ಫ‌ಲಪ್ರದವಾಗಲಿ ವಿಧಾನಮಂಡಲ ಅಧಿವೇಶನ


Team Udayavani, Jan 28, 2021, 7:13 AM IST

ಫ‌ಲಪ್ರದವಾಗಲಿ ವಿಧಾನಮಂಡಲ ಅಧಿವೇಶನ

ಇಂದಿನಿಂದ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಪ್ರಾರಂಭವಾಗಲಿದೆ. ಸಹಜವಾಗಿಯೇ ವಿಧಾನಮಂಡಲ ಅಧಿವೇಶ ನದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಪರಿಹಾರ, ಪ್ರಮುಖ ಕಾನೂನು ರಚನೆ ಸಹಿತ ಪ್ರಮುಖ ವಿಷಯಗಳ ಬಗ್ಗೆ ಫ‌ಲಪ್ರದ ಚರ್ಚೆಗಳು  ನಡೆಯಲಿ ಎಂಬುದು ಜನಸಾಮಾನ್ಯರ ನಿರೀಕ್ಷೆಯಾಗಿದೆ. ಮೊದಲ ದಿನ ರಾಜ್ಯಪಾಲರು ಜಂಟಿ ಸದನ  ಉದ್ದೇಶಿಸಿ ಮಾತನಾಡಿದ ಅನಂತರ ಇತರೆ ಕಾರ್ಯಕಲಾಪಗಳು ಮುಂದುವರಿಯಲಿವೆ.

ಆದರೆ ಇತ್ತೀಚೆಗಿನ ಅಧಿವೇಶನ ಗಮನಿಸಿದರೆ ಗಲಾಟೆ, ಕೋಲಾಹಲ, ಗದ್ದಲದಲ್ಲೇ ಕಲಾಪ ಮುಗಿಯುತ್ತಿದೆ. ಯಾವುದೇ ವಿಷಯ ಅಥವಾ ಯೋಜನೆಗಳ ಕುರಿತು ಸಮಗ್ರ ಚರ್ಚೆ, ಪರ-ವಿರೋಧ ಅಭಿಪ್ರಾಯ ಆಲಿಸುವಿಕೆ, ಮನವರಿಕೆ ಕೆಲಸವೇ ಆಗುತ್ತಿಲ್ಲ.

ಒಂದೆಡೆ ವಿಪಕ್ಷ ವಿರೋಧಿಸಬೇಕೆಂಬ ಕಾರಣಕ್ಕಾಗಿಯೇ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದರೆ, ಇನ್ನೊಂದೆಡೆ ಬಹುಮತ ಇದೆ ಎನ್ನುವ ಕಾರಣಕ್ಕೆ ಆಡಳಿತ ಪಕ್ಷ ಧ್ವನಿಮತದ ಮೂಲಕ ಅಂಗೀಕಾರ ಮಾಡಿಕೊಂಡು ನಾವು ಮಾಡಿದ್ದೇ ಸರಿ ಎಂಬ ವರ್ತನೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಿಯಲ್ಲ.  ಮಹತ್ವದ ಮಸೂದೆಗಳ ವಿಚಾರದಲ್ಲೂ ಇದೇ ರೀತಿಯ ತೀರ್ಮಾನ ಆಗುತ್ತಿದೆ. ಜತೆಗೆ ಕೆಲವು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರವಾದರೆ ಪರಿಷತ್‌ನಲ್ಲಿ ಅಂಗೀಕಾರ ವಾಗದೆ ವಾಪಸ್‌ ಕಳುಹಿಸಿದ್ದೂ ಇದೆ.

