ಅಧಿಕಾರಕ್ಕಾಗಿ ಕಾಂಗ್ರೆಸ್ ಭಯೋತ್ಪಾದಕ ಕೃತ್ಯಕ್ಕೆ ಇಳಿದಿದೆ: ನಳೀನ್ ಕುಮಾರ್ ಕಟೀಲ್ ಆಕ್ರೋಶ
Team Udayavani, Jan 27, 2021, 11:30 AM IST
ಚಿತ್ರದುರ್ಗ: ರೈತರ ಹೆಸರಿನಲ್ಲಿ ರಾಜಕೀಯ, ಪುಂಡಾಟ ಸರಿಯಲ್ಲ. ದಾಂಧಲೆ ಮಾಡುವುದು ರೈತ, ದೇಶಭಕ್ತ ಮಾಡುವ ಕಾರ್ಯವಲ್ಲ. ರೈತರ ಹೆಸರಿನಲ್ಲಿ ರಾಷ್ಟ್ರಘಾತಕ ಶಕ್ತಿಗಳ ಕೃತ್ಯ ನಡೆದಿದೆ ಎಂದು ಬಿಜೆಪಿ ರಾಜ್ಯದ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಕೆಂಪುಕೋಟೆ ಮೇಲೆ ದಾಳಿ, ರಾಷ್ಟ್ರಧ್ವಜ ಕೀಳುವುದು ಸರಿಯಲ್ಲ. ಕೆಲ ರಾಜಕೀಯ ಪಕ್ಷ ರೈತರ ದಿಕ್ಕು ತಪ್ಪಿಸಿವೆ. ದೆಹಲಿ ದಾಂಧಲೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆಗಬೇಕು. ದೇಶದ ರೈತರು ಈ ಬಗ್ಗೆ ಗಮನ ಹರಿಸಬೇಕು.
ಅಧಿಕಾರ ಇಲ್ಲದಾಗ ಕಾಂಗ್ರೆಸ್ ಪಕ್ಷದಿಂದ ಬೆಂಕಿ ಹಚ್ಚುವ ಕಾರ್ಯವಾಗುತ್ತಿದೆ, ಕಾಂಗ್ರೆಸ್ ಅಧಿಕಾರವಿದ್ದಾಗ ವಿಪಕ್ಷಗಳ ಮಣಿಸುವ ನೀತಿ ಅನುಸರಿಸಿತ್ತು. ಕಾಂಗ್ರೆಸ್ ಅಧಿಕಾರ ಇಲ್ಲದಾಗ ಅಶಾಂತಿ , ಗಲಭೆ ಸೃಷ್ಠಿಸುತ್ತಿದೆ ಎಂದು ಕಿಡಿಕಾರಿದರು.
ಇದನ್ನೂ ಓದಿ: ಸಿಎಂ ನಿವಾಸಕ್ಕೆ ದೌಡಾಯಿಸಿದ ಹೊರಟ್ಟಿ; ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ
ಸಿಎಎ ಜಾರಿಯಾದ ಸಂದರ್ಭದಲ್ಲೂ ಕಾಂಗ್ರೆಸ್ ನಿಂದ ಗಲಾಟೆ ನಡೆದಿದೆ. ಅಂದು ಪಿಸ್ತೂಲ್ ಹಿಡಿದು ತಿರುಗಿದ್ದರು, ನಿನ್ನೆ (ಜ.16) ತಲವಾರ್ ಪ್ರದರ್ಶಿಸಿದ್ದಾರೆ. ಕಾಂಗ್ರೆಸ್ ವಿಚಾರ, ಸಿದ್ಧಾಂತ, ದೇಶವನ್ನೂ ಮರೆತಿದೆ. ಅಧಿಕಾರಕ್ಕಾಗಿ ಭಯೋತ್ಪಾದಕ ಕೃತ್ಯಕ್ಕೆ ಇಳಿದಿದೆ.
ಸಿದ್ಧರಾಮಣ್ಣಗೆ ರೈತಪರ ಮಾತಾಡುವ ನೈತಿಕ ಹಕ್ಕಿಲ್ಲ. ಅವರು ಸಿಎಂ ಆಗಿದ್ದಾಗ ರಾಜ್ಯದಲ್ಲಿ 3ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅಂದು ಸಮಾಜವಾದದ ಹೆಸರಿನಲ್ಲಿ ಸಿದ್ಧರಾಮಯ್ಯ. ಮಜಾ ಮಾಡಿದ್ದರು.
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಶೀಘ್ರ ರಾಜಕೀಯ ಅಂತ್ಯ ಕಾಣಲಿದ್ದಾರೆ. ಮೊನ್ನೆ ಜೈಲಿಂದ ಬಂದಾಗ ಡಿಕೆಶಿ ಮೆರವಣಿಗೆ ಮೂಲಕ ಬಂದಿದ್ದಾರೆ. ಮತ್ತೆ ಡಿಕೆಶಿ ಅಲ್ಲಿಗೆ ಹೋಗುತ್ತಾರೆ ಎಂದು ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದರು.
ಇದನ್ನೂ ಓದಿ: 4 ವರ್ಷದ ಜೈಲುವಾಸ ಅಂತ್ಯ; ಜ.27ರಂದು ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬಿಡುಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.