ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹ
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ನಗರದಲ್ಲಿ ಧರಣಿ ನಡೆಸಲಾಯಿತು.
Team Udayavani, Jan 31, 2021, 5:20 PM IST
ಚಿತ್ರದುರ್ಗ: ಕೃಷಿ ವಿರೋ ಧಿ ಕಾಯ್ದೆ ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಚಳವಳಿ ಬೆಂಬಲಿಸಿ ರಾಜ್ಯ ರೈತ ಸಂಘ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದಿಂದ ಶನಿವಾರ ಧರಣಿ ನಡೆಸಲಾಯಿತು.
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ. ನುಲೇನೂರು ಶಂಕರಪ್ಪ ಮಾತನಾಡಿ, ಕಳೆದ 63 ದಿನಗಳಿಂದಲೂ ದೆಹಲಿಯಲ್ಲಿ ಮೈ ಕೊರೆಯುವ ಚಳಿಯನ್ನು ಲೆಕ್ಕಿಸದೆ ರೈತರು ಧರಣಿ ನಡೆಸುತ್ತಿದ್ದಾರೆ. ಆದರೂ ಹಠ ಬಿಡದ ಪ್ರಧಾನಿ ರೈತ ವಿರೋಧಿ
ಕಾಯ್ದೆಗಳನ್ನು ಹಿಂಪಡೆಯಲು ಮೀನಾಮೇಷ ಎಣಿಸುತ್ತಿದ್ದಾರೆ. ಉದ್ಯಮಿ, ಬಂಡವಾಳಶಾಹಿಗಳ ಪರವಾಗಿರುವ ಕಾನೂನು ಜಾರಿಗೆ ತರಲು ಹೊರಟಿರುವ ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು. ಅಗತ್ಯ ವಸ್ತು ಕಾಯ್ದೆ ತಿದ್ದುಪಡಿಯಿಂದ ಕೇವಲ ರೈತರಿಗಷ್ಟೇ ಅಲ್ಲ, ಜನಸಾಮಾನ್ಯರು, ಕಾರ್ಮಿಕರ ಬದುಕು ದುಸ್ತರವಾಗಲಿದೆ. ಉಳ್ಳವರು ಲಕ್ಷಾಂತರ ಟನ್ ಆಹಾರ ಧಾನ್ಯಗಳನ್ನು ಸಂಗ್ರಹಿಸಿಕೊಟ್ಟುಕೊಳ್ಳಲು ಈ ಕಾಯ್ದೆಯಿಂದ ಅನುಕೂಲವಾಗಿದೆ. 2012 ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಇದೇ ಕಾಯ್ದೆಯನ್ನು ಜಾರಿಗೆ ತರಲು ಹೊರಟಾಗ ನರೇಂದ್ರ ಮೋದಿ ವಿರೋಧಿಸಿದ್ದರು. ಅದರಂತೆ ಈಗ ನಡೆದುಕೊಳ್ಳಲಿ ಎಂದು
ಒತ್ತಾಯಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ| ದೊಡ್ಡಮಲ್ಲಯ್ಯ, ರೈತ ಸಂಘದ ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಜಿ. ಸುರೇಶ್‌ಬಾಬು, ಎಸ್‌ಯುಸಿಐನ ರವಿಕುಮಾರ್, ಸಿಐಟಿಯುನ ಸಿ.ಕೆ. ಗೌಸ್‌ಪೀರ್, ಸ್ವರಾಜ್ ಇಂಡಿಯಾ ಜಿಲ್ಲಾಧ್ಯಕ್ಷ ಜೆ. ಯಾದವ ರೆಡ್ಡಿ, ಕರ್ನಾಟಕ ಜನಶಕ್ತಿ ಸಂಘಟನೆಯ ಟಿ. ಶಫಿವುಲ್ಲಾ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.