ವಾಲ್ಮೀಕಿ ಜಾತ್ರೆ ಯಶಸ್ವಿಗೊಳಿಸಿ: ತಿಪ್ಪೇಸ್ವಾಮಿ

ನನ್ನಿವಾಳ ವಾಲ್ಮೀಕಿ ವೃತ್ತದಲ್ಲಿ ವಾಲ್ಮೀಕಿ ಜಾತ್ರೋತ್ಸವ ಹಿನ್ನೆಲೆಯಲ್ಲಿ ಸಮುದಾಯದ ಮುಖಂಡರೊಂದಿಗೆ ಸಮಾಲೋಚನಾ ಸಭೆ ನಡೆಯಿತು.

Team Udayavani, Jan 28, 2021, 4:32 PM IST

28-17

ಚಳ್ಳಕೆರೆ: ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಫೆ.8 ಮತ್ತು 9 ಎರಡು ದಿನಗಳ ಕಾಲ ವಾಲ್ಮೀಕಿ ಜಾತ್ರೆ ನಡೆಯಲಿದ್ದು, ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಜನಾಂಗದ ಶಕ್ತಿ ಪ್ರದರ್ಶನಕ್ಕೆ ಮುಂದಾಗಬೇಕು ಎಂದು ತಾಲೂಕು ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ ತಿಳಿಸಿದರು.

ತಾಲೂಕಿನ ನನ್ನಿವಾಳ, ರಾಮಜೋಗಿಹಳ್ಳಿ ಮತ್ತು ಬಾಲೇನಹಳ್ಳಿ ಗ್ರಾಮಗಳಲ್ಲಿ ವಾಲ್ಮೀಕಿ ಜಾತ್ರೋತ್ಸವ ಹಿನ್ನೆಲೆಯಲ್ಲಿ ಸಮುದಾಯದ ಮುಖಂಡರೊಂದಿಗೆ ಸಮಾಲೋಚನಾ ಸಭೆ ನಡೆಸಿ ವಾಲ್ಮೀಕಿ ಜಾತ್ರೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ವಾಲ್ಮೀಕಿ ಜಾತ್ರೋತ್ಸವ
ಸಮುದಾಯದ ಅಭಿವೃದ್ಧಿಗೆ ವಿಶೇಷ ಆಯಾಮ ನೀಡಲಿದೆ ಎಂದು ತಿಳಿಸಿದರು.

ತಾಲೂಕು ವಾಲ್ಮೀಕಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ ಮಾತನಾಡಿ, ಜ.18ರಂದು ಚಳ್ಳಕೆರೆಯ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಶಾಸಕ ಟಿ.ರಘುಮೂರ್ತಿಯವರ ಅಧ್ಯಕ್ಷತೆಯಲ್ಲಿ ಜಾತ್ರೆ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಭೆ ಆಯೋಜಿಸಲಾಗಿತ್ತು. ಸ್ವಾಮೀಜಿಯವರ ನೇತೃತ್ವದಲ್ಲಿ ಮೂರನೇ ಬಾರಿಗೆ ಈ ಜಾತ್ರೆ ಆಯೋಜಿಸಿದ್ದು, ನಾವೆಲ್ಲರೂ ಸಂಘಟಿತರಾಗಿ ಒಗ್ಗಟ್ಟಿನಿಂದ ಜಾತ್ರೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಈ ಜನಾಂಗದ ಅಂತರಂಗದ ಶಕ್ತಿಯ ಅರಿವು ನಮಗೂ ಅರಿವಾಗುತ್ತದೆಯಲ್ಲದೆ, ಸಮಾಜಕ್ಕೂ ಸಹ ನಾವು ನಮ್ಮ ಸಂಘಟನೆಯ ಬಲದ ಬಗ್ಗೆ ಮಾಹಿತಿ ನೀಡಿದಂತಾಗುತ್ತದೆ ಎಂದರು. ವಾಲ್ಮೀಕಿ ಜಾತ್ರೆಗೆ ಹೆಚ್ಚು, ಹೆಚ್ಚು ಜನರು ಪಾಲ್ಗೊಳ್ಳುವಂತೆ ಮಾಡಬೇಕೆಂದು ವಾಲ್ಮೀಕಿ ಸಮುದಾಯದ ಮುಖಂಡರಾದ ದೊರೆ ಬೈಯಣ್ಣ, ರಾಜಣ್ಣ, ನೀರಗಂಟಿ ಪಾಪಣ್ಣ, ದೊರೆ ನಾಗರಾಜು, ಪಿಡಿಒ ಪಾಲಯ್ಯ, ರಾಘವೇಂದ್ರ ನಾಯಕ, ರಮೇಶ್‌, ಪಾಲಯ್ಯ, ಡಾ.ರಾಜು ಮುಂತಾದವರು ಮಾತನಾಡಿದರು.

ಶಿವಮ್ಮ, ಶಾರದಮ್ಮ, ಸಣ್ಣಬೋರಮ್ಮ, ಸಾವಿತ್ರಮ್ಮ, ಪ್ರಭಾವತಿ, ಚಿನ್ನಯ್ಯ, ಮಧು, ಓಬಯ್ಯ, ಸೂರ್ಯಪ್ರಭಾ, ಸುಮಂಗಳಮ್ಮ, ಸ್ವಪ್ನ ವೆಂಕಟೇಶ್‌, ಮಹಂತೇಶ್‌ ಮುಂತಾದವರು ಪಾಲ್ಗೊಂಡಿದ್ದರು.

ಓದಿ : ಬೈಕ್‌ ರ್ಯಾಲಿ ಮೂಲಕ ಸ್ವಾಗತ

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.