ಸಂವಿಧಾನದ ಆಶಯ ಈಡೇರಿಸಿ: ಶಶಿಕಲಾ ಜೊಲ್ಲೆ

14,833 ಪ್ರಕರಣಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

Team Udayavani, Jan 27, 2021, 6:22 PM IST

ಸಂವಿಧಾನದ ಆಶಯ ಈಡೇರಿಸಿ: ಶಶಿಕಲಾ ಜೊಲ್ಲೆ

ವಿಜಯಪುರ: ಭಾರತೀಯರ ಸಾಮಾಜಿಕ-ಸಾಂಸ್ಕೃತಿಕ, ಸಾಂಪ್ರದಾಯಿಕ ಆಯಾಮಗಳಿಗೆ ಸರಿ ಹೊಂದಿರುವ ನಮ್ಮ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದೆ. ಸಂವಿಧಾನ ಸ್ವೀಕೃತವಾದ ದಿನವನ್ನು ಗಣರಾಜ್ಯವಾಗಿ ಆಚರಿಸುತ್ತಿದ್ದು, ದೇಶದ ಸಾರ್ವಭೌಮತೆ ಎತ್ತಿ ಹಿಡಿಯಲು ಭಾರತೀಯ ಪ್ರಜೆಗಳು ಕಟಿಬದ್ಧರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದ ಹೊರ ವಲಯದ ತೊರವಿ ಬಳಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ವಿಶ್ವಕ್ಕೆ ಮಾದರಿಯಾದ ಸಂವಿಧಾನ ಕೊಡುಗೆಯಾಗಿ ನೀಡಿದ ಡಾ| ಬಿ.ಆರ್‌. ಅಂಬೇಡ್ಕರ್‌ ಅವರಿಗೆ ಭಾರತೀಯರು ಸದಾ  ಚಿರಋಣಿಯಾಗಿದ್ದೇವೆ ಎಂದರು.

ಸ್ವತಂತ್ರ ಭಾರತಕ್ಕೆ ಸ್ವತಂತ್ರ ಅಧಿಕಾರ ನಡೆಸಲು ಡಾ| ಅಂಬೇಡ್ಕರ್‌ ರಚಿಸಿಕೊಟ್ಟ ಲಿಖೀತ ಸಂವಿಧಾನವನ್ನು ಗಣರಾಜ್ಯವಾದ ಭಾರತ 1950 ರ ಜನವರಿ 26ರಂದು ಸ್ವೀಕೃತಿ ಮಾಡಿತು. ಇದರ ಸ್ಮರಣೆಗಾಗಿ ಪ್ರತಿ ವರ್ಷ ಗಣರಾಜ್ಯೋತ್ಸವವನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸಲಾಗುತ್ತದೆ ಎಂದರು.

ಬಹುಭಾಷೆ, ಬಹುಸಂಸ್ಕೃತಿ ಮತ್ತು ಹಲವು ಧರ್ಮಗಳ ಅನುಯಾಯಿ, ವಿವಿಧ ಸಾಂಸ್ಕೃತಿಗಳ ಆಚರಣೆ ಮತ್ತು ಅನುಕರಣೆಯಲ್ಲಿ ಭಾರತದ ಒಕ್ಕೂಟ ರಾಷ್ಟ್ರದಲ್ಲಿರುವ ಕರ್ನಾಟಕ ವೈವಿಧ್ಯಪೂರ್ಣ-ವರ್ಣಮಯ ಇತಿಹಾಸ ಹೊಂದಿದೆ. ಆದರೆ ಈಚಿನ ವರ್ಷಗಳಲ್ಲಿ ನಿರಂತರವಾಗಿ ಪ್ರಕೃತಿ ವಿಕೋಪಕ್ಕೆ ತುತ್ತಾಗುತ್ತಿರುವ ಕರ್ನಾಟಕದ ಜನಜೀವನ ಕಳವಳಕಾರಿ ಸಂಗತಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