ಕಲಾಪ ಸಲಹಾ ಸಮಿತಿಯಲ್ಲಿ ಎಲ್ಲ ಪಕ್ಷದ ನಾಯಕರು ಕುಳಿತು ಚರ್ಚಿಸಿದರೂ ಸದನದಲ್ಲಿ ಒಮ್ಮತ ಅಥವಾ ಸಹಮತ ಕಂಡುಬರು ವುದಿಲ್ಲ. ಇದರಿಂದ ಗದ್ದಲ, ಕೋಲಾಹಲವುಂಟಾಗಿ ಸದನ ಮುಂದೂಡಿಕೆಯಾಗುವುದು ಸಾಮಾನ್ಯವಾಗಿದೆ. ಇಡೀ ದಿನದ ಕಲಾಪದಲ್ಲಿ ಒಂದೆರಡು ಗಂಟೆ ಮಾತ್ರ ಚರ್ಚೆ ನಡೆದದ್ದನ್ನೂ ನೋಡಿದ್ದೇವೆ. ಇಷ್ಟಕ್ಕೆ ಅಧಿಕಾರಿಗಳನ್ನು ಗುಡ್ಡೆ ಹಾಕಿಕೊಂಡು ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಬೇಕಾ ಎನ್ನುವ ಪ್ರಶ್ನೆ ಈ ಕಾರಣಕ್ಕಾಗಿಯೇ ಆಗಾಗ ಎದುರಾಗುತ್ತಿರುವುದು. ಈ ಬಗ್ಗೆ ಆಡಳಿತ ಹಾಗೂ ಪ್ರತಿಪಕ್ಷ ಆತ್ಮಾವಲೋಕನ ಮಾಡಿಕೊಳ್ಳಬೇಕು.

ವರ್ಷಕ್ಕೆ ಕನಿಷ್ಠ 60 ದಿನ ಅಧಿವೇಶನ ನಡೆಸಬೇಕು ಎಂಬ ತೀರ್ಮಾನವಾಗಿದೆ. ಆದರೆ 2002ರಿಂದ ಇದುವರೆಗೂ ಅದು ಪಾಲನೆಯಾಗಿಲ್ಲ. ಈ ವರ್ಷವಾದರೂ 60 ದಿನ ಕಲಾಪ ನಡೆಯುವಂತಾಗಲಿ. ರಾಜ್ಯದ ಆರ್ಥಿಕ ಸ್ಥಿತಿಗೆ ಕೋವಿಡ್‌ ಸಮಯದಲ್ಲಿ ಎದುರಾಗಿರುವ ಸಂಕಷ್ಟ ಅಷ್ಟಿಷ್ಟಲ್ಲ. ಇನ್ನು ಲಾಕ್‌ಡೌನ್‌ ಸಮಯದಲ್ಲಿ, ಅನಂತರದ ನಿರ್ಬಂಧಗಳು ಹಾಗೂ ಆರ್ಥಿಕ ಕೊರತೆಯಿಂದಾಗಿ ಅನೇಕ ಅಭಿವೃದ್ಧಿ ಯೋಜನೆಗಳೂ ಅನಷ್ಠಾನಕ್ಕೆ ಬರದೇ ನಿಂತಿವೆ. ಆಡಳಿತ ಪಕ್ಷ ಹಾಗೂ ವಿಪಕ್ಷಗಳು  ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಕಾನೂನು, ಯೋಜನೆಗಳ ವಿಚಾರದಲ್ಲಿ ಚರ್ಚೆ, ಪರ-ವಿರೋಧ ಅಭಿಪ್ರಾಯ ಎಲ್ಲದಕ್ಕೂ ಅವಕಾಶ ಇರುವಂತೆ ಮಾಡಿ, ಅಂತಿಮವಾಗಿ ಜನಹಿತಕ್ಕಾಗಿ ಸರ್ವಸಮ್ಮತ ನಿರ್ಧಾರ ಕೈಗೊಳ್ಳಬೇಕು. ಅಧಿವೇಶನ ಎನ್ನುವುದು ಬಲಪ್ರದರ್ಶನದ ಅಖಾಡವಾಗದಿರಲಿ. ಇಲ್ಲಿ ಯಾರೂ ಸಹ ಸೋಲು-ಗೆಲುವು ಎಂದು ಭಾವಿಸಬೇಕಿಲ್ಲ. ಜನರ ಸಮಸ್ಯೆಗಳಿಗೆ ಪರಿಹಾರ ಮುಖ್ಯ.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.