ಬುರ್ಜ್ ಖಲೀಫಾದಲ್ಲಿ ರಾರಾಜಿಸಿದ ಕಿಚ್ಚ
Team Udayavani, Jan 31, 2021, 10:19 PM IST
ಬೆಂಗಳೂರು: ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಫ್ಯಾಂಟಮ್ ಸಿನಿಮಾದ ಹೊಸ ಹೆಸರಾದ ‘ವಿಕ್ರಾಂತ್ ರೋಣ’ ಶೀರ್ಷಿಕೆಯ ಲೋಗೋದೊಂದಿಗೆ 2000 ಅಡಿಯ ಕಿಚ್ಚನ ವರ್ಚುವಲ್ ಕಟೌಟ್ ಪ್ರಪಂಚದ ಅತೀ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ದ ಮೇಲೆ ಅನಾವರಣಗೊಂಡಿದೆ.
ರವಿವಾರ ರಾತ್ರಿ 9:30ರ ಸುಮಾರಿಗೆ ಕಟೌಟ್ ಬಿಡುಗಡೆಗೊಂಡಿದ್ದು, ಆ ಮೂಲಕ ಇಷ್ಟು ಎತ್ತರದ ಕಟೌಟ್ ನಲ್ಲಿ ಕಾಣಿಸಿಕೊಂಡ ಸ್ಯಾಂಡಲ್ ವುಡ್ ನ ಮೊದಲ ನಟ ಎಂಬ ಖ್ಯಾತಿಗೆ ಕಲಾಕೇಸರಿ ಸುದೀಪ್ ಪಾತ್ರವಾಗಿದ್ದಾರೆ.
ಕಳೆದ ಜನವರಿ 21 ರಂದು ಚಿತ್ರಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ ಡೇಟ್ ನೀಡುತ್ತೇವೆ ಎಂದಿದ್ದ ನಿರ್ದೇಶಕ ಅನೂಪ್ ಬಂಡಾರಿ, ಆ ದಿನದಂದು ಚಿತ್ರಕ್ಕೆ ಹಿಂದೆ ನೀಡಲಾಗಿದ್ದ ಫ್ಯಾಂಟಮ್ ಎಂಬ ಶೀರ್ಷಿಕೆ ಯನ್ನು ಚಿತ್ರತಂಡ ವಿಕ್ರಾಂತ್ ರೋಣ ಎಂದು ಬದಲಾಯಿಸಿದ್ದು, ಹೊಸ ಶೀರ್ಷಿಕೆ ಯನ್ನು ಒಳಗೊಂಡಂತೆ ಕಿಚ್ಚನ ಕಟೌಟ್ ಅನ್ನು ಪ್ರಪಂಚದ ಅತೀ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದಿದ್ದರು.
ಇದನ್ನೂ ಓದಿ:“ಹಾರ್ಮ್ ಫುಲ್ ಕಂಟೆಂಟ್ ಗಳನ್ನು ನಿಯಂತ್ರಿಸಲು ಹೊಸ ತಂತ್ರ” : ಫೇಸ್ ಬುಕ್
ನಿರ್ದೇಶಕ ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾವನ್ನು ಜಾಕ್ ಮಂಜು ಮತ್ತು ಅಲಂಕಾರ್ ಪಾಂಡಿಯನ್ ನಿರ್ಮಾಣ ಮಾಡುತ್ತಿದ್ದಾರೆ. ನಿರೂಪ್ ಭಂಡಾರಿ, ನೀತಾ ಅಶೋಕ್ ಪ್ರಮುಖ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿರುವ ಈ ಸಿನಿಮಾದಲ್ಲಿ ಅಜನೀಶ್ ಲೋಕನಾಥ್ ಸಂಗೀತವಿರಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.