ಸಂಘಟನೆಗಳಿಂದ ರೈಲು ತಡೆ ಚಳವಳಿ

Team Udayavani, Jan 31, 2021, 1:07 PM IST

Rail Barrier Movement by Organizations

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿಂಪಡೆದು ಎಂಇಎಸ್‌ ಸಂಘಟನೆ ನಿಷೇಧಿಸಬೇಕು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ  ರೈಲು ತಡೆ ಚಳವಳಿ ಬೆಂಬಲಿಸಿ ನಗರದ ರೈಲ್ವೆ ನಿಲ್ದಾಣದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ರೈಲು ತಡೆ ಚಳವಳಿ ನಡೆಯಿತು.

ಬೆಳಗ್ಗೆ 8 ಗಂಟೆಗೆ ರೈಲ್ವೆ ನಿಲ್ದಾಣದ ಬಳಿಗೆ ಆಗಮಿಸಿದ ಪ್ರತಿಭಟನಾಕಾರರನ್ನು ಒಳ ಹೋಗಲು ಬಿಡದಂತೆ ನಿಲ್ದಾಣದ ಖಾಸ್‌ಬಾಗ್‌ ರೈಲ್ವೆ ಸೇತುವೆ ಬಳಿಯ ದ್ವಾರದ ಬಳಿಯೇ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ತಡೆದರು.

ರೈಲು ನಿಲ್ದಾಣದ ಸುತ್ತಲೂ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ರೈಲು ತಡೆಗೆ ಪೊಲೀಸರು ಅವಕಾಶ ನೀಡಲಿಲ್ಲ,ಸಂಘಟನೆಗಳು, ಪೊಲೀಸರ ನಡುವೆ ನಿಲ್ದಾಣದ ಒಳಹೋಗಲು ತಡೆಯೊಡ್ಡಿದ್ದರಿಂದ ತೀವ್ರ ಚರ್ಚೆ ನಡೆದು ಕನಿಷ್ಠ ನಿಲ್ದಾಣದ ಬಳಿಗೆ ತೆರಳಲು ಅವಕಾಶ ನೀಡಿ ಎಂದು ಒತ್ತಾಯಿಸಿದ್ದರಿಂದ ಕೊನೆಗೆ ರೈಲು ನಿಲ್ದಾಣದ ಪ್ರವೇಶ ದ್ವಾರದ ಬಳಿಗೆ ಹೋಗಲು ಅನುವು ಮಾಡಿಕೊಟ್ಟರು. ಸಂಘಟನೆಗಳ ಕಾರ್ಯಕರ್ತರು ದ್ವಾರದ ಬಳಿ ಪ್ರತಿಭಟನೆ ನಡೆಸಿದರು.

ಕನ್ನಡಪರ ಸಂಘಟನೆಗಳ ಒಕ್ಕೂಟದ ಟಿ.ಎನ್‌.ಪ್ರಭುದೇವ್‌ ಮಾತನಾಡಿ, ಎಂ.ಸಂಜೀವ್‌ ನಾಯಕ್‌ ಮೊದಲಾದವರು ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾಜನ್‌ ವರದಿಯೇ ಅಂತಿಮ. ಸುಪ್ರೀಂ ಕೋರ್ಟ್‌ನಲ್ಲಿ ಇನ್ನೂ ವಿಚಾರಣೆಯಲ್ಲಿದೆ. ಆದರೂ, ಬೆಳಗಾವಿ ವಿಚಾರದಲ್ಲಿ ಎಂಇಎಸ್‌ ಕಾರ್ಯಕರ್ತರು ಪದೇ ಪದೆ ಕ್ಯಾತೆ ಮಾಡುತ್ತಿರುವುದು ಖಂಡನೀಯವೆಂದರು. ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಂಸದರು ಆಯ್ಕೆಯಾದರೂ ಕರ್ನಾಟಕದ ಪರ ಯೋಜನೆಗಳ ಜಾರಿಗೆ ಮುಂದಾಗುತ್ತಿಲ್ಲ. ಈ ಬೆನ್ನಲ್ಲೇ ಇತ್ತೀಚೆಗೆ ರಾಜ್ಯ ಸರ್ಕಾರ ಕನ್ನಡಿಗರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿ ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವುದು ಖಂಡನೀಯ ಎಂದರು.

ಇದನ್ನೂ ಓದಿ:ವಿಪಕ್ಷದವರು ಏನೇ ಟೀಕೆ ಮಾಡಿದರೂ ನಾವು ಸ್ವಾಗತಿಸುತ್ತೇವೆ: ಬಿ.ಎಸ್.ಯಡಿಯೂರಪ್ಪ

ಕನ್ನಡಪರ ಸಂಘಟನೆಗಳ ಒಕ್ಕೂಟದ ಡಿ.ಪಿ.ಆಂಜನೇಯ, ಸು.ನರಸಿಂಹಮೂರ್ತಿ, ಪು.ಮಹೇಶ್‌, ಶ್ರೀನಗರ ಬಷೀರ್‌, ರಮೇಶ್‌, ಪರಮೇಶ್‌, ನಾಗರಾಜ, ಗುರುರಾಜು, ನಂಜಪ್ಪ, ಸೂರಿ, ವೆಂಕಟೇಶ್‌, ಶಿವು, ಕೆ.ಕೆ.ವೆಂಕಟೇಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.