ಸೋದರಳಿಯನ ಪ್ರಗತಿಗೆ ಶ್ರಮಿಸುತ್ತಿರುವ ಮಮತಾ ಬ್ಯಾನರ್ಜಿ ಇನ್ಮುಂದೆ ಏಕಾಂಗಿ: ಶಾ ಆಕ್ರೋಶ
Team Udayavani, Jan 31, 2021, 6:17 PM IST
ಪಶ್ಚಿಮಬಂಗಾಳ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದ ಜನರ ಹಿತರಕ್ಷಣೆಯನ್ನು ನಿರ್ಲಕ್ಷಿಸಿದ್ದರಿಂದಲೇ ಹಲವಾರು ಟಿಎಂಸಿ ನಾಯಕರು ಬಿಜೆಪಿ ಸೇರುತ್ತಿದ್ದಾರೆ. ಮುಂದಿನ ಚುನಾವಣೆ ಸಮಯದಲ್ಲಿ ಮಮತಾ ಏಕಾಂಗಿಯಾಗಿ ಉಳಿಯಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ಹೌರದಲ್ಲಿನ ಪಕ್ಷದ ಕಾರ್ಯಕರ್ತರನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ದೇಶಿಸಿ ಮಾತನಾಡಿದ ಅವರು, ಟಿಎಂಸಿ ಪಕ್ಷದಿಂದ ಮತ್ತಷ್ಟು ನಾಯಕರು ಬಿಜೆಪಿ ಸೇರಲಿದ್ದಾರೆ ಎಂದು ಸುಳಿವು ಬಿಟ್ಟುಕೊಟ್ಟರು. ಏತಕ್ಕಾಗಿ ಹಲವಾರು ಟಿಎಂಸಿ ಮುಖಂಡರು ಬಿಜೆಪಿ ಸೇರುತ್ತಿದ್ದಾರೆ ಎನ್ನುವುದರ ಕುರಿತಾಗಿ ಮಮತಾ ಬ್ಯಾನರ್ಜಿ ಆಲೋಚಿಸಬೇಕಾಗಿದೆ. ರಾಜ್ಯದ ಜನರನ್ನು ನಿರಾಸೆಗೊಳಿಸಿದ್ದರಿಂದಲೇ ಈ ಸ್ಥಿತಿ ಬಂದೊದಗಿದೆ ಎಂದು ಕಿಡಿಕಾರಿದರು.
ಮೋದಿ ಸರ್ಕಾರ ‘ಜನ್ ಕಲ್ಯಾಣ್’ ದೃಷ್ಠಿಯಲ್ಲಿರಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ. ಆದರೇ ಮಮತಾ ತಮ್ಮ ಸೋದರಳಿಯನ ಉದ್ದಾರಕ್ಕೆ ಶ್ರಮಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಇದನ್ನೂ ಓದಿ: ಉದ್ಧವ್ ಠಾಕ್ರೆ ಮೊದಲು ಕೋವಿಡ್ ನಿಯಂತ್ರಿಸುವ ಕೆಲಸ ಮಾಡಲಿ: ಜಗದೀಶ್ ಶೆಟ್ಟರ್
ಮಾ, ಮಾಟಿ, ಮಾನುಷ್ (ತಾಯಿ, ಭೂಮಿ, ಜನರು) ಎಂಬ ಟಿಎಂಸಿಯ ಘೋಷಣೆಯನ್ನು ಉಲ್ಲೇಖಿಸಿದ ಶಾ, ತಮ್ಮ ಉದ್ಘೋ಼ಷದಂತೆ ನಡೆಯದೆ ತೃಣಮೂಲ ಕಾಂಗ್ರೆಸ್ ಸುಲಿಗೆ, ಭ್ರಷ್ಟಾಚಾರ ಹಾಗೂ ಓಲೈಕೆಯ ರಾಜಕಾರಣದಲ್ಲಿ ತೊಡಗಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯು ಅಧಿಕಾರ ಪಡೆಯಲಿದ್ದು, ರಾಜ್ಯವನ್ನು ಅಭಿವೃದ್ದಿಯತ್ತ ಕೊಂಡೊಯ್ಯಲಾಗುವುದು ಎಂದರು.
ಚುನಾವನೆ ಹಿನ್ನಲೆ ಆಡಳಿತರೂಢ ಟಿಎಂಸಿ ಮತ್ತು ಬಿಜೆಪಿಯ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಮಾಜಿ ಸಚಿವ ರಾಜೀಬ್ ಬ್ಯಾನರ್ಜಿ ಶುಕ್ರವಾರ (ಜ. 29) ಟಿಎಂಸಿಯಿಂದ ಹೊರನಡೆದು ಕೆಲವು ರೆಬೆಲ್ ಶಾಸಕರೊಂದಿಗೆ ಕೆಂದ್ರ ಗೃಹ ಸಚಿವ ಅಮಿತ್ ಶಾ ರನ್ನು ಭೇಟಿ ಮಾಡಿದ್ದರು. ಕಳೆದ ಡಿಸೆಂಬರ್ ನಲ್ಲಿ ಮಾಜಿ ಸಚಿವ ಸುವೆಂಧು ಅಧಿಕಾರಿ ಕೂಡ ಟಿಎಂಸಿ ಪಕ್ಷ ತ್ಯೆಜಿಸಿ ಬಿಜೆಪಿ ಸೇರ್ಪಡೆಗೊಂಡಿದ್ದರು.
ಇದನ್ನೂ ಓದಿ: ಕೋವಿಡ್ ಲಸಿಕೆ ಪಡೆದಿದ್ದ ಆರೋಗ್ಯ ಕಾರ್ಯಕರ್ತೆ ಸಾವು; ತೆಲಂಗಾಣದಲ್ಲಿ 3ನೇ ಪ್ರಕರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.