ಗ್ರಾಪಂ ಮೀಸಲಾತಿ ನಿಗದಿಗೆ ಕ್ಷಣಗಣನೆ

ಇಂದಿನಿಂದಲೇ ಮೀಸಲಾತಿ ಪ್ರಕ್ರಿಯೆ ಆರಂಭ

Team Udayavani, Jan 27, 2021, 3:51 PM IST

27-17

ದಾವಣಗೆರೆ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಸದಸ್ಯರ ಚಿತ್ತ ಈಗ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾ ನಗಳಿಗೆ ಯಾವ ಮೀಸಲಾತಿ ನಿಗದಿಯಾಗಲಿದೆ ಎಂಬುದರ ಮೇಲೆ ನೆಟ್ಟಿದ್ದು ಇಂದಿನಿಂದಲೇ (ಜ. 27ರಿಂದ) ಜಿಲ್ಲೆಯ ವಿವಿಧ ತಾಲೂಕುಗಳ ಮೀಸಲಾತಿ ನಿಗದಿ ಸಭೆಗಳು ಶುರುವಾಗಲಿದೆ. ಗ್ರಾಪಂ ಗದ್ದುಗೆ ಆಕಾಂಕ್ಷಿಗಳಲ್ಲಿ ಮೀಸಲಾತಿ ನಿಗದಿ ಭಾರಿ ಕುತೂಹಲ ಕೆರಳಿಸಿದೆ.

ಚುನಾವಣಾ ಆಯೋಗವು ತಾಲೂಕಾವಾರು ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ವರ್ಗೀಕರಿಸಿ ಈಗಾಗಲೇ ಆದೇಶ ಹೊರಡಿಸಿದ್ದು ಜಿಲ್ಲೆಯ 195ಗ್ರಾಪಂಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಲಾಗುತ್ತಿದೆ. ಇತ್ತೀಚೆಗಷ್ಟೇ ಚುನಾವಣೆಯಲ್ಲಿ ಗೆದ್ದಿರುವ ಸದಸ್ಯರು, ಈ ಹಿಂದಿನ ಅವಧಿಯಲ್ಲಿ ತಮ್ಮ ಪಂಚಾಯಿತಿಗೆ ಯಾವ ಮೀಸಲಾತಿ ಬಂದಿತ್ತು. ಈ ಬಾರಿ ಯಾವುದು ಬರಬಹುದು ಎಂಬ
ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

ಆಯೋಗದ ಮೀಸಲಾತಿ ವರ್ಗೀಕರಣದಲ್ಲಿ ಜಿಲ್ಲೆಯ 195ಗ್ರಾಪಂಗಳಲ್ಲಿ 99ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದ್ದರೆ, 96ಸ್ಥಾನಗಳು ಸಾಮಾನ್ಯವಾಗಿವೆ. 41ಪಂಚಾಯಿತಿಗಳು ಎಸ್‌ಸಿ ವರ್ಗಕ್ಕೆ ಮೀಸಲಾಗಿದ್ದು ಇದರಲ್ಲಿ 22ಸ್ಥಾನಗಳು ಮಹಿಳೆಯರಿಗೆ ಮೀಸಲಿವೆ. ಎಸ್‌ಟಿ ವರ್ಗಕ್ಕೆ 24ಸ್ಥಾನಗಳಿದ್ದು ಮಹಿಳೆಯರಿಗೆ 13ಸ್ಥಾನಗಳು ಮೀಸಲಿವೆ. ಹಿಂದುಳಿದ ಅ ವರ್ಗಕ್ಕೆ 27ಸ್ಥಾನಗಳು ಮೀಸಲಿದ್ದು ಇದರಲ್ಲಿ 14ಸ್ಥಾನಗಳು ಮಹಿಳೆಯರಿಗೆ ಮೀಸಲಿವೆ. ಹಿಂದುಳಿದ ಬ ವರ್ಗದಲ್ಲಿ ಆರು ಸ್ಥಾನಗಳಿದ್ದು ಇದರಲ್ಲಿ ನಾಲ್ಕು ಸ್ಥಾನಗಳು ಮಹಿಳೆಯರಿಗೆ ಮೀಸಲಿವೆ. ಸಾಮಾನ್ಯ ವರ್ಗಕ್ಕೆ ಮೀಸಲಿರುವ 97ಸ್ಥಾನಗಳಲ್ಲಿ 46ಸ್ಥಾನಗಳು ಮಹಿಳೆಯರಿಗೆ ಮೀಸಲಿವೆ.

