ಕೋವಿಡ್ ಲಸಿಕಾ ಕಾರ್ಯ ಅಚ್ಚುಕಟ್ಟು ನಿರ್ವಹಣೆಗೆ ಡಿಸಿ ಸೂಚನೆ
Team Udayavani, Jan 31, 2021, 3:46 PM IST
ಗದಗ: ಮಹಾಮಾರಿ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕೋವಿಡ್ ಲಸಿಕಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ನಿಯಂತ್ರಣ ದಲ್ಲಿವೆ. ಆದರೂ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯವನ್ನು ಮಾಡಿ, ಅವರನ್ನು ತಪಾಸಣೆಗೆ ಒಳಪಡಿಸಬೇಕು.
ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. ಕೊರೊನಾ ಸೋಂಕು ಜಿಲ್ಲೆಯಲ್ಲಿ ನಿಯಂತ್ರಣದಲ್ಲಿದೆ. ನಿರ್ನಾಮವಾಗಿಲ್ಲ ಎಂಬುದನ್ನು ಸಾರ್ವಜನಿಕರಿಗೆ ಮನವಿ ಮಾಡಿಕೊಡುವ ಮೂಲಕ ಸುರಕ್ಷತಾ ಕ್ರಮ ಪಾಲಿಸುವಂತೆ ಜಾಗೃತಿಗೊಳಿಸುವ ಕಾರ್ಯವನ್ನು ಮಾಡಬೇಕು ಎಂದರು.
ಕೋವಿಡ್ ಸೋಂಕಿಗೆ ಲಸಿಕೆ ವಿತರಣೆ ಕಾರ್ಯ ಆರಂಭವಾಗಿದ್ದು, ಲಸಿಕೆ ಕುರಿತು ಊಹಾಪೋಹ ಸುದ್ದಿಗಳಿಗೆ ಕಿವಿಗೊಡದೇ ಲಸಿಕೆ ಪಡೆಯಬೇಕು. ಲಸಿಕೆ ಪಡೆದವರಿಗೆ ಯಾವುದೇ ಅಡ್ಡಪರಿಣಾಮಗಳಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು. ಪ್ರಥಮ ಹಂತದಲ್ಲಿ ಆರೋಗ್ಯ ಇಲಾಖೆ ಸೇರಿದಂತೆ ಕೊರೊನಾ ವಾರಿಯರ್ಸ್‌ಗಳಿಗೆ ಲಸಿಕೆ ವಿತರಿಸಲಾಗುತ್ತಿದ್ದು, ದ್ವತೀಯ ಹಂತದಲ್ಲಿ ಕಂದಾಯ ಹಾಗೂ ಪಂಚಾಯತ್ ರಾಜ್ ಇಲಾಖೆಗಳ ನೌಕರರಿಗೆ ಲಸಿಕೆ ವಿತರಿಸಲಾಗುವುದು. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಇದನ್ನೂ ಓದಿ:ರಾಜೀನಾಮೆಗೆ 7 ಸದಸ್ಯರ ನಿರ್ಧಾರ
ಕಳೆದ ಸಾಲಿನಲ್ಲಿ ಪ್ರವಾಹಕ್ಕೊಳಗಾದ ಮನೆಗಳಿಗೆ ಪರಿಹಾರ ವಿತರಣೆ ಕುರಿತಂತೆ ಶೀಘ್ರವೇ ಸೂಕ್ತ ನಿರ್ಣಯ ಕೈಗೊಳ್ಳುವ ಮೂಲಕ ಪರಿಹಾರ ವಿತರಣೆಯನ್ನು ಮುಕ್ತಾಯಗೊಳಿಸಬೇಕು. ಮನೆ ಹಾನಿಯಾದವರಿಗೆ ಮನೆ ನಿರ್ಮಿಸದಿದ್ದಲ್ಲಿ ನಿಯಮಾನುಸಾರ ಕ್ರಮ ವಹಿಸಬೇಕು ಎಂದರು.
ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ರವಿಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ತಾಲೂಕು ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಇತರ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.