ಅಕ್ರಮ ಗಣಿಗಾರಿಕೆಗೆ ಕಾಂಗ್ರೆಸ್‌ ಸರ್ಕಾರ ಕಾರಣ


Team Udayavani, Jan 28, 2021, 12:46 PM IST

Congress is responsible for illegal mining

ಮದ್ದೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಾಲ್ತಿಯಲ್ಲಿರುವ ಅಕ್ರಮ ಗಣಿಗಾರಿಕೆ ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಪಕ್ಷವೇ ಹುಟ್ಟು ಹಾಕಿರುವ ಕರ್ಮಕಾಂಡ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ಸಂಸದ ನಳೀನ್‌ಕುಮಾರ್‌ ಕಟೀಲ್‌ ಆರೋಪಿಸಿದರು.

ಮದ್ದೂರು ಮಾರ್ಗವಾಗಿ ಚಾಮರಾಜ ನಗರ ಜಿಲ್ಲೆಗೆ ತೆರಳುವ ಮಾರ್ಗಮಧ್ಯೆ ಬಿಜೆಪಿ ಮುಖಂಡ ಮನ್‌ಮುಲ್‌ ನಿರ್ದೇ ಶಕ ಎಸ್‌.ಪಿ.ಸ್ವಾಮಿ ಮತ್ತು ಸ್ಥಳೀಯ ಬಿಜೆಪಿ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿರುವಂತೆಬಿ.ಎಸ್‌. ಯಡಿಯೂರಪ್ಪ ನೇತೃತ್ವದ  ಬಿಜೆಪಿ ಸರ್ಕಾರ ಯಾವುದೇ ಅಕ್ರಮ ಗಣಿಗಾರಿಕೆಗೆ ಆದ್ಯತೆ ನೀಡಿಲ್ಲ. ಈಗಿನ ಅದ್ವಾನಗಳಿಗೆ 5 ವರ್ಷ ಅಧಿಕಾರದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವೇ ಮೂಲ ಕಾರಣ ಎಂದು ಟೀಕಿಸಿದರು.

ರಾಜಕೀಯ ಸ್ವಾರ್ಥಕ್ಕೆ ಹುನ್ನಾರ: ದೆಹಲಿ ಕೆಂಪುಕೋಟೆ ಬಳಿ ಮಂಗಳವಾರ ನಡೆದ ಹಿಂಸಾ ಕೃತ್ಯಗಳಿಗೆ ರೈತರ ಹೆಸರಿನಲ್ಲಿ ವಿರೋಧ ಪಕ್ಷಗಳು ನಡೆಸಿದ ಕುತಂತ್ರವೇ ಕಾರಣ. ಹಿಂದಿನಿಂದಲೂ ನಡೆಯುತ್ತಿದ್ದ ರೈತ ಹೋರಾಟವನ್ನು ಕೆಲ ರಾಜಕೀಯ ಪಕ್ಷಗಳು ಸ್ವಾರ್ಥಕ್ಕೆ ಬಳಸಿಕೊಳ್ಳುವ ಹುನ್ನಾರ ನಡೆಸಿದ್ದಾರೆ. ರೈತ ಹೋರಾಟದ ಮಧ್ಯೆ ಸಿಲುಕಿ ಕಾಂಗ್ರೆಸ್‌ ಹಾಗೂ ಇತರೆ ಪಕ್ಷಗಳು ರೈತರನ್ನು ಒಕ್ಕಲೆಬ್ಬಿಸುತ್ತಿದ್ದು, ಹಲವು ರೈತರು ದಾಂಧಲೆ ಹಾಗೂ ಸಂವಿಧಾನದ ವಿರುದ್ಧವಾಗಿ ನಡೆದುಕೊಂಡಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು.

ಇದನ್ನೂ ಓದಿ:ಸವಾಲು ಎದುರಿಸಲು ಕನ್ನಡ ಪ್ರಜ್ಞೆ ಒಗ್ಗೂಡಿಸಿ

ರೈತರ ಹಿತ ಕಾಪಾಡಲು ಬದ್ಧ: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಉತ್ತಮವಾಗಿ ಕಾರ್ಯನಿರ್ವಹಿಸುವ ಜತೆಗೆ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಂಡಿದ್ದಾರೆ. ಎರಡು ವರ್ಷಗಳ ಅವಧಿಯಲ್ಲಿ ಸಕ್ಕರೆ ಕಾರ್ಖಾನೆಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಈ ಮೂಲಕ ಜಿಲ್ಲೆಯ ರೈತರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಮನ್‌ಮುಲ್‌ ನಿರ್ದೇಶಕ ಎಸ್‌. ಪಿ.ಸ್ವಾಮಿ, ಗ್ರಾಪಂ ಸದಸ್ಯ ಶಿವದಾಸ್‌ ಸತೀಶ್‌, ಮುಖಂಡರಾದ ಮನುಕುಮಾರ್‌, ಪುಟ್ಟರಾಜು, ರಾಮೇಗೌಡ, ಕುಮಾರ್‌, ಗೋವಿಂದು, ಚಂದ್ರು ಹಾಜರಿದ್ದರು.

ಟಾಪ್ ನ್ಯೂಸ್

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.