ವಿಜಯಪುರ: ದೆಹಲಿ ರೈತರ ಹೋರಾಟಕ್ಕೆ ಬೆಂಬಲ

ರೈತ ಸಂಘಟನೆಗಳ ಹೋರಾಟವನ್ನೇ ಒಡೆಯುವ ಹುನ್ನಾರ ನಡೆಯುತ್ತಿದೆ.

Team Udayavani, Feb 1, 2021, 6:30 PM IST

ವಿಜಯಪುರ: ದೆಹಲಿ ರೈತರ ಹೋರಾಟಕ್ಕೆ ಬೆಂಬಲ

ವಿಜಯಪುರ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು. ಎಐಕೆಎಸ್‌ಸಿಸಿ, ಪ್ರಗತಿಪರ ಸಂಘಟನೆಗಳ ವೇದಿಕೆ, ವಿಜಯಪುರ ವಿದ್ಯಾರ್ಥಿ, ಯುವಜನ ದಲಿತ, ಕಾರ್ಮಿಕ, ಮಹಿಳಾ ಸಂಘಟನೆಗಳ ಸಹಯೋಗದಲ್ಲಿ ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರು ಧರಣಿಯಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರಪಿತ ಗಾಂಧೀಜಿ ಹುತಾತ್ಮರಾದ ದಿನದ ಸ್ಮರಣೆ ಹಾಗೂ ದೆಹಲಿ ಹೋರಾಟದಲ್ಲಿ ಹುತಾತ್ಮರಾದ ರೈತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ರೈತರ ನ್ಯಾಯಯುತ ಹೋರಾಟ ಯಶಸ್ವಿಯಾಗಲಿ. ದೆಹಲಿ ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪಿಗಳನ್ನು ಬಂ ಧಿಸಿ ಶಿಕ್ಷಿಸಬೇಕು. ರೈತರ ಹೋರಾಟ ಹತ್ತಿಕ್ಕುತ್ತಿರುವ ಪ್ರಜಾತಂತ್ರದ ವಿರೋಧಿ  ಸರ್ಕಾರ ಪ್ಯಾಸಿಸ್ಟ್‌ ವಾದವನ್ನು ಬೆಳೆಸುತ್ತಿದೆ. ಪ್ರಜಾತಂತ್ರದ ಮೌಲ್ಯಗಳು ಎತ್ತಿ ಹಿಡಿಯಲು ಎಲ್ಲರೂ ರೈತರ ಹೋರಾಟ ಬೆಂಬಲಿಸಬೇಕು. ರೈತ ಹುತಾತ್ಮರಿಗೆ ಸ್ಮರಣೆಯ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಕೃಷಿ ಕಾಯ್ದೆ ಹಿಂಪಡೆಯದ ಕೇಂದ್ರ ಹಾಗೂ ರಾಜ್ಯ ಸರಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.

ಕಾರ್ಮಿಕರ ನಾಯಕ ಭೀಮಶಿ ಕಲಾದಗಿ ಮಾತನಾಡಿ, ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ರೈತರು ನಡೆಸಿದ ಶಾಂತ ರೀತಿಯಿಂದ ಟ್ರಾಕ್ಟರ್‌ ಪರೇಡ್‌ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕೆಂಪು ಕೋಟೆಗೆ ಪ್ರವೇಶಿಸಿ ರಾಷ್ಟ್ರಧ್ವಜಕ್ಕೆ ಅಪಮಾನ ರೀತಿಯಲ್ಲಿ ವರ್ತಿಸಿದ್ದಾರೆ. ದುರುದ್ದೇಶದಿಂದ ನಡೆದ ಇಂಥ ರಾಷ್ಟ್ರದ್ರೋಹದ ಕೆಲಸವನ್ನು ಇಡಿ ದೇಶವೇ ಖಂಡಿಸುತ್ತದೆ. ರೈತರಿಗೆ ಕೆಟ್ಟ ಹೆಸರು ತರುವ ಹುನ್ನಾರ ನಡೆಸಿದವರು ಇದೀಗ ಸಿಕ್ಕಿಬಿದ್ದಿದ್ದು, ಅವರ ಹಿನ್ನೆಲೆಯೂ ಬಹಿರಂಗವಾಗಿದೆ. ಇಂಥ ದೇಶದ್ರೋಹಿ ಕೃತ್ಯ ಎಸಗಿದವರಿಗೆ ಉಗ್ರ ಶಿಕ್ಷೆ ಕೊಡಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಆರ್‌ಕೆಎಸ್‌ ರೈತ ಸಂಘಟನೆ ರಾಜ್ಯ ಮುಖಂಡ ಬಿ.ಭಗವಾನ್‌ ರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರದ ಹುನ್ನಾರದಿಂದಾಗಿ ಬಹುರಾಷ್ಟ್ರೀಯ-ಕಾರ್ಪೊರೇಟ್‌ ಕಂಪನಿಗಳ ಮೋಸ, ಶೋಷಣೆಗೆ ರೈತರು ಬಲಿಯಾಗುತ್ತಾರೆ. ಗುತ್ತಿಗೆ ಕೃಷಿ ಹೆಸರಿನಲ್ಲಿ ರೈತರಿಂದ ಅವರ ಜೀವನೋಪಾಯದ ಏಕೈಕ ಸಾಧನವಾಗಿರುವ ಕೃಷಿ ಭೂಮಿ ಕಿತ್ತುಕೊಳ್ಳಲಾಗುತ್ತದೆ. ಕೃಷಿಯನ್ನು ಖಾಸಗಿ ಕಂಪನಿಗಳ ನಿಯಂತ್ರಣಕ್ಕೆ ತರುವ ಮೂಲಕ ರೈತರು ಸಂಪೂರ್ಣ ತಮ್ಮ ಸ್ವಾತಂತ್ರ್ಯ ಕಳೆದುಕೊಂಡು ಕಂಪನಿಗಳ ಹಂಗಿನಲ್ಲಿ, ಬಂಡವಾಳಶಾಹಿ ಉದ್ಯಮಿಗಳಿಗೆ ಭೂಮಿ ಪಾಲಾಗುತ್ತಿದ್ದು ಭಾರತದ ಭವಿಷ್ಯದ ಕೃಷಿ ಹಾಗೂ ಆಹಾರ ಸ್ಥಿತಿ ಗಂಭೀರ ಸ್ವರೂಪ ಪಡೆಯಲಿದೆ ಎಂದು ದೂರಿದರು.

