ಮೇ 22ಕ್ಕೆ ಜೀವ ವೈವಿಧ್ಯ ದಿನಾಚರಣೆ


Team Udayavani, Jan 31, 2021, 4:05 PM IST

Biodiversity Day on May 22nd

ಶಿರಸಿ: ಕರ್ನಾಟಕ ಜೀವ ವೈವಿಧ್ಯ ಮಂಡಳಿ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಮಾಲೋಚನಾ ಕಾರ್ಯಾಗಾರ ನಡೆಸಿತು. ಜೀವವೈವಿಧ್ಯ ದಾಖಲಾತಿ ಉಪಯೋಗ ಹಾಗೂ ಪಂಚಾಯತ್‌ ಜೀವವೈವಿಧ್ಯ ಸಮಿತಿಗಳ ಬಲವರ್ಧನೆ ಕುರಿತು ರಾಜ್ಯದ ಎಲ್ಲ ಜಿಲ್ಲೆಗಳಿಂದ ಬಂದ ಜೀವವೈವಿಧ್ಯ ಸಂಯೋಜಕರು, ಸಂಸ್ಥೆಗಳು, ಜಿಲ್ಲಾ ಸಾಮಾಜಿಕ ಅರಣ್ಯ ಅಧಿಕಾರಿಗಳು, ತಜ್ಞ ಸಮೀತಿಗಳ ಸದಸ್ಯರು ಪಾಲ್ಗೊಂಡಿದ್ದರು.

ಮುಖ್ಯ ಅತಿಥಿ ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಆಗಮಿಸಿ ವಿನಾಶದ ಅಂಚಿನ ಸಸ್ಯ ಪ್ರಾಣಿಗಳ ಕುರಿತು ಅಧ್ಯಯನ ವರದಿ ಬಿಡುಗಡೆ ಮಾಡಿದರು. ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಪಂಚಾಯತ್‌ ರಾಜ್‌ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಿದರು.

ರಾಜ್ಯದ 6010 ಗ್ರಾಪಂ 175 ತಾಪಂಗಳು, 30 ಜಿಪಂಗಳಲ್ಲಿರುವ ಜೀವವೈವಿಧ್ಯ ನಿರ್ವಹಣಾ ಸಮಿತಿಗಳನ್ನು ಕ್ರಿಯಾಶೀಲಗೊಳಿಸಬೇಕು. ತಜ್ಞರು, ಪರಿಸರ ಸಂಸ್ಥೆಗಳ ಕಾರ್ಯಕರ್ತರನ್ನು ಈ ಸಮೀತಿಗಳಿಗೆ ಸೇರ್ಪಡೆ ಮಾಡಬೇಕು. ತರಬೇತಿ, ಜಾಗೃತಿ ಮಾಡಿಸಲು ಜಿಪಂಗಳ ಮೂಲಕ ವಿಶೇಷ ಕ್ರಮಬೇಕು. 15ನೇ ಹಣಕಾಸು ನಿಧಿ ವಿನಿಯೋಗ ಆದೇಶದಲ್ಲಿ ಜೀವವೈವಿಧ್ಯ ವಿಷಯ ಸೇರ್ಪಡೆ ಆಗಬೇಕು. ಮುಂತಾದ 10 ಅಂಶಗಳ ಬೇಡಿಕೆಗಳನ್ನು ಅಶೀಸರ ಮಂಡಿಸಿದರು.

ಸಮಾರೋಪ ಭಾಷಣ ಮಾಡಿದ ಸಚಿವ ಕೆ.ಎಸ್‌ಈಶ್ವರಪ್ಪ, ಜೀವ ವೈವಿಧ್ಯ ಮಂಡಳಿ  ಕ್ರಿಯಾಶೀಲವಾಗಿದೆ. ಅಧ್ಯಕ್ಷರು ಛಲದಿಂದ ಕೆಲಸ ಮಾಡುತ್ತಾರೆ. ಪಂಚಾಯತ್‌ ರಾಜ್‌ ಇಲಾಖೆ ಜೀವವೈವಿಧ್ಯ ನಿರ್ವಹಣೆ-ರಕ್ಷಣೆಗೆ ಎಲ್ಲ ಸಹಾಯ-ಸಹಕಾರ ನೀಡಲು ಬದ್ಧವಾಗಿದೆ. ಫೆಬ್ರವರಿ ಮೊದಲ ವಾರದಲ್ಲಿ ಜೀವವೈವಿಧ್ಯ ಮಂಡಳಿ ಜೊತೆ ನಮ್ಮ ಇಲಾಖೆ ಹಿರಿಯ ಅಧಿಕಾರಿಗಳು ಮಾತುಕತೆ ನಡೆಸುತ್ತಾರೆ. ಬಜೆಟ್‌ನಲ್ಲಿ ಸಹಾ ಇದಕ್ಕೆ ಅವಕಾಶ ಕಲ್ಪಿಸುತ್ತೇವೆ.