ಮಹಿಳೆಯರಿಗೆ ಆದ್ಯತೆ: ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ವರ್ಗೀಕರಣ ಒಂದೇ ರೀತಿ ಇರುವುದರಿಂದ ವರ್ಗೀಕರಣ ಗ್ರಾ.ಪಂ.ವಾರು
ಮೊದಲು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ನಿಗದಿಗೊಳಿಸಲಾಗುತ್ತದೆ. ಸಾಧ್ಯವಾದಷ್ಟು ಅಧ್ಯಕ್ಷ ಸ್ಥಾನಕ್ಕೆ ನಿಗದಿಯಾದ ಮೀಸಲಾತಿಯೇ ಉಪಾಧ್ಯಕ್ಷ ಸ್ಥಾನಕ್ಕೆ ಬರದಂತೆ ನೋಡಿಕೊಳ್ಳಲು ಆಯೋಗ ಸೂಚಿಸಿದೆ. ಆಯೋಗದ ಸೂಚನೆಯಂತೆ ಕೆಲವು ವರ್ಗಗಳಲ್ಲಿ ಶೇ.50ಕ್ಕಿಂತ ಕಡಿಮೆ ಇಲ್ಲದಂತೆ ಮಹಿಳೆಯರಿಗೆ ಸ್ಥಾನಗಳನ್ನು ಮೀಸಲಿರಿಸಲೇ ಬೇಕಾಗಿದೆ. ಅಲ್ಪಸ್ಥಾನಗಳಿರುವ ವರ್ಗದಲ್ಲಿ ಬೆಸ ಸಂಖ್ಯೆಯ
ಸ್ಥಾನಗಳಿರುವಲ್ಲಿ ಮಹಿಳೆಯರಿಗೆ ಆದ್ಯತೆ ನೀಡಬೇಕಾಗಿದೆ. ಉದಾಹರಣೆಗೆ ಮೂರು ಸ್ಥಾನಗಳಿದ್ದರೆ ಅಲ್ಲಿ ಎರಡು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿರಿಸಬೇಕಿದೆ. ಈ ವರ್ಗಗಳಲ್ಲಿ ಗ್ರಾಪಂ ಗದ್ದುಗೆ ಏರುವ ಕನಸು ಕಾಣುವ ಪುರುಷರಿಗೆ ನಿರಾಸೆಯಾಗುವುದಂತೂ ಖಚಿತ. ಗ್ರಾಪಂ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿಯನ್ನು ಸದಸ್ಯರ ಸಮ್ಮುಖದಲ್ಲಿಯೇ ನಡೆಸಲಾಗುತ್ತದೆ. ತನ್ಮೂಲಕ ಕಮೀಸಲಾತಿ ನಿಗದಿ
ಪಾರದರ್ಶಕವಾಗಿ ನಡೆಯುವುದರಿಂದ ಯಾವುದೇ ಪಕ್ಷ, ಮುಖಮಡರ ಒತ್ತಡಕ್ಕೆ ಇಲ್ಲಿ ಆಸ್ಪದ ಇಲ್ಲ ಎಂಬುದು ಇಲ್ಲಿ ಗಮನಾರ್ಹ.

ಮನವೊಲಿಕೆಗೆ ತಂತ್ರ

ಕೆಲ ಪ್ರಬಲ ಆಕಾಂಕ್ಷಿಗಳು ತಮಗೆ ಅನುಕೂಲವಾಗುವ ಮೀಸಲಾತಿ ಬಂದರೆ ಬೆಂಬಲಿಸುವಂತೆ ಈಗಾಗಲೇ ಸದಸ್ಯರ ಮನವೊಲಿಸುವ ಕಾರ್ಯ ಮುಂದುವರಿಸಿದ್ದಾರೆ. ಇನ್ನು ಕೆಲವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೆಲ ಸದಸ್ಯರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗುವ ಯೋಜನೆಯನ್ನೂ ಹಾಕಿಕೊಂಡಿದ್ದಾರೆ.

ಮೀಸಲಾತಿಗೆ ನಿಗದಿ ಸಭೆ

ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಕ್ರಿಯೆಯು ಗ್ರಾಪಂ ಸದಸ್ಯರ ಸಮಕ್ಷಮ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಾಭದ್ರ ಸಭಾಂಗಣದಲ್ಲಿ ನಡೆಯಲಿದೆ. ಜ. 27ರಂದು ಬೆಳಗ್ಗೆ 10ಗಂಟೆಗೆ ಹರಿಹರ ತಾಲೂಕು, ಮಧ್ಯಾಹ್ನ 2ಗಂಟೆಗೆ ಹೊನ್ನಾಳಿ ತಾಲೂಕು, ಜ. 28ರಂದು ಬೆಳಗ್ಗೆ 10ಗಂಟೆಗೆ ಜಗಳೂರು ತಾಲೂಕು, ಮಧ್ಯಾಹ್ನ 2 ಗಂಟೆಗೆ ದಾವಣಗೆರೆ ತಾಲೂಕು, ಜ.29ರಂದು ಬೆಳಗ್ಗೆ 10ಗಂಟೆಗೆ ನ್ಯಾಮತಿ ತಾಲೂಕು ಹಾಗೂ ಮಧ್ಯಾಹ್ನ 1ಗಂಟೆಗೆ ಚನ್ನಗಿರಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಗಳ
ಮೀಸಲಾತಿ ನಿಗದಿ ಸಭೆ ನಡೆಯಲಿದೆ.

ಎಚ್‌.ಕೆ. ನಟರಾಜ

 

ಓದಿ :     ದೇವೋಭವದಿಂದ ಅತಿಥಿ ತುಮ್‌ ಕಬ್‌ ಜಾವೋಗೆ ವರೆಗೆ…

ಟಾಪ್ ನ್ಯೂಸ್

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.