ಕೋವಿಡ್ ಲಸಿಕೆ: ಜಿಲ್ಲೆ ದ್ವಿತೀಯ ಸ್ಥಾನ
Team Udayavani, Jan 29, 2021, 3:46 PM IST
ಚಿಕ್ಕಬಳ್ಳಾಪುರ: ತೀವ್ರ ಕುತೂಹಲ ಕೆರಳಿಸಿದ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಜಿಲ್ಲೆಯಲ್ಲಿ ಇದೇ ಜ.16 ರಿಂದ ಆರಂಭವಾಗಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫ್ರಂಟ್‌ಲೆçನ್ ವಾರಿಯರ್ಗಳಾದ ವೈದ್ಯರು -ಸಿಬ್ಬಂದಿ, ಆಶಾ-ಅಂಗನವಾಡಿಕಾರ್ಯಕರ್ತರು ಸಹಾಯಕಿಯರು ಸಹಿತ 8,928 ಜನರಿಗೆ ಲಸಿಕೆ ಹಾಕುವ ಗುರಿಯೊಂದಿಗೆ ಜಿಲ್ಲಾಧಿಕಾರಿ ಆರ್.ಲತಾ ಚಾಲನೆ ನೀಡಿದರು. ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.70 ರಷ್ಟು ಸಾಧನೆ ಮಾಡಲಾಗಿದೆ.
ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು ಕೋವಿಡ್ ವ್ಯಾಕ್ಸಿನ್ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಜೊತೆಗೆ ಲಸಿಕೆ ಹಾಕಿಕೊಳ್ಳಲು ಹೆಸರುಗಳನ್ನುನೋಂದಾಯಿ ಸಿಕೊಂಡಿರುವ ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳಬೇಕೆಂದು ಮನವಿ ಮಾಡಿದರು. ಇದರ ಫಲದಿಂದಾಗಿ ಕೆಲವರು ಭಯದಿಂದ ಲಸಿಕೆ ಹಾಕಿಕೊಳ್ಳಲು ಹಿಂಜರಿದರೂ ಸಹ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಅಡ್ಡ ಪರಿಣಾಮ ಬೀರಿಲ್ಲ: ಮೊದಲ ಹಂತದಲ್ಲಿ ಲಸಿಕೆ ಪಡೆದುಕೊಂಡಿರುವ ಆರೋಗ್ಯ ಸಿಬ್ಬಂದಿಗೆ ಪ್ರಸ್ತುತ ಯಾವುದೇ ರೀತಿಯ ಅಡ್ಡಪರಿಣಾಮ ಬೀರಿದ ವರದಿಗಳು ಲಭಿಸಿಲ್ಲ. ಆದರೂ ಸಹ ಈಗಾಗಲೇ ಹೆಸರುಗಳನ್ನು ನೊಂದಣಿ ಮಾಡಿಕೊಂಡಿರುವ ಸಿಬ್ಬಂದಿ ಲಸಿಕೆ ಪಡೆದುಕೊಂಡರೇ ಏನು ಅಡ್ಡಪರಿಣಾಮ ಬೀರುತ್ತದೆ ಎಂಬ ಭೀತಿಯಿಂದ ಲಸಿಕೆ ಹಾಕಿಸಿಕೊಂಡಿಲ್ಲ.
ಶುಗರ್-ಬಿಪಿ ರೋಗಿಗಳು ಹಿಂದೇಟು?: ಜಿಲ್ಲೆಯಲ್ಲಿ ಲಸಿಕೆ ನೀಡುವ ಅಭಿಯಾನ ಯಶಸ್ವಿಗೊಳಿಸಲು ಮತ್ತು ಆರೋಗ್ಯ ಇನ್ನಿತರೆ ಇಲಾಖೆಯ ಅಧಿಕಾರಿಗಳ ಮತ್ತು ಸಿಬ್ಬಂದಿಗಳಲ್ಲಿ ಮೂಡಿರುವ ಅನುಮಾನ ನಿವಾರಿಸಲು ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ, ಜಿಲ್ಲಾಸ್ಪತ್ರೆಯ ಸರ್ಜನ್ ಮತ್ತು ವೈದ್ಯರು ಸಹ ಲಸಿಕೆ ಹಾಕಿಸಿಕೊಂಡಿದ್ದಾರೆ. ಆದರೆ ಜಿಲ್ಲೆಯಲ್ಲಿ ಈಗಾಗಲೇ ಹೆಸರುಗಳನ್ನು ನೋಂದಾಯಿಸಿಕೊಂಡಿರುವ ಪೈಕಿ ಬಿಪಿ-ಶುಗರ್ ಹೊಂದಿರುವ ಸಿಬ್ಬಂದಿ ಮತ್ತು ಅಧಿಕಾರಿಗಳು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಗುರಿ ಸಾಧನೆಗೆ ಹಿನ್ನಡೆಯಾಗಿದೆ.
ಇದನ್ನೂ ಓದಿ:ಹೊಸಬರ ಪ್ರಮೋಶನ್ ಕನ್ ಫ್ಯೂಶನ್!
ಜಾಗೃತಿ: ಗರ್ಭಿಣಿಯರು-ಬಾಣಂತಿಯರಿಗೆ ಕೊರೊನಾ ವ್ಯಾಕ್ಸಿನ್ ಹಾಕಲು ರಿಯಾಯಿತಿ ನೀಡಲಾಗಿದೆ. ಶುಗರ್-ಬಿಪಿ ಇದ್ದರೂ ಸಹ ಲಸಿಕೆ ಪಡೆದುಕೊಂಡರೇ ಅಡ್ಡ ಪರಿಣಾಮ ಬೀರುವುದಿಲ್ಲವೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ.
ವಿಶೇಷ ಅಭಿಯಾನ ಅಗತ್ಯ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಅವರ ತವರು ಜಿಲ್ಲೆಯಲ್ಲಿ ಲಸಿಕೆ ನೀಡುವ ಅಭಿಯಾನ ಯಶಸ್ವಿಗೊಳಿಸಲು ಈಗಾಗಲೇ ಜಿಲ್ಲಾಡಳಿತ ಸಾಕಷ್ಟು ಪ್ರಯತ್ನ ಮಾಡಿದೆ. ಆದರೆ ಲಸಿಕೆ ಹಾಕಿಕೊಳ್ಳದೆ ತಟಸ್ಥವಾಗಿ ಉಳಿದಿರುವ ಸಿಬ್ಬಂದಿ ಮತ್ತು ಅಧಿಕಾರಿಗಳ ಮನವೊಲಿಸಿ ಅವರಿಗೆ ಧೈರ್ಯ ತುಂಬಲು ವಿಶೇಷ ಅಭಿಯಾನ ನಡೆಸಬೇಕಾಗಿದೆ. ಇಲ್ಲದಿದ್ದರೇ ಇದುವರೆಗೆ ಎಷ್ಟು ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೋ ಅಷ್ಟಕ್ಕೆ ಮಾತ್ರ ಸೀಮಿತಗೊಳ್ಳತ್ತದೆ.
ಎಂ.ಎ.ತಮೀಮ್ ಪಾಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.