ಕೆಂಪು ಕೋಟೆ ಬಳಿ ನಡೆದ ಹಿಂಸಾಚಾರದಲ್ಲಿ ಅನ್ಯ ಶಕ್ತಿಗಳ ಕೈವಾಡ : HDK


Team Udayavani, Jan 27, 2021, 3:17 PM IST

ಕೆಂಪು ಕೋಟೆ ಬಳಿ ನಡೆದ ಹಿಂಸಾಚಾರದಲ್ಲಿ ಅನ್ಯ ಶಕ್ತಿಗಳ ಕೈವಾಡ : HDK

ಬೆಂಗಳೂರು :ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಗಲಭೆ ಪ್ರಕರಣದಲ್ಲಿ ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಕೆಂಪು ಕೋಟೆ ಬಳಿ ನಡೆದ ಗಲಭೆಯ ಕುರಿತು ಟ್ವೀಟ್ ಮಾಡಿದ ಅವರು ರೈತರ ಐತಿಹಾಸಿಕ ಹೋರಾಟದ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ. ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಸೇರಿದ್ದಾರೆ, ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದೂ ಸತ್ಯ ಎಂದಿದ್ದಾರೆ.

ನಿನ್ನೆಯ ಘಟನೆಗೆ ರೈತರನ್ನು ದೂಷಿಸುವಂಥ ಹೇಳಿಕೆಗಳು, ಅಭಿಪ್ರಾಯಗಳನ್ನು ಕೇಳಿ ಮನಸ್ಸಿಗೆ ನೋವಾಗಿದೆ. ಘಟನೆ ಯಾಕೆ ಆಯಿತು, ಹೇಗೆ ಆಯಿತು, ಘಾತಕ ಶಕ್ತಿಗಳು ಹೇಗೆ ಬಂದವು ಎಂಬುದರ ಕುರಿತು ತನಿಖೆಯಾಗದೇ, ರೈತರನ್ನು ದೂಷಣೆ ಮಾಡುವುದು ಅಕ್ಷಮ್ಯ. ಕೆಂಪು ಕೋಟೆಯ ಬಳಿ ನಡೆದ ಹಿಂಸಾಚಾರದ ಕಳಂಕವನ್ನು ದೇಶದ ಯಾರೊಬ್ಬರೂ ರೈತನ ತಲೆಗೆ ಕಟ್ಟಬಾರದು ಎಂದರು.

ಇದನ್ನೂ ಓದಿ:ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಮತ್ತೆ ಎದೆನೋವು; ಹಾಸ್ಪತ್ರೆಗೆ ದಾಖಲು

ಈಗಾಗಲೇ ನಾಲ್ವರು ರೈತ ಮುಖಂಡರನ್ನು ಕೊಲ್ಲಲೆಂದು ಸಂಚು ನಡೆಸಿದ ಘಟನೆಗಳು ನಡೆದು ಹೋಗಿದೆ. ಅದಕ್ಕೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಹಿಡಿದು ರೈತರೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ರೈತರ ಹೋರಾಟವನ್ನೇ ತಲೆಕೆಳಗು ಮಾಡಲು ಪ್ರಯತ್ನಗಳು ನಡೆಯದೇ ಇರುತ್ತವೆಯೇ? ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ ಎಂದಿದ್ದಾರೆ.

ಇದು ಸೂಕ್ತ ಮಾತುಕತೆ ಮೂಲಕ ಬಗೆಹರಿಯುವ ಸಮಸ್ಯೆ. ಸುಪ್ರೀಂ ಕೋರ್ಟ್‌ ಕೂಡ ಇದನ್ನೇ ಹೇಳಿದೆ. ಆದರೆ, ಹಾಗೆ ಆಗದೇ ಇರುವುದು ಬೇಸರದ ಸಂಗತಿ. ಈ ಘಟನೆಯನ್ನು ಆಡಳಿತದಲ್ಲಿರುವವರು ತಪ್ಪಿಸಬಹುದಿತ್ತು. ಘಟನೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಈಗಲೂ ಕಾಲ ಮಿಂಚಿಲ್ಲ. ಸೌಹಾರ್ದ ಮಾರ್ಗ ಇದಕ್ಕೆ ಮದ್ದು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ .

ಟಾಪ್ ನ್ಯೂಸ್

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.