ಕಲಬುರಗಿ ಮ್ಯಾನ್ ಹೋಲ್ ದುರಂತಕ್ಕೆ ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತರು ಕಾರಣ: ಎಂ. ಶಿವಣ್ಣ
Team Udayavani, Jan 30, 2021, 2:19 PM IST
ಕಲಬುರಗಿ: ನಗರದಲ್ಲಿ ಗುರುವಾರ ಮ್ಯಾನ್ ಹೋಲ್ ನಲ್ಲಿ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ ದುರಂತಕ್ಕೆ ಜಿಲ್ಲಾಧಿಕಾರಿ ಮತ್ತು ನಗರ ಪಾಲಿಕೆಯ ಆಯುಕ್ತರು ಕಾರಣೀಕರ್ತರಾಗುತ್ತಾರೆ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ. ಶಿವಣ್ಣ (ಕೋಟೆ) ಹೇಳಿದರು.
ಇಲ್ಲಿನ ಕೈಲಾಶ್ ನಗರ ಪ್ರದೇಶದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮ್ಯಾನ್ ಹೋಲ್ ನಲ್ಲಿ ಮನುಷ್ಯರನ್ನು ಇಳಿಸುವುದು ಅಪರಾಧ. ಇದು ಗೊತ್ತಿದ್ದೂ 20 ಅಡಿ ಆಳದ ಮ್ಯಾನ್ ಹೋಲ್ ಕಾರ್ಮಿಕರನ್ನು ಸ್ವಚ್ಛತೆಗೆಂದು ಇಳಿಸಿರುವುದು ಅಮಾನವೀಯ. ಇದರಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ ಎಚ್ಚರಿಸಿದರು.
ಇಬ್ಬರು ಕಾರ್ಮಿಕರ ಸಾವು ನಿಜಕ್ಕೂ ಘೋರ ದುರಂತ. ಇದರಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯವಿದೆ. ದುರ್ಘಟನೆ ಬಗ್ಗೆ ಸಂಪೂರ್ಣವಾದ ಮಹಿತಿ ಪಡೆದು, ಇದರಲ್ಲಿ ಯಾರೇ ತಪ್ಪು ಮಾಡಿದ್ದರೂ ಕಠಿಣ ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ನಿಯಮ ಪ್ರಕಾರ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಒದಗಿಸಲಾಗುವುದು. ಸದ್ಯ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ಇನ್ನೂ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದರು.
ಇದನ್ನೂ ಓದಿ:ಕನ್ನಡಿಗರನ್ನು ಕೆಣಕಿದರೆ ಮಲಗಿದ ಸಿಂಹವನ್ನು ಎಚ್ಚರಿಸಿದಂತೆ: ಡಾ. ಮನು ಬಳಿಗಾರ್ ಕಿಡಿ
ಈ ಸಂದರ್ಭದಲ್ಲಿ ರಾಷ್ಟ್ರಿಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹೀರಾಮನಿ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ರಮಾ, ಸದಸ್ಯರಾದ ಗೀತಾ ವಾಡೇಕರ್, ನಾಗರಾಜ ಎಸ್. ಎಂ.ವಿ.ವೆಂಕಟೇಶ, ಕರ್ನಾಟಕ ಉಚ್ಛ ನ್ಯಾಯಾಲಯದ ಕಾನೂನು ಸೇವೆಗಳ ಸಮಿತಿಯ ಸದಸ್ಯರಾದ ನ್ಯಾಯವಾದಿ ಹೆಚ್.ವೆಂಕಟೇಶ ದೊಡ್ಡೇರಿ, ಮಹಾನಗರ ಪಾಲಿಕೆಯ ಅಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಅಲ್ಲಾಭಕ್ಷ, ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಕಲಬುರಗಿ ವಲಯದ ಮುಖ್ಯ ಅಭಿಯಂತ ದಿನೇಶ ಎಸ್.ಎನ್., ಅಧೀಕ್ಷಕ ಅಭಿಯಂತ ಬಸವರಾಜ ಅಲೇಗಾಂವ, ಕಾರ್ಯನಿರ್ವಾಹಕ ಅಭಿಯಂತ ನರಸಿಂಹರೆಡ್ಡಿ , ಡಿಯುಡಿಸಿ ಯೋಜನಾ ನಿರ್ದೇಶಕ ಶಿವಶರಣಪ್ಪ ನಂದಗಿರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.