![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 29, 2021, 3:18 PM IST
ವಿಜಯಪುರ: ಗೋಹತ್ಯೆ ನಿಷೇಧ ಕಾಯ್ದೆ ಸಮ ರ್ಪಕವಾಗಿ ಅನುಷ್ಠಾನಗೊಳಿಸುವ ಕೆಲಸವನ್ನು ಸ್ಥಳೀಯ ಅಧಿಕಾರಿಗಳು ಮಾಡುವ ಮೂಲಕ ಪಟ್ಟಣದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಕಸಾಯಿಖಾನೆಗಳನ್ನು ತೆರವುಗೊಳಿಸಬೇಕು ಎಂದು ಭಜರಂಗದಳ ಜಿಲ್ಲಾ ಘಟಕದ ಸಂಚಾಲಕ ವಿ.ಕೃಷ್ಣಮೂರ್ತಿ ಒತ್ತಾಯಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಟ್ಟಣದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಕಸಾಯಿಖಾನೆಗಳನ್ನು ನಡೆಸುತ್ತಿದ್ದಾರೆ. ಇದರಿಂದಾಗಿ ಕೊಳಚೆ ನೀರು ಹರಿಯಬೇಕಾಗಿರುವ ಚರಂಡಿಗಳಲ್ಲಿ ರಕ್ತ ಹರಿಯುತ್ತಿದೆ. ಇದನ್ನು ವಿರೋಧಿಸುವವರ ಮನೆಗಳ ಮುಂದೆ ರಾತ್ರಿ ವೇಳೆ ರಕ್ತ ತಂದು ಎರಚುವಂತಹ ಕೆಲಸ ಮಾಡುತ್ತಿದ್ದಾರೆ. ಈ ವಿಚಾರವಾಗಿ ಹನುಮಂತ ಶೆಟ್ಟಿ ಎನ್ನುವವರು ತಮ್ಮ ಮನೆಯ ಪಕ್ಕದಲ್ಲಿರುವ ಕಸಾಯಿಖಾನೆಗಳ ದುಷ್ಕೃತ್ಯದ ಬಗ್ಗೆ ಗೋಹತ್ಯೆ ಬಗ್ಗೆ ದೂರು ಪುರಸಭೆಗೆ ಹಾಗೂ ಪೊಲೀಸರಿಗೆ ಹಲವು ಬಾರಿ ದೂರು ನೀಡಿದ್ದರಿಂದ ಕಸಾಯಿಖಾನೆ ವ್ಯಾಪಾರಿಗಳು ಹನುಮಂತಶೆಟ್ಟಿಗೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ:ಪಾದಯಾತ್ರೆಗೆ ಅದ್ದೂರಿ·ಸ್ವಾಗತ
ಇಂತಹ ಕೃತ್ಯಗಳ ಬಗ್ಗೆ ಪುರಸಭೆ ಹಾಗೂ ಸ್ಥಳೀಯ ಪೊಲೀಸರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಕೊಟ್ಟಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ದೂರಿದರು. ಅಕ್ರಮವಾಗಿ ಕಸಾಯಿಖಾನೆಗಳಿಗೆ ಗೋವುಗಳು ಎಲ್ಲಿಂದ ಬರುತ್ತಿವೆ ಎನ್ನುವ ಕುರಿತು ತನಿಖೆಯಾಗಬೇಕು ಎಂದರು. ಪುರಸಭೆ ಮತ್ತು ಪೊಲೀಸರಿಗೆ ಈ ವರೆಗೆ ನೀಡಿರುವ ದೂರು ಮತ್ತು ಮನವಿ ಪತ್ರ ಮತ್ತು ಇತರೆ ದಾಖಲೆಗಳನ್ನು ಪ್ರಸ್ತುತ ಪಡಿಸಿದರು. ವಿಶ್ವ ಹಿಂದೂ ಪರಿಷತ್ ಸಂಚಾಲಕ ಆನಂದ್, ಮಹೇಶ್, ಹನುಮಂತಶೆಟ್ಟಿ, ನಯನ್ ಕೆ. ಇದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.