ಕುಡಿವ ನೀರು ಪೂರೈಕೆಗೆ ಅನುದಾನ ನೀಡಿ
Team Udayavani, Feb 1, 2021, 2:16 PM IST
ಕಾರವಾರ: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆ ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪಗೆ ಶಾಸಕಿ ರೂಪಾಲಿ ಎಸ್. ನಾಯ್ಕ ಮನವಿ ಸಲ್ಲಿಸಿದರು.
ಕಾರವಾರ ಹಾಗೂ ಅಂಕೋಲಾ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ವಿಪರೀತವಾಗಿ ಕಾಡುತ್ತದೆ. ಅಲ್ಲದೇ ಸಮುದ್ರವು ಹತ್ತಿರ ಇರುವುದರಿಂದ ಬಾವಿಗಳಲ್ಲಿ ಉಪ್ಪು ನೀರಿನ ಸಮಸ್ಯೆಯನ್ನು ಜನರು ಅನುಭವಿಸುತ್ತಿದ್ದಾರೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಜಲಜೀವನ ಮಿಷನ್ ಯೋಜನೆಯಡಿ ಕಾಳಿ ನದಿಯಿಂದ ಕಾರವಾರದಕೆರವಡಿ ಗ್ರಾಪಂ ವ್ಯಾಪ್ತಿಯ 14 ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗುತ್ತಿದ್ದು, ಇದರ ನವೀಕರಣಕ್ಕೆ ಹಾಗೂ ಗೋಟೆಗಾಳಿಯಲ್ಲಿ ಕುಡಿಯುವ ನೀರಿನ ಘಟಕ ಸ್ಥಾಪಿಸಿದರೆ 9 ಗ್ರಾಮಗಳಿಗೆ ನೀರಿನ ವ್ಯವಸ್ಥೆಯಾಗುತ್ತದೆ. ಅಂಕೋಲಾ ತಾಲೂಕಿನ ಹಿಲ್ಲೂರು, ಮೊಗಟಾ, ಅಗ್ರಗೋಣ, ವಾಸರಕುದ್ರಗಿ, ಬೆಳಸೆ ಸಗಡಗೇರಿ ಗ್ರಾಪಂ ವ್ಯಾಪ್ತಿಯ 25 ಗ್ರಾಮಗಳಿಗೆ ಜಲ ಜೀವನ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಕೆಗೆ ಸೂಕ್ತ ಅನುದಾನ ನೀಡುವಂತೆ ಮನವಿ ಸಲ್ಲಿಸಿದರು.
ಇದನ್ನೂ ಓದಿ:ಜೀವನ ಸಾಧನೆಯಲ್ಲ ಶೋಧನೆಯಾಗಲಿ: ವಿನಯ ಗುರೂಜಿ
ಪ್ರವಾಹದಲ್ಲಿ ಹಾನಿಯಾದ ರಸ್ತೆ ಅಭಿವೃದ್ಧಿ: 2019ರಲ್ಲಿ ಹಾಗೂ 2020ರಲ್ಲಿ ಕಾರವಾರ ಅಂಕೋಲಾ ತಾಲೂಕಿನಲ್ಲಿ ಪ್ರವಾಹದಿಂದಾಗಿ ಹಲವಾರು ರಸ್ತೆಗಳು ಹಾನಿಯಾಗಿವೆ. ಇಲ್ಲಿಯ ಜನರ ಓಡಾಟಕ್ಕೆ ತೀವ್ರ ಸಮಸ್ಯೆಯಾಗುತ್ತಿದ್ದು, ಅದನ್ನು ನಿವಾರಿಸುವುದಕ್ಕೆ ಹಾಗೂ ರಸ್ತೆಗಳ ಅಭಿವೃದ್ಧಿಗೆ ಹನ್ನೆರಡು ಕೋಟಿಗೂ ಹೆಚ್ಚಿನ ಅನುದಾನ ನೀಡಬೇಕು. ಅಲ್ಲದೇ ಅಂಕೋಲಾ ತಾಲೂಕಿನ ಗ್ರಾಮೀಣ ರಸ್ತೆಗಳ ನಿರ್ವಹಣೆ ಮಾಡಲು ನೀಡಿದ ಪ್ರಸ್ತಾವನೆಯನ್ನು ಮಂಜೂರು ಮಾಡುವಂತೆ ಶಾಸಕರಾದ ರೂಪಾಲಿ ಎಸ್. ನಾಯ್ಕ ಸಚಿವರಿಗೆ ಮನವಿ ಸಲ್ಲಿಸಿದರು. ಕಾರವಾರ ಮತ್ತು ಅಂಕೋಲಾ ತಾಲೂಕಿನಲ್ಲಿ ಕೆಲವೊಂದು ಗ್ರಾಪಂ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಇಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡುವುದು ಅವಶ್ಯಕವಾಗಿದೆ. ಈ ಎರಡೂ ತಾಲೂಕಿನಲ್ಲಿಯೂ ಗ್ರಾಪಂ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದೆ. ಅದಕ್ಕಾಗಿ ಪಂಚಾಯತಿ ಕಟ್ಟಡಗಳ ನಿರ್ಮಾಣ ಅವಶ್ಯಕವಾಗಿರುವುದರಿಂದ ಶೀಘ್ರದಲ್ಲಿ ಅನುದಾನ ಬಿಡುಗಡೆಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.