ಮಕ್ಕಳನ್ನು ಪುಸ್ತಕದ ಹುಳುಗಳಾಗಿಸಿ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮಾತನಾಡಿದರು
Team Udayavani, Jan 31, 2021, 2:51 PM IST
ದಾವಣಗೆರೆ: ಮಕ್ಕಳನ್ನು ಮೊಬೈಲ್ ಹುಳುಗಳನ್ನಾಗಿ ಮಾಡದೇ ಪುಸ್ತಕದ ಹುಳುಗಳನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರು ಹಾಗೂ ಪಾಲಕರ ಮೇಲಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶೈಕ್ಷಣಿಕ ಕಾರ್ಯಾಗಾರ, ಜಿಲ್ಲಾ ಕಾರ್ಯಕಾರಿಣಿ ಸಭೆ, ನೂತನ ಪದಾಧಿಕಾರಿಗಳಿಗೆ ಅಭಿನಂದನೆ
ಹಾಗೂ “ಸಂಕಲ್ಪ’ ಪಂಚವಾರ್ಷಿಕ ಕ್ರಿಯಾಯೋಜನೆ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಬೋಧನೆ ಮಾಡುವ ಮೂಲಕ ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು. ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲೇ ಇದ್ದು ಅವರನ್ನು ಉತ್ತಮ ಮಾರ್ಗದಲ್ಲಿ ತರುವಲ್ಲಿ ಪ್ರಯತ್ನಿಸಬೇಕು ಎಂದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಮಾತನಾಡಿ, ಶಿಕ್ಷಕರ ಸಮಸ್ಯೆ, ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಬಗೆಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ
ಸಂಘದ ಜಿಲ್ಲಾಧ್ಯಕ್ಷ ಡಿ. ರಾಮಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷೆ ಶಾಂತಕುಮಾರಿ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ (ಆಡಳಿತ) ಲಿಂಗರಾಜ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಾಲಾಕ್ಷಿ, ವೀರಶೈವ ಲಿಂಗಾಯತ ನೌಕರರ ಸಂಘದ ಎನ್.ಇ. ನಟರಾಜ್ ಇನ್ನಿತರ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.