ಕ‌ಲಬುರಗಿ: ವಿವಿಧ ವರ್ಗದವರಿಗೂ ಕೋವಿಡ್‌ ಲಸಿಕೆ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೂರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ತಲಾ 1 ಲಕ್ಷ ರೂ. ಗಳ ಚೆಕ್‌ ವಿತರಿಸಲಾಯಿತು

Team Udayavani, Jan 27, 2021, 3:18 PM IST

ಕ‌ಲಬುರಗಿ: ವಿವಿಧ ವರ್ಗದವರಿಗೂ ಕೋವಿಡ್‌ ಲಸಿಕೆ

ಕ‌ಲಬುರಗಿ: ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಸರ್ಕಾರದ ಮಾರ್ಗಸೂಚಿಯಂತೆ ವಿವಿಧ ವರ್ಗದವರಿಗೆ ಕೋವಿಡ್‌ ಲಸಿಕೆ ನೀಡಲಾಗುತ್ತದೆ. ಈ ಮೂಲಕ ಕೋವಿಡ್‌ ಮಹಾಮಾರಿ ಕೆಲವೇ ದಿನಗಳಲ್ಲಿ ಕಣ್ಮರೆಯಾಗಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ದೃಢ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ದೇಶದ 72ನೇ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಪರೇಡ್‌ ಕಮಾಂಡರ್‌ ಮತ್ತು ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ ನೀಡುವ ಕೋವಿಡ್‌ ಲಸಿಕೆ ಕಾರ್ಯ ಮುಂದುವರೆದಿದೆ. ಜನವರಿ 16ರಿಂದ 25 ರವರೆಗೆ ತಾಲ್ಲೂಕು ಆಸ್ಪತ್ರೆಗಳು ಸೇರಿ 108 ಕೇಂದ್ರಗಳಲ್ಲಿ 9489 ಆರೋಗ್ಯ ಸಿಬ್ಬಂದಿ ಪೈಕಿ 5350 ಫಲಾನುಭವಿಗಳಿಗೆ ಕೋವಿಡ್‌ ಲಸಿಕೆ ಹಾಕುವ ಮೂಲಕ ಶೇ.56 ಗುರಿ ಸಾ ಧಿಸಲಾಗಿದೆ. ಮುಂದಿನ ದಿನಗಳಲ್ಲಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆಯೂ ವಿಮಾನ ಸಂಚಾರ ಶುರುವಾಗಲಿದ್ದು, ವಿಮಾನ ನಿಲ್ದಾಣ  ಪ್ರಾರಂಭದಿಂದ ಕಲ್ಯಾಣ ಕರ್ನಾಟಕ ಭಾಗದ ಕೈಗಾರಿಕಾ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಸಚಿವ ಕತ್ತಿ ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 2013-14ನೇ ಸಾಲಿನಿಂದ 2020-21ನೇ ಸಾಲಿನವರೆಗೆ 7,385 ಕೋಟಿ ರೂ.ಗಳ ಅನುದಾನ ಹರಿದು ಬಂದಿದ್ದು, ಇದರಲ್ಲಿ 5,299 ಕೋಟಿ ರೂ. ಬಿಡುಗಡೆಯಾಗಿದೆ. ಈ ಪೈಕಿ 5,279 ಕೋಟಿ ರೂ. ಅನುದಾನ ವೆಚ್ಚವಾಗಿದ್ದು, ಬಿಡುಗಡೆಯಾದ ಅನುದಾನಕ್ಕೆ ಶೇ.100 ರಷ್ಟು ಪ್ರಗತಿ ಸಾ ಧಿಸಲಾಗಿದೆ ಎಂದರು.