21ನೇ ಶತಮಾನದ ಬಲಿಷ್ಠ ಭಾರತದ ಕನಸು ನನಸಾಗಿಸಲು ಭಾರತೀಯರೆಲ್ಲರೂ ರಾಷ್ಟ್ರೀಯ ಭಾವೈಕ್ಯದೊಂದಿಗೆ ಸಂಪೂರ್ಣ ಸಮರ್ಪಣಾ ಮನೋಭಾವ ಹಾಗೂ ಸಾಂಘಿಕ ದುಡಿಮೆ ಮಾಡಬೇಕಿದೆ. ಕಳೆದ ಸಾಲಿನ ಅತಿವೃಷ್ಟಿ ಹೊಡೆತ, ಕೋವಿಡ್‌-19 ಎಂಬ ಜಾಗತಿಕ ಮಹಾಮಾರಿಯಿಂದ ಜನಸಾಮಾನ್ಯರ ಬದುಕು ಅಲ್ಲೋಲ-ಕಲ್ಲೋಲಗೊಂಡಿದೆ.

ಇಂತಹ ಪ್ರಕ್ಷುಬ್ದ ಸನ್ನಿವೇಶವನ್ನು ನಮ್ಮ ಸರ್ಕಾರ ದೇಶವೇ ಮೆಚ್ಚುವಂತೆ ರಕ್ಷಣಾತ್ಮಕ ಮತ್ತು ಪರಿಣಾಮಕಾರಿಯಾಗಿ ನಿಭಾಯಿಸಿ ಸರ್ವರ ಪ್ರಶಂಸೆಗೆ ಪಾತ್ರವಾಗಿದೆ ಎಂದರು.

ಜಿಲ್ಲೆಯಲ್ಲಿ ಈವರೆಗೆ 2.76 ಲಕ್ಷ ಜನರ ಗಂಟಲು ದ್ರವ ಮಾದರಿ ತಪಾಸಣೆ ನಡೆಸಿದ್ದು, 14,833 ಪ್ರಕರಣಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರಲ್ಲಿ ಶೇ. 98.19 ರೋಗಿಗಳು ಗುಣಮುಖರಾಗಿದ್ದಾರೆ. ಇದೀಗ ಪ್ರಧಾನಿ ಮೋದಿ ಅವರ ಆತ್ಮನಿರ್ಭರ ಭಾರತದ ಪರಿಕಲ್ಪನೆಯಲ್ಲಿ ಯಶಸ್ವಿ ಸಂಶೋಧನೆ ನಡೆಸಿ, ಕೋವಿಡ್‌ ರೋಗಕ್ಕೆ ಕೋವ್ಯಾಕ್ಸಿನ್‌ ಲಸಿಕೆ ಕಂಡು ಹಿಡಿಯಲಾಗಿದೆ. ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 5676 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕುವ ಗುರಿಯಲ್ಲಿ 3755 ಕಾರ್ಯಕರ್ತರಿಗೆ ಲಸಿಕೆ ಹಾಕುವ ಮೂಲಕ ಶೇ. 66.15 ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿದರು.

2020ರ ವೇಳೆ ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ ಬೆಳೆ ಹಾನಿಯಾಗಿದೆ. ನಮ್ಮ ಸರ್ಕಾರ 1.59
ಲಕ್ಷ ರೈತರಿಗೆ 109 ಕೋಟಿ ರೂ. ಪರಿಹಾರ ವಿತರಿಸಿದೆ ಎಂದು ವಿವರಿಸಿದರು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ವೂಡಾ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಜಿಪಂ ಸಿಇಒ ಲಕ್ಷ್ಮೀಕಾಂತರೆಡ್ಡಿ, ಎಸ್ಪಿ ಅನುಪಮ್‌ ಅಗರವಾಲ, ಎಡಿಸಿ ಡಾ| ಔದ್ರಾಮ್‌, ಎಎಸ್ಪಿ ರಾಮ ಅರಸಿದ್ದಿ, ತಹಶೀಲ್ದಾರ್‌ ಮೋಹನಕುಮಾರಿ, ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ ಇದ್ದರು.

ಬಳಿಕ ಪೊಲೀಸ್‌ ಇಲಾಖೆಯ ವಿವಿಧ ವಿಭಾಗಗಳ 6 ತಂಡಗಳು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್‌ಪಿಐ ಶಂಕರಗೌಡ ಚೌಧರಿ ಕವಾಯತು ನಡೆಸಿ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಗೌರವ ವಂದನೆ ಸಲ್ಲಿಸಿದವು.

ಟಾಪ್ ನ್ಯೂಸ್

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.