ರೈತ ಮುಖಂಡ ಪ್ರಕಾಶ ಹಿಟ್ನಳ್ಳಿ ಮಾತನಾಡಿ, ಕೇಂದ್ರ ಸರ್ಕಾರ ರೈತ ನಾಯಕರೊಂದಿಗೆ ಹಲವು ಬಾರಿ ಮಾತುಕತೆ ನಡೆಸಿದರೂ ರೈತ ವಿರೋಧಿ  ಕಾಯ್ದೆಗಳನ್ನು ಕೈಬಿಡಲು ಮುಂದಾಗದೇ ಹಠಮಾರಿ ಧೋರಣೆ ಅನುರಿಸಿದೆ. ಮತ್ತೂಂದೆಡೆ ಹೋರಾಟವನ್ನು ಹತ್ತಿಕ್ಕಿ, ರೈತ ಸಂಘಟನೆಗಳ ಹೋರಾಟವನ್ನೇ ಒಡೆಯುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಹೋರಾಟದ ದಿಕ್ಕು ತಪ್ಪಿಸಲು ಕುತಂತ್ರ ನಡೆಸುತ್ತಿದ್ದು, ಚಳವಳಿಗೆ ಕಳಂಕ ಹಚ್ಚಲು ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರ್‌ಕೆಎಸ್‌ ಜಿಲ್ಲಾ ಸಂಚಾಲಕ ಬಾಳು ಜೇವೂರ ಮಾತನಾಡಿ, ಗಣರಾಜ್ಯೋತ್ಸವ ನಂತರವೂ ಇನ್ನೂ ಹೆಚ್ಚು ರೈತರು ಹೋರಾಟದಲ್ಲಿ ಭಾಗಿಯಾಗುತ್ತಿದ್ದಾರೆ. ಆದರೆ ಮಾಧ್ಯಮಗಳು ಮಾತ್ರ ರೈತ ಹೋರಾಟದ ಸುದ್ದಿಯನ್ನು ಪ್ರಕಟಿಸುವ, ಬಿತ್ತರಿಸದೇ ಸರ್ಕಾರದ ಪರ ಕೆಲಸ ಮಾಡುತ್ತಿವೆ. ದೆಹಲಿಯಲ್ಲಿ ಕೊರೆಯುವ ಚಳಿಯನ್ನು ಲೆಕ್ಕಿಸದೆ ಲಕ್ಷಾಂತರ ರೈತರು ತಮ್ಮ ಟ್ರಾಕ್ಟರ್‌ಗಳೊಂದಿಗೆ ಹೋರಾಟದಲ್ಲಿ ಪಾಲ್ಗೊಂಡಿದ್ದರೂ ರೈತರ ಹೋರಾಟದ ವಾಸ್ತವ ಚಿತ್ರಣ ವರದಿಯಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಗತಿಪರ ಸಂಘಟನೆಗಳ ವೇದಿಕೆಯ ಅಣ್ಣಾರಾಯ ಈಳಗೇರ, ಶಕ್ತಿಕುಮಾರ, ಸುಜಾತಾ ಶಿಂಧೆ, ಸಿದ್ದಲಿಂಗ ಬಾಗೇವಾಡಿ, ಇರ್ಫಾನ್‌ ಶೇಖ, ಸದಾನಂದ ಮೋದಿ, ಲಕ್ಷ್ಮಣ ಹಂದ್ರಾಳ, ಮಲ್ಲಿಕಾರ್ಜುನ, ಸುರೇಖಾ ರಜಪೂತ, ಸಿ.ಬಿ. ಪಾಟೀಲ, ಭರತಕುಮಾರ, ದಸ್ತಗೀರ್‌ ಸಾಲೋಟಗಿ, ಶಂಕರಗೌಡ ಲಿಗಾಡೆ, ಆಕಾಶ, ಸಂಗಪ್ಪ ಕಪಾಳೆ, ಶೋಭಾ ಬಗಲಿ, ಲತಾ ಇಟಿ, ಗೌರಿ, ಕಾವೇರಿ ಸಂದೀಪ ವಠಾರ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.