ಮಾರಕಾಸ್ತ್ರ ಹಿಡಿದು ಯುವಕರಿಗೆ ಥಳಿತ, ದರೋಡೆ: ಆರು ಮಂದಿ ಖದೀಮರ ಸೆರೆ
Team Udayavani, Jan 28, 2021, 10:10 AM IST
ಕಲಬುರಗಿ: ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಸಾರ್ವಜನಿಕರನ್ನು ಹೆದರಿಸಿ, ಬೆದರಿಸಿ ದರೋಡೆ ಮಾಡುತ್ತಿದ್ದ ಆರು ಮಂದಿ ದರೋಡೆಕೋರರನ್ನು ಕಲಬುರಗಿ ನಗರ ರೌಡಿ ನಿಗ್ರಹ ಪಡೆಯ ಪೊಲೀಸರು ಬಂಧಿಸಿದ್ದಾರೆ.
ಮಿರ್ಜಾ ಬೇಗ್, ಮಿರ್ಜಾ ಸಲ್ಮಾನ್, ಮಹಮ್ಮದ್ ರಫೀಕ್, ಶೇಖ್ ವಸೀಂ, ಮಹಮ್ಮದ್ ಜುಬೇರ್, ಮಾಜೀದ್ ಎಂಬುವವರೇ ಬಂಧಿತ ದರೋಡೆಕೋರರು.
ಇದನ್ನೂ ಓದಿ:ಶಿವಮೊಗ್ಗ: ಯುವಕರಿಬ್ಬರಿಗೆ ಚಾಕು ಇರಿತ, ಓರ್ವ ಸಾವು- ಇನ್ನೊಬ್ಬನ ಸ್ಥಿತಿ ಗಂಭೀರ
ದರೋಡೆ, ಲ್ಯಾಂಡ್ ಡೀಲ್ ಮಾಡುತ್ತಿದ್ದ ಈ ಖತರ್ನಾಕ ಖದೀಮರು, ಬಿಲ್ಡಪ್ ಕೊಡಲು ಅನೇಕರನ್ನು ಥಳಿಸಿ ವಿಡಿಯೋ ಮಾಡಿಕೊಂಡಿದ್ದರು. ಅಲ್ಲದೇ, ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು, ಕುಣಿಯುತ್ತಾ ವಿಡಿಯೋ ಮಾಡಿಸಿಕೊಳ್ಳುತ್ತಿದ್ದರು.
ಇತ್ತೀಚೆಗೆ ಯುವಕನೋರ್ವನನ್ನು ಹಿಗ್ಗಾಮುಗ್ಗಾ ಥಳಿಸಿರುವ ದುಷ್ಕರ್ಮಿಗಳು, ಆತನ ತಲೆ ಕೆಳಗೆ, ಕೈ-ಕಾಲು ಮೇಲೆ ಮಾಡಿ ಹಿಡಿದು ಮನಸೋ ಇಚ್ಛೆ ಥಳಿಸಿ, ವಿಡಿಯೋ ಮಾಡಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಇವರುಗಳು ಬುಧವಾರ ರಾತ್ರಿ ತಾವರಗೇರಾ ರಸ್ತೆಯಲ್ಲಿ ದರೋಡೆ ಹೊಂಚು ಹಾಕಿದ್ದಾರೆ ಎಂಬ ಮಾಹಿತಿ ಬಂದಿತ್ತು. ಈ ಬಗ್ಗೆ ತಕ್ಷಣವೇ ಕಾರ್ಯಾಚರಣೆಗಿಳಿದ ರೌಡಿ ನಿಗ್ರಹ ದಳದ ಪಿಎಸ್ಐ ವಾಹಿದ್ ಕೋತ್ವಾಲ್ ನೇತೃತ್ವದ ಪೊಲೀಸರ ತಂಡ, ಆರು ಮಂದಿ ದುರುಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ: ಬಸ್ ನಿರ್ವಾಹಕನಿಗೆ ಚೂರಿ ಇರಿದ ದುಷ್ಕರ್ಮಿಗಳು: ಸುರತ್ಕಲ್ ಪರಿಸರದಲ್ಲಿ ಬಿಗಿ ಭದ್ರತೆ
ಬಂಧಿತರಿಂದ ಎರಡು ತಲವಾರ್, ಮೂರು ಲಾಂಗ್, ಖಾರದ ಪುಡಿ, ಹಗ್ಗ ಜಪ್ತಿ ಮಾಡಲಾಗಿದೆ. ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.