ಇದನ್ನೂ ಓದಿ:ಬಾಲಕಿಯರಿಗೆ ಉನ್ನತಾಧಿ ಕಾರದ ಗೌರವ

ಜೀವವೈವಿಧ್ಯ ರಕ್ಷಣೆ ಪಂಚಾಯತ್‌ ರಾಜ್‌ ಇಲಾಖೆಯದೇ ಒಂದು ವಿಷಯ ಎಂದು ಪರಿಗಣಿಸುತ್ತೇವೆ ಎಂದು ತಿಳಿಸಿದರು. ಮೇ 22 ರಂದು ಎಲ್ಲ ಗ್ರಾಪಂಗಳಲ್ಲಿ ಜೀವವೈವಿಧ್ಯ ದಿನಾಚರಣೆ ಮಾಡಲು ಆದೇಶ ನೀಡುತ್ತೇನೆ ಎಂದರು. ಜೀವವೈವಿಧ್ಯ ಮಂಡಳಿ ಸದಸ್ಯ ಕಾರ್ಯದರ್ಶಿ ಪುನೀತ್‌ ಪಾಠಕ್‌, ಪಿಸಿಸಿಎಫ್‌ ಸಂಜಯ್‌ ಮೋಹನ್‌, ಮಂಡಳಿ ಸದಸ್ಯ ಕೆ. ವೆಂಕಟೇಶ್‌, ಡಾ| ಪ್ರಕಾಶ್‌ ಮೇಸ್ತ, ಎಪಿಸಿಸಿಎಫ್‌ ಅನಿತಾ ಅರೇಕಲ್‌, ಡಾ| ಸುಮಾ, ಡಾ| ಕಿರಣ್‌, ಡಾ| ರಘು ಶ್ರೀಪಾದ ಬಿಚ್ಚುಗತ್ತಿ, ಗ್ರಾಮೀಣ ಅಭಿವೃದ್ಧಿ ಇಲಾಖೆ ನಿರ್ದೇಶಕ ಯಾಲಕ್ಕಿಗೌಡ ಮೊದಲಾದವರು ಪಾಲ್ಗೊಂಡಿದ್ದರು. ಮಂಡಳಿ ತೋಟಗಾರಿಕಾ ಅಧಿಕಾರಿ ಪವಿತ್ರ ವಂದಿಸಿದರು.

ಟಾಪ್ ನ್ಯೂಸ್

9

Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

Katapady-kambala

New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

Modi-GUJ

Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ

Hasanamabe

Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್‌ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು

ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ

ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ

ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ

ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ

4-

Karate: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ದಾಂಡೇಲಿಯ ಕರಾಟೆ ಪಟುಗಳು

MLA-Shivarama-Hebbar

Yallapura: ಬಿಜೆಪಿಯಿಂದ ಒಂದಲ್ಲ, ಎರಡೂ ಕಾಲು ಹೊರಗಿಟ್ಟಿದ್ದೇನೆ: ಶಾಸಕ ಶಿವರಾಮ ಹೆಬ್ಬಾರ್‌

MUST WATCH

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

ಹೊಸ ಸೇರ್ಪಡೆ

1

Hyderabad: ಈರುಳ್ಳಿ ಬಾಂಬ್‌ ಪಟಾಕಿ ಸ್ಫೋಟ; ಒಬ್ಬ ಸಾವು, 6 ಮಂದಿಗೆ ಗಾಯ

2-udupi

Udupi: ಗೀತಾರ್ಥ ಚಿಂತನೆ- 81: ಮೇಲ್ನೋಟದಲ್ಲಿ ಕಳಕಳಿ, ಒಳನೋಟದಲ್ಲಿ ರಾಜ್ಯಲೋಭ!

9

Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.