ಇನ್ನು, ಕಳೆದ ಜೂನ್‌ 9ರಂದು ಅಸ್ತಿತ್ವಕ್ಕೆ ಬಂದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘವು ಕೃಷಿ, ಶಿಕ್ಷಣ, ಸ್ವಯಂ ಉದ್ಯೋಗ ಕ್ಷೇತ್ರದ ಬೆಳವಣಿಗೆಗಾಗಿ ಟೊಂಕಕಟ್ಟಿ ನಿಂತಿದೆ. ಐಎಎಸ್‌, ಕೆಎಎಸ್‌ ಆಕಾಂಕ್ಷಿಗಳಿಗಾಗಿ ಉಚಿತ ತರಬೇತಿ ನೀಡುವ ಕಾಯಕದಲ್ಲಿ ತೊಡಗಿದೆ. ಕೌಶಾಲ್ಯಾಭಿವೃದ್ಧಿಗೆ ಒತ್ತು ನೀಡಲಾಗುತ್ತಿದ್ದು, ಇತ್ತೀಚೆಗೆ ಸಂಘದ ಕಾರ್ಯ ಚಟುವಟಿಕೆಗಳ ಮಾಹಿತಿ ನೀಡಲು ವೆಬ್‌ಸೈಟ್‌ ತೆರೆಯಲಾಗಿದೆ. ಈ ಭಾಗದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿದೆ ಎಂದು ವಿವರಣೆ ನೀಡಿದರು.

ಕಲಬುರಗಿಯಲ್ಲಿ ವಿಮಾನ ನಿಲ್ದಾಣ ಈ ಭಾಗಕ್ಕೆ ಕಲಶವಿದ್ದಂತೆ. ಬೆಂಗಳೂರು, ದೆಹಲಿ (ಹಿಂಡನ್‌), ತಿರುಪತಿಗಳಿಗೆ ವಿಮಾನಗಳ ಹಾರಾಟ ನಡೆದಿದ್ದು,
ಇದರಿಂದ ಈ ಭಾಗದ ವ್ಯಾಪಾರ-ವಹಿವಾಟು ಮತ್ತಷ್ಟು ಚಿಗುರಲಿದೆ. ಈ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ತರಬೇತಿ ಕೇಂದ್ರ ಶುರುವಾಗಿದ್ದು,
ಪೈಲಟ್‌ ಆಗಬೇಕೆಂದಿದ್ದ ಈ ಭಾಗದ ಆಕಾಂಕ್ಷಿಗಳ ಕನಸಿಗೆ ರೆಕ್ಕೆ ಮೂಡಿದೆ ಎಂದು ಸಚಿವ ಕತ್ತಿ ತಿಳಿಸಿದರು.

