್ಮಾರ್ಟ್‌ ಸಿಟಿ ಯೋಜನೆಗೆ ಸಂಬಂಧಿಸಿದಂತ ಐಟಿ ಲೆವೆಲ್ ಅಡ್ವೈಸರಿ  ಸಭೆಯಲ್ಲಿ
ಮಾತನಾಡಿದ ಅವರು, ವಾಸ್ತವ ಸಂಗತಿಗಳ ಮಾಹಿತಿ ಇಲ್ಲದೆ ತಿಳಿಯದೆ, ಕುಂದವಾಡ ಕೆರೆ ಅಭಿವೃದ್ಧಿ ಯೋಜನೆಯು ಪರಿಸರ ವಿರೋ ಧಿ ಎಂದು ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕುಂದವಾಡ ಕೆರೆ ಪ್ರಸ್ತುತ ಕೇವಲ ಕೆರೆ ಮಾತ್ರವಲ್ಲದೆ ನಗರಕ್ಕೆ ಕುಡಿಯುವ ನೀರಿಗೆ ಆಧಾರವಾಗಿರುವ ಪ್ರಮುಖ ನೀರು ಸಂಗ್ರಹಗಾರವಾಗಿದೆ. ಕುಂದವಾಡ ಕೆರೆ ಅಭಿವೃದ್ಧಿಯ ಉದ್ದೇಶ ಕುರಿತ ವಾಸ್ತವ ಅಂಶಗಳನ್ನು ಸರಿಯಾದ ರೀತಿಯಲ್ಲಿ ಪ್ರಚುರಪಡಿಸಿದಲ್ಲಿ, ಯೋಜನೆ ಕುರಿತಂತೆ ಇರುವ ತಪ್ಪು ಅಭಿಪ್ರಾಯಗಳು ದೂರವಾಗಲು ಸಾಧ್ಯ. ಆ ನಿಟ್ಟಿನಲ್ಲಿ ಸ್ಮಾರ್ಟ್‌ಸಿಟಿ ಅಧಿಕಾರಿಗಳು ಜನಜಾಗೃತಿ ಮೂಡಿಸಿ ಎಂದು
ಸೂಚನೆ ನೀಡಿದರು.
ಸ್ಮಾರ್ಟ್‌ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಮಾತನಾಡಿ, ಕುಂದುವಾಡ ಕೆರೆಯ ಕುಡಿಯುವ ನೀರಿನ
ಪ್ರಮುಖ ಸಂಗ್ರಹಗಾರವಾಗಿದ್ದು, ಬೇಸಿಗೆಯಲ್ಲಿ ಕೆರೆ ಏರಿ ಮೇಲಿನ ಕಳೆ, ಗಿಡಗಂಟೆ ಇತ್ಯಾದಿಗಳ ಕೊಳೆಯುವಿಕೆಯಿಂದ ನೀರು ಹಸಿರುಗಟ್ಟಿ ಕುಡಿಯಲು ಯೋಗ್ಯವಾಗದ ರೀತಿ ಪರಿವರ್ತನೆ ಆಗುತ್ತದೆ, ನೀರು ಕಲುಷಿತಗೊಳ್ಳುವುದರಿಂದ ಕೆರೆಯಲ್ಲಿನ ಮೀನುಗಳು, ಜೀವವೈವಿಧ್ಯಗಳು ಸಾಯುತ್ತವೆ. ಕೆರೆಯ ಏರಿಯಲ್ಲಿನ ನೀರು ಬಸಿಯುವಿಕೆ, ಹಾಳಾಗಿರುವ ಏರಿ ಮೇಲಿನ ಕಲ್ಲುಹೊದಿಕೆ ಮುಂತಾದ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಲು ಕೆರೆ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಒಂದೂವರೆ ವರ್ಷದ ಹಿಂದೆಯೇ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರ ಅನುಕೂಲಕ್ಕೆ ಏರಿಯ ಮೇಲೆ ವಿದ್ಯುತ್‌ ದೀಪ ಅಳವಡಿಕೆ, ಹೂವಿನ ಗಿಡ ಬೆಳೆಸುವುದು, ಕಲ್ಲು ಬೆಂಚು ಅಳವಡಿಕೆ, ವಾಕಿಂಗ್‌ ಪಾತ್‌, ಸೈಕಲ್‌ ಟ್ರಾಕ್‌ ನಿರ್ಮಾಣ ಮಾಡಲಾಗುತ್ತಿದೆ. ಕೆರೆಯ ಒಳಗೆ ಸಾರ್ವಜನಿಕರು ಹಾಗೂ ಪ್ರಾಣಿಗಳು ಹೋಗದಂತೆ ಚೈನ್‌ಲಿಂಕ್‌ ತಂತಿ ಬೇಲಿ ಅಳವಡಿಸಲು ಉದ್ದೇಶಿಸಲಾಗಿದೆ.
ಈ ಕೆರೆಗೆ ಯಾವುದೇ ಮಳೆ ನೀರಿನ ಒಳಹರಿವು ಇಲ್ಲದಿರುವುದರಿಂದ, ತುಂಗಭದ್ರಾ ನದಿ ಮತ್ತು ಭದ್ರಾ ಕಾಲುವೆ ಮೂಲಕ ಹರಿಸಿ ತುಂಬಿಸಲಾಗುತ್ತಿದೆ. ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯ ವಿಷಯ ಆಗಿರುವುದರಿಂದ ಕೆರೆಯಲ್ಲಿ ಸ್ವತ್ಛ ಪರಿಸರ ಹಾಗೂ ನೈರ್ಮಲ್ಯ ಕಾಪಾಡಿಕೊಳ್ಳುವುದರ ಜತೆಗೆ ಜನರಿಗೆ ಸತ್ಯಾಂಶಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.
