ಕ್ರಿಕೆಟಿಗರಿಗೂ ಕೋವಿಡ್ ಲಸಿಕೆ: ಅರುಣ್ ಧುಮಾಲ್
Team Udayavani, Feb 1, 2021, 6:30 AM IST
ಹೊಸದಿಲ್ಲಿ: ಕ್ರಿಕೆಟಿಗರಿಗೂ ಕೊರೊನಾ ಲಸಿಕೆ ನೀಡುವಂತೆ ಕೇಂದ್ರ ಸರಕಾರದ ಜತೆ ಮಾತುಕತೆ ನಡೆಸ ಲಾಗಿದೆ ಎಂದು ಬಿಸಿಸಿಐ ಖಜಾಂಜಿ ಅರುಣ್ ಧುಮಾಲ್ ತಿಳಿಸಿದ್ದಾರೆ.
ಕೊರೊನಾ ಲಸಿಕೆಯನ್ನು ದೇಶಿ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಪಾಲ್ಗೊಳ್ಳಲಿರುವ ಎಲ್ಲ ಆಟಗಾರರಿಗೆ, ಅಧಿಕಾರಿಗಳಿಗೆ ಹಾಗೂ ಸಹಾಯಕ ಸಿಬಂದಿಗೆ ನೀಡುವ ಯೋಜನೆ ಇದೆ ಎಂದು ಧುಮಾಲ್ ತಿಳಿಸಿದರು.
ಒಲಿಂಪಿಕ್ಸ್ ಕ್ರೀಡಾಳುಗಳಿಗೆ…
ಮುಂಬರುವ ಟೋಕಿಯೊ ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳಲಿರುವ ಭಾರತದ ಕ್ರೀಡಾಪಟುಗಳಿಗೆ ಮಾರ್ಚ್ ನಲ್ಲಿ ಲಸಿಕೆ ನೀಡಲು ಈಗಾಗಲೇ ಯೋಜನೆ ರೂಪಿಸಲಾಗುತ್ತಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಈ ಸಂಬಂಧ ಈಗಾಗಲೇ ಸೂಚನೆ ನೀಡಿದ್ದು, ಭಾರತೀಯ ಒಲಿಂಪಿಕ್ ಸಮಿತಿ (ಐಒಎ) ಕೂಡ ಕೇಂದ್ರ ಸರಕಾರದ ಜತೆಗೆ ಮಾತುಕತೆ ನಡೆಸುತ್ತಿದೆ.
ಕ್ರೀಡಾಪಟುಗಳು ಲಸಿಕೆ ತೆಗೆದು ಕೊಳ್ಳುವುದು ಕಡ್ಡಾಯವಲ್ಲದಿದ್ದರೂ ಅವರು ಲಸಿಕೆಯ 2 ಡೋಸ್ ತೆಗೆದು ಕೊಳ್ಳುವಂತೆ ಮನ ಒಲಿಸುವ ಪ್ರಯತ್ನ ನಡೆಸಲಾಗುವುದು ಎಂದರು.
ಇದನ್ನೂ ಓದಿ:ತವರಲ್ಲಿ ಅತ್ಯಧಿಕ ಟೆಸ್ಟ್ ಗೆಲುವು : ದಾಖಲೆಯತ್ತ ವಿರಾಟ್ ಕೊಹ್ಲಿ
ಪ್ರೇಕ್ಷಕರಿಗೆ ಅವಕಾಶ
ಸದ್ಯ ದೇಶದಲ್ಲಿನ ಕೊರೊನಾ ಸೋಂಕಿನ ಪ್ರಮಾಣವನ್ನು ನಿಕಟವಾಗಿ ಅವಲೋಕಿಸುತ್ತಿದ್ದು, ಶೀಘ್ರದಲ್ಲಿಯೇ ದೇಶದಲ್ಲಿ ನಡೆಯುವ ಕ್ರೀಡಾಕೂಟಕ್ಕೆ ಪ್ರೇಕ್ಷರೀಗೆ ಅವಕಾಶ ನೀಡುವ ಕುರಿತು ರಾಜ್ಯ ಮತ್ತು ಕೇಂದ್ರ ಸರಕಾರದ ಸಲಹೆ ಸೂಚನೆಯನ್ನು ಪಡೆದುಕೊಳ್ಳಲಾಗುತ್ತಿದೆ ಎಂದು ಧುಮಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Asian hockey champions: ದಕ್ಷಿಣ ಕೊರಿಯಾವನ್ನು ಕೆಡವಿದ ಭಾರತ
ATP Rankings; ಸಿನ್ನರ್ಗೆ ವರ್ಷಾಂತ್ಯದ ನಂ.1 ರ್ಯಾಂಕ್ ಟ್ರೋಫಿ
ICC: ಪಾಕಿಸ್ತಾನದ ಕೈತಪ್ಪಿದ ಚಾಂಪಿಯನ್ಸ್ ಟ್ರೋಫಿ ಆಯೋಜನೆ: ಬದಲಿ ದೇಶದ ಆಯ್ಕೆ
Shami: ಕೊನೆಗೂ ವೃತ್ತಿಪರ ಕ್ರಿಕೆಟ್ ಗೆ ಮರಳಿದ ಮೊಹಮ್ಮದ್ ಶಮಿ
Japan: ಇಂದಿನಿಂದ ಕುಮಮೋಟೊ ಓಪನ್: ಸಿಂಧು, ಲಕ್ಷ್ಯ ಮೇಲೆ ಹೆಚ್ಚಿನ ನಿರೀಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.