ಭಾರತದ 72ನೇ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಪರೇಡ್‌ ಕಮಾಂಡರ್‌ ಕಲಬುರಗಿ ಆರ್‌.ಪಿ.ಐ. ಡಿ.ಎ.ಆರ್‌. ಹನುಮಂತ ನಾಯಕ
ಹಾಗೂ ಸಹಾಯಕ ಪರೇಡ್‌ ಕಮಾಂಡರ್‌ ಆರ್‌. ಎಸ್‌.ಐ., ಕೆ.ಎಸ್‌.ಆರ್‌.ಪಿ. ನಾಗೇಂದ್ರ ಕುಂಬಾರ ನೇತೃತ್ವದಲ್ಲಿ ನಡೆದ ಪರೇಡ್‌ನ‌ಲ್ಲಿ ಡಿ.ಎ.ಆರ್‌.,
ಕೆ.ಎಸ್‌.ಆರ್‌.ಪಿ., ತಾತ್ಕಾಲಿಕ ಪೊಲೀಸ್‌ ತರಬೇತಿ ಶಾಲೆ, ಸಿವಿಲ್‌ ಜಿಲ್ಲಾ ತಂಡ, ಸಿವಿಲ್‌ ನಗರ ತಂಡ, ಕೇಂದ್ರ ಕಾರಾಗೃಹ, ಹೋಮ್‌ಗಾರ್ಡ್‌, ಅಬಕಾರಿ
ಇಲಾಖೆ, ಅರಣ್ಯ ಕಾರ್ಯಕಡೆ, ಅಗ್ನಿ ಶಾಮಕ ದಳ ಹಾಗೂ ಪೊಲೀಸ್‌ ವಾದ್ಯ ವೃಂದ ಸೇರಿದಂತೆ ಒಟ್ಟು 11 ತುಕಡಿಗಳಿಂದ ಸಚಿವರು ಪೆರೇಡ್‌ ಗೌರವ
ವಂದನೆ ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ವಿಠಲ ಬೀರಣ್ಣ ಪೂಜಾರಿ, ವಿಜಯಕುಮಾರ ಪ್ರಭುರಾವ್‌ ತಡಕಲ್‌, ಶಂಕರೆಪ್ಪ ರಾಮಶೆಟ್ಟಪ್ಪ ಹುಗ್ಗಿ, ಶಿವಲಿಂಗಪ್ಪ ಬಸಲಿಂಗಪ್ಪ ಪಾಟೀಲ ಹಾಗೂ ವೆಂಕಟರಾವ ಅರ್ಜುನ ಶಿಂಧೆ ಅವರನ್ನು ಸನ್ಮಾನಿಸಲಾಯಿತು. ಪತ್ರಕರ್ತರಾದ ಜಯತೀರ್ಥ ಪಾಟೀಲ, ಸಂಜಯ ಚಿಕ್ಕಮಠ, ಕ್ಯಾಮರಾಮನ್‌ ವಿಜಯಕುಮಾರ ಗಾಜರೆ, ಪತ್ರಿಕಾ ಛಾಯಾಗ್ರಾಹಕ ಅರುಣಕುಮಾರ ಕುಲಕರ್ಣಿ ಅವರನ್ನೂ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಅತ್ಯುತ್ತಮ ಸೇವೆ ಸಲ್ಲಿಸಿದ ಜಿಲ್ಲೆಯ ಏಳು ಜನ ವೈದ್ಯಾಧಿ ಕಾರಿಗಳನ್ನು ಸನ್ಮಾನಿಸಲಾಯಿತು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೂರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ತಲಾ 1 ಲಕ್ಷ ರೂ.
ಗಳ ಚೆಕ್‌ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ 2020-21ನೇ ಸಾಲಿನಲ್ಲಿ ಜಿಲ್ಲಾಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಯ್ಕೆಯಾದ ಜಿಲ್ಲೆಯ 11 ಜನ
ರೈತರನ್ನು ಸಹ ಸನ್ಮಾನಿಸಲಾಯಿತು.

ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ್‌ ರೇವೂರ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಸಂಸದ ಡಾ| ಉಮೇಶ ಜಿ. ಜಾಧವ, ಶಾಸಕ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್‌ ಸದಸ್ಯರಾದ ಸುನೀಲ್‌ ವಲ್ಲಾಪುರೆ, ಶಶೀಲ ನಮೋಶಿ, ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದು ಪಾಟೀಲ, ಜಿಪಂ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ತಾಪಂ ಅಧ್ಯಕ್ಷ ಶಿವಾರಾಜ ಸಜ್ಜನ್‌, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್‌ ರದ್ದೇವಾಡಗಿ, ನಗರಾಧ್ಯಕ್ಷ ಸಿದ್ಧಾಜೀ ಪಾಟೀಲ್‌, ಕುಡಾ ಅಧ್ಯಕ್ಷ ದಯಾಘನ್‌ ಧಾರವಾಡಕರ್‌ ಉಪಸ್ಥಿತರಿದ್ದರು.

ಪ್ರಾದೇಶಿಕ ಆಯುಕ್ತ ಡಾ| ಎನ್‌.ವಿ. ಪ್ರಸಾದ, ಈಶಾನ್ಯ ವಲಯದ ಪೊಲೀಸ್‌ ಮಹಾ ನಿರೀಕ್ಷಕ ಮನೀಷ್‌ ಖರ್ಬಿಕರ್‌, ನಗರ ಪೊಲೀಸ್‌ ಆಯುಕ್ತ
ಎನ್‌. ಸತೀಶಕುಮಾರ್‌, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮಾರಾವ್‌ ಎಂ., ಜಿಲ್ಲಾ ಧಿಕಾರಿ ವಿ.ವಿ. ಜ್ಯೋತ್ಸ್ನಾ,
ಜಿಪಂ ಸಿಇಒ ಡಾ| ಪಿ. ರಾಜಾ, ಎಸ್‌ಪಿ ಡಾ| ಸಿಮಿ ಮರಿಯಮ್‌ ಜಾರ್ಜ್‌ ಇದ್ದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.