ಜಿಲ್ಲಾಧಿ ಕಾರಿ ಮಹಾಂತೇಶ್‌ ಬೀಳಗಿ, ನಗರ ಪಾಲಿಕೆ ಆಯುಕ್ತರು ಕೂಡಲೇ ಅಂತಹ ಒತ್ತುವರಿಯನ್ನು ತೆರವುಗೊಳಿಸಿ, ಚರಂಡಿ ನಿರ್ಮಾಣ ಕಾರ್ಯಕ್ಕೆ ಅನುವು ಮಾಡಿಕೊಡಬೇಕು. ಯಾವುದೇ ಪ್ರಭಾವಗಳಿಗೆ ಮಣಿಯದೆ, ತುರ್ತಾಗಿ ತೆರವುಗೊಳಿಸುವಂತೆ ನಿರ್ದೇಶನ ನೀಡಿದರು. ಈಗಾಗಲೇ 1 ಮತ್ತು 2 ನೇ ಹಂತದಲ್ಲಿ ಒಟ್ಟು 29 ಇ-ಟಾಯ್ಲೆಟ್‌ ನಿರ್ಮಾಣವಾಗಿದ್ದು, ಇನ್ನೂ 17 ನಿರ್ಮಾಣವಾಗಬೇಕಿದೆ. ಆದರೆ, ಹಲವೆಡೆ
ಇ-ಟಾಯ್ಲೆಟ್‌ಗಳ ಅಸಮರ್ಪಕ ನಿರ್ವಹಣೆಯಿಂದ ಹಾಳಾಗಿದ್ದು, ದೂರುಗಳು ಕೇಳಿಬರುತ್ತಿವೆ ಎಂದು ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇ-ಟಾಯ್ಲೆಟ್‌ಗಳನ್ನು ಸಾರ್ವಜನಿಕರನುಕೂಲಕ್ಕಾಗಿ ಸದುದ್ದೇಶದಿಂದ ನಿರ್ಮಿಸಿದ್ದು, ಕೆಲವು ಕಿಡಿಗೇಡಿಗಳು ಕಾಯಿನ್‌ ಬಾಕ್ಸ್‌ನಲ್ಲಿ ಕಬ್ಬಿಣದ
ತುಂಡು, ಕಟ್ಟಿಗೆ ತುಂಡುಗಳನ್ನು ಹಾಕಿ ಹಾಳು ಮಾಡುತ್ತಿದ್ದಾರೆ. ನಗರದಲ್ಲಿ ಎಲ್ಲ 46 ಇ-ಟಾಯ್ಲೆಟ್‌ ಗಳನ್ನು ನಿರ್ಮಾಣ ಮಾಡಿ, ನಿರ್ವಹಣೆಗಾಗಿ
ಮಹಾನಗರಪಾಲಿಕೆಗೆ ಹಸ್ತಾಂತರ ಮಾಡಲಾಗುವುದು ಎಂದು ರವೀಂದ್ರ ಮಲ್ಲಾಪುರ ತಿಳಿಸಿದರು.
ರಸ್ತೆ ಸುರಕ್ಷತೆಗಾಗಿ ಫ್ಲೆಕ್ಸಿಬಲ್‌ ಮೀಡಿಯನ್‌, ಮಾರ್ಕರ್‌, ಸೋಲಾರ್‌ ಬ್ಲಿಂಕರ್ಗಳನ್ನು ಕಳವು ಮಾಡಿಕೊಂಡು, ತಮ್ಮ ವಾಹನಗಳಿಗೆ ಅಳವಡಿಸಿರುವುದು ಕಂಡುಬಂದಿದ್ದು, ಅಂತಹ ವಾಹನಗಳ ಫೋಟೋ ಸಹಿತ ನಗರದ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ. ಇನ್ನೂ ಕ್ರಮ ಕೈಗೊಂಡಿಲ್ಲ ಎಂದರು.

ಪೊಲೀಸ್‌ ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಕೂಡಲೇ ಅಂತಹ ವಾಹನಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸುವಂತೆ ತಾಕೀತು ಮಾಡಿದರು.
ಶಾಸಕ ಎಸ್‌.ಎ. ರವೀಂದ್ರನಾಥ್‌, ಮಹಾಪೌರ ಅಜಯ್‌ಕುಮಾರ್‌, ಆಯುಕ್ತ ವಿಶ್ವನಾಥ ಮುದಜ್ಜಿ ಇತರರು ಇದ್ದರು.

 

ಓದಿ : ನಮ್ಮ ಶಕ್ತಿ ಪ್ರದರ್ಶನಕ್ಕೆ ಅವಕಾಶ ನೀಡಬೇಡಿ: ರೈತ ಮುಖಂಡ ಬಾಬಾಗೌಡ ಪಾಟೀಲ

ಟಾಪ್ ನ್ಯೂಸ್

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ

4-sagara

Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.