ಬಿ.ಸಿ.ಪಾಟೀಲ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ : ಉಗ್ರಪ್ಪ ಆರೋಪ
Team Udayavani, Jan 27, 2021, 7:51 PM IST
ಬೆಂಗಳೂರು: ರೈತರನ್ನು ಭಯೋತ್ಪಾದಕರು ಎಂದು ಹೇಳಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಂಸದ ಉಗ್ರಪ್ಪ ಹಾಗೂ ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಯಾವಾಗ ಭಯೋತ್ಪಾದಕರಾದರು. ಕೃಷಿ ಸಚಿವರಾಗಿ ಈ ರೀತಿಯ ಮಾತು ಆಡಬಹುದೇ ಎಂದು ಪ್ರಶ್ನಿಸಿದರು.
ಬಿ.ಸಿ.ಪಾಟೀಲ್ ರೈತರ ಕ್ಷಮೆಯಾಚಿಸಬೇಕು. ಸಂಪುಟದಿಂದ ಅವರನ್ನು ಕೈ ಬಿಡಬೇಕು. ರೈತ ಸಮುದಾಯಕ್ಕೆ ಅವರು ಅವಮಾನ ಮಾಡಿದ್ದಾರೆ ಎಂದು ದೂರಿದರು.
ರೈತರ ಹೆಸರಿಗೆ ಮಸಿ
ದೆಹಲಿ ಕೆಂಪುಕೋಟೆಯಲ್ಲಿ ಪ್ರತ್ಯೇಕ ಧ್ವಜ ಹಾರಿಸಿದವರು ಮೂಲ ಬಿಜೆಪಿಗರು. ಸಾಮಾಜಿಕ ಜಾಲತಾಣದಲ್ಲಿ ಅದು ವೈರಲ್ ಆಗಿದೆ. ಆದರೂ ರೈತರ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ನಡೆದಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಬಿಡಬೇಕು. ಮೂರೂ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಸುಪ್ರೀಂಕೋರ್ಟ್ ಕೂಡ ಎಚ್ಚರಿಕೆ ನೀಡಿದರೂ ಬೆಲೆ ನೀಡಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ:ಸೇವೆಯ ಜೊತೆ ಪ್ರಾಮಾಣಿಕತೆ ಮೆರೆದ 108 ಆಂಬ್ಯುಲೆನ್ಸ್ ಸಿಬ್ಬಂದಿ
ಈ ಹಿಂದೆ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ಪ್ರತಿಭಟನೆ ನಡೆದಿತ್ತು. ಇದೀಗ ಅದಾನಿ,ಅಂಬಾನಿ ಕಂಪನಿನ ವಿರುದ್ಧ ನಡೆಯುತ್ತಿದೆ. ಎರಡನೇ ಸ್ವಾತಂತ್ರ್ಯ ಸಂಗ್ರಾಮ ಪ್ರಾರಂಭವಾಗಿದೆ. ದೆಹಲಿ ಪೊಲೀಸ್ ಕೇಂದ್ರದ ಕಂಟ್ರೋಲ್ ನಿಯಂತ್ರಣದಲ್ಲಿದೆ. ಆದರೂ ಮಂಗಳವಾರ ಯಾಕೆ ನಿಯಂತ್ರಣಕ್ಕೆ ತೆಗೆದುಕೊಳ್ಳಲಿಲ್ಲ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಸಕ್ರಮಕ್ಕೆ ಸರ್ಕಾರ ಹೊರಟಿದೆ. ಆಡಳಿತ ನಡೆಸುವವರಿಗೆ ಅರಿವು ಇದೆಯೇ? ಬೇಲಿಯೇ ಹೊಲ ಮೇಯ್ದಂತಾಗಿದೆ. ಶಿವಮೊಗ್ಗದಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಕುಟುಂಬದವರೇ ಇದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.