ಕಲಾಪ ಸಲಹಾ ಸಮಿತಿ ಸಭೆಯನ್ನು ಬಹಿಷ್ಕರಿಸಲು ಕಾಂಗ್ರೇಸ್ ನಿರ್ಧಾರ : ಸಿದ್ದರಾಮಯ್ಯ
Team Udayavani, Jan 29, 2021, 6:30 AM IST
ಬೆಂಗಳೂರು : ವಿಧಾನ ಮಂಡಲದ ಕಲಾಪ ಸಲಹಾ ಸಮಿತಿ ಸಭೆ ಬಹಿಷ್ಕರಿಸಲು ವಿಪಕ್ಷ ಕಾಂಗ್ರೆಸ್ ನಿರ್ಧರಿಸಿದೆ.
ಕಳೆದ ಅಧಿವೇಶನ ಸಂದರ್ಭದಲ್ಲಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನವಾದಂತೆ ಸದನ ನಡೆಯಲಿಲ್ಲ. ಹೀಗಾಗಿ ಈ ಬಾರಿ ಸಭೆಗೆ ಹೋಗುವುದು ಬೇಡ ಎಂಬ ನಿರ್ಧಾರ ಕೈಗೊಳ್ಳಲಾಗಿದೆ. ಗುರುವಾರ ನಡೆದ ಕಾಂಗ್ರೆಸ್ ಶಾಸ ಕಾಂಗ ಸಭೆಯಲ್ಲಿ ಈ ತೀರ್ಮಾನಕ್ಕೆ ಬರ ಲಾಗಿದೆ. ಈ ಬಗ್ಗೆ ಸ್ಪೀಕರ್ ಅವರಿಗೂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಉಭಯ ಸದನಗಳ ಕಲಾಪದ ಎಲ್ಲ ದಿನಗಳಲ್ಲೂ ಸದಸ್ಯರು ಹಾಜರಾಗಿ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. ಈ ಮಧ್ಯೆ ಶುಕ್ರವಾರ ಮತ್ತೂಮ್ಮೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.
ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಹಿರಿಯ ಮುಖಂಡ ಕೆ.ಸಿ. ಕೊಂಡಯ್ಯ ಅವರನ್ನು ಕಣಕ್ಕೆ ಇಳಿಸಲು ಇದೇ ಸಭೆಯಲ್ಲಿ ನಿರ್ಧರಿಸಲಾಗಿದೆ. ಜೆಡಿಎಸ್, ಬಿಜೆಪಿ ಮೈತ್ರಿ ಸದನದ ಕಲಾಪ ದಲ್ಲಿ ದಾಖಲಾಗಲಿ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ಖಚಿತಪಡಿಸಿವೆ.
ನಾಮಪತ್ರ ಸಲ್ಲಿಕೆ
ಉಪ ಸಭಾಪತಿ ಸ್ಥಾನಕ್ಕೆ ಬಿಜೆಪಿ ಮತ್ತು ಜೆಡಿಎಸ್‌ನ ಮೈತ್ರಿ ಅಭ್ಯರ್ಥಿಯಾಗಿ ಎಂ.ಕೆ. ಪ್ರಾಣೇಶ್ ನಾಮಪತ್ರ ಸಲ್ಲಿಸಿದ್ದಾರೆ. ಶುಕ್ರವಾರ ಚುನಾವಣೆ ನಡೆಯಲಿದ್ದು, ಮೈತ್ರಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ ಗೆಲುವು ಬಹುತೇಕ ಖಚಿತ.
ಉಪ ಸಭಾಪತಿ ಆಯ್ಕೆ ಬಳಿಕ ರಾಜೀನಾಮೆ ಸಲ್ಲಿಸಲು ಸಭಾಪತಿ ಪ್ರತಾಪಚಂದ್ರ ಶೆಟ್ಟಿ ತೀರ್ಮಾನಿಸಿದ್ದಾರೆ. ಆದರೆ ಪರಿಷತ್ ಕಹಿ ಘಟನೆ ಕುರಿತು ಮಧ್ಯಾಂತರ ವರದಿ ಸಲ್ಲಿಕೆ ಯಾಗಿದೆ. ಅದನ್ನು ಮಂಡಿಸಿ ಚರ್ಚೆಗೆ ಅವಕಾಶ ಕೊಟ್ಟು ತಾಂತ್ರಿಕ ಕಾರಣ ಮುಂದಿಟ್ಟು ಮುಂದುವರಿಯಿರಿ ಎಂದು ಪಕ್ಷದ ನಾಯಕರು ಸೂಚಿಸಿದ್ದಾರೆ ಎನ್ನಲಾಗಿದೆ.
ಉಪ ಸಭಾಪತಿ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಆತ್ಮಸಾಕ್ಷಿ ಮತಗಳು ನಮಗೆ ಸಿಗಲಿವೆ ಎಂಬ ವಿಶ್ವಾಸವಿದೆ.
– ಸಿದ್ದರಾಮಯ್ಯ, ವಿಪಕ್ಷ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.