ಕನ್ನಡಿಗರನ್ನು ಕೆಣಕಿದರೆ ಮಲಗಿದ ಸಿಂಹವನ್ನು ಎಚ್ಚರಿಸಿದಂತೆ: ಡಾ. ಮನು ಬಳಿಗಾರ್ ಕಿಡಿ
Team Udayavani, Jan 30, 2021, 2:02 PM IST
ಬೆಳಗಾವಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಒಡಕು ಹುಟ್ಟಿಸುವ ಧ್ವನಿಯ ಬಗ್ಗೆ ಜನರು ನಿರ್ಲಕ್ಷ್ಯ ವಹಿಸಿ ಕಸದ ಬುಟ್ಟಿಗೆ ಹಾಕಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ಡಾ. ಮನು ಬಳಿಗಾರ್ ಹೇಳಿದರು.
ಕಾಗವಾಡದದಲ್ಲಿ ಡಾ. ಪ್ರಭಾಕರ ಕೋರೆ ಸರ್ವಾಧ್ಯಕ್ಷತೆಯಲ್ಲಿ ಹಮ್ಮಿಕೊಂಡಿರುವ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿ, ಕರ್ನಾಟಕದವರನ್ನು ಕೆಣಕಿದರೆ ಮಲಗಿದ ಸಿಂಹವನ್ನು ಎಚ್ಚರಿಸಿದಂತೆ. ಹೀಗಾಗಿ ಮಲಗಿದ ಸಿಂಹದ ಮೀಸೆ ಎಳೆದು ಕೆಣಕುವ ಕೆಲಸ ಮಹಾರಾಷ್ಟ್ರದ ನಾಯಕರು ಮಾಡಬಾರದು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ:ಕೆಂಪು ಕೋಟೆಯಲ್ಲಿ ಬಾವುಟ ಹಾರಿಸಿದ್ದು ಬಿಜೆಪಿ ಕಾರ್ಯಕರ್ತರೇ: ಐವನ್ ಡಿಸೋಜ
ರಾಜಕಾರಣಕ್ಕಾಗಿ ಅವಿವೇಕಿತನದ ಹೇಳಿಕೆ ಕೊಡುತ್ತಿರುವವರಿಗೆ ಜನರು ತೋರಿಸಿ ಕೊಟ್ಟಿದ್ದಾರೆ. ಜನರಿಗೆ ಭಾಷೆಯ ಮಹತ್ವ ಗೊತ್ತಿದೆ. ಇದು ಅಖಂಡ ಭಾರತವಾಗಿ ಉಳಿಯಬೇಕು. ಕರ್ನಾಟಕ- ಮಹಾರಾಷ್ಟ್ರ ಜನರು ಸೌಹಾರ್ದತೆಯಿಂದ ಇರುವಾಗ ಕೆಲವರು ಇಂಥ ಅವಿವೇಕಿತನದ ಹೇಳಿಕೆಗಳನ್ನು ಜನರು ನಿರ್ಲಕ್ಷಿಸುತ್ತಿದ್ದಾರೆ ಎಂದರು.
ಪರರ ವಿಚಾರಗಳ ಬಗ್ಗೆ ಮನ್ನಣೆ ನೀಡಬೇಕು ಎಂಬುದನ್ನು ನಮ್ಮ ಕರ್ನಾಟಕ ಸಾವಿರಾರು ವರ್ಷಗಳಿಂದ ಕಲಿಸಿ ಕೊಟ್ಟಿದೆ. ಸೌಹಾರ್ದಯುತವಾಗಿ ಬದುಕು ಕಟ್ಟಿಕೊಂಡಿರುವ ನಾಡು ನಮ್ಮ ಕರ್ನಾಟಕ. ಭಾಷೆಯ ಮೆರಗು ತಿಳಿದುಕೊಂಡರೆ ಸೌಹಾರ್ದತೆ ಹೆಚ್ಚಾಗುತ್ತದೆ ಎಂದು ಸಲಹೆ ನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.