ಸಮಗ್ರ ದೃಷ್ಟಿಕೋನದ ಸಮತೋಲಿತ ಬಜೆಟ್: ಎನ್. ರವಿಕುಮಾರ್
Team Udayavani, Feb 1, 2021, 8:45 PM IST
ಬೆಂಗಳೂರು: ಕೇಂದ್ರ ಸರಕಾರ ಇಂದು ಸಮಗ್ರ ದೃಷ್ಟಿಕೋನದ ಸಮತೋಲಿತ ಬಜೆಟ್ ಮಂಡಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ವಿಶ್ಲೇಷಿಸಿದರು.
ನಗರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ 2021-22ರ ಕೇಂದ್ರ ಬಜೆಟ್ ಕುರಿತಂತೆ ಪತ್ರಕರ್ತರ ಜೊತೆ ಮಾತನಾಡಿದ ಅವರು, ಚಹಾ ಕಾರ್ಮಿಕರ ಕಲ್ಯಾಣಕ್ಕೆ 1,000 ಕೋಟಿ ನೀಡಲಾಗಿದೆ. ಪರಿಶಿಷ್ಟ ಪಂಗಡದವರಿಗೆ 758 ಮಾದರಿ ಶಾಲೆ ತೆರೆಯುತ್ತಿರುವುದು ಮಹತ್ವದ ಕ್ರಮವಾಗಿದೆ. 34 ವರ್ಷಗಳ ನಂತರ ಎರಡು ಬಜೆಟ್ ನಲ್ಲಿ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಿದ್ದು, 93,500 ಕೋಟಿ ಹಣ ನೀಡಲಾಗುತ್ತಿದೆ ಎಂದು ವಿವರಿಸಿದರು.
ಈ ಬಾರಿಯ ಬಜೆಟ್ ನಲ್ಲಿ ಕೃಷಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಕನಿಷ್ಠ ಬೆಂಬಲ ಬೆಲೆಗೆ ಹೆಚ್ಚು ಹಣ ಮೀಸಲಿಡಲಾಗಿದೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸೇರಿಸಿದರೆ 2,65,000 ಕೋಟಿ ಹಣ ಕೊಡಲಾಗುತ್ತಿದೆ ಎಂದು ತಿಳಿಸಿದರು.
ಸೈನ್ಯ ಆಧುನೀಕರಣಕ್ಕೆ, ಸ್ವಾವಲಂಬಿತನಕ್ಕೆ, ಸಂಶೋಧನೆಗೆ ಹೆಚ್ಚು ಹಣ ನೀಡಲಾಗುತ್ತಿದೆ. ರೈಲ್ವೆಗೂ ವಿಶೇಷ ಒತ್ತು ನೀಡುತ್ತಿದ್ದು, ರಸ್ತೆಗಳ ವಿಚಾರದಲ್ಲಿ ಕ್ರಾಂತಿ ನಡೆಯುತ್ತಿದೆ ಎಂದು ವಿವರಿಸಿದರು.
ಇದನ್ನೂ ಓದಿ:Budget 2021: ಹಿರಿಯ ನಾಗರಿಕರಿಗೆ ತೆರಿಗೆ ರಿಲೀಫ್: ಅಗ್ಗದ ಸಾಲ ನೀಡಲು ಕೇಂದ್ರದ ಒತ್ತು
ಬೇರೆ ದೇಶಗಳಿಗೆ ಹೋಲಿಸಿದರೆ ಕೋವಿಡ್ ನಂತರ ಆರ್ಥಿಕ ಪುನಶ್ಚೇತನ ಹೊಂದುತ್ತಿರುವ ಪ್ರಮುಖ ದೇಶವಾಗಿ ಭಾರತ ಹೊರಹೊಮ್ಮಿದೆ. ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರ ಅತ್ಯುತ್ತಮ ಕಾರ್ಯವೈಖರಿ, ಕಾರ್ಯನಿರ್ವಹಣೆ ಇದಕ್ಕೆ ಕಾರಣ. ಮಹಿಳೆ, ದಲಿತರ, ಹಿಂದುಳಿದವರ ಪರ, ಗ್ರಾಮೀಣರ ಪರ ಬಜೆಟ್ ಇದಾಗಿದೆ. ಹಾಗೆಂದು ನಗರ ಪ್ರದೇಶಗಳನ್ನು ಕಡೆಗಣಿಸಿಲ್ಲ. 500 ಅಮೃತ ನಗರ ಘೋಷಣೆ ಮೂಲಕ ಎಲ್ಲಾ ರೀತಿಯ ಮೂಲಸೌಕರ್ಯ ನೀಡಲಾಗುತ್ತಿದೆ. ಶಿಕ್ಷಣ, ಆರೋಗ್ಯ, ಕೃಷಿ ಸೇರಿ ಎಲ್ಲಾ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ ಎಂದರು.
ಪಕ್ಷದ ರಾಜ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು, ದೇಶದ ಆರ್ಥಿಕ ಪುನಶ್ಚೇತನಕ್ಕೆ ಪೂರಕ ಯೋಜನೆಗಳನ್ನು ಪ್ರಕಟಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು. ಬೆಂಗಳೂರಿಗೆ ಮೆಟ್ರೊ ವಿಸ್ತರಣೆಗೆ 14,788 ಕೋಟಿ ರೂಪಾಯಿ, ಬೆಂಗಳೂರು- ಮಂಗಳೂರು ಹೆದ್ದಾರಿಯ ಶಿರಾಡಿ ಘಾಟ್ 6 ಸುರಂಗ ನಿರ್ಮಾಣಕ್ಕೆ 10 ಸಾವಿರ ಕೋಟಿ ರೂಪಾಯಿ, ಉತ್ತರ ಕರ್ನಾಟಕದಲ್ಲಿ 23.000 ಕೋಟಿ ರೂಪಾಯಿ ವೆಚ್ಚದಲ್ಲಿ ಹೆದ್ದಾರಿಗಳ ನಿರ್ಮಾಣಕ್ಕೆ ಹಣ ನೀಡಿದ್ದನ್ನು ಸ್ವಾಗತಿಸುವುದಾಗಿ ತಿಳಿಸಿದರು.
ಇದನ್ನೂ ಓದಿ:ಮಂಗಳೂರು: ದೇವಸ್ಥಾನದ ಹುಂಡಿ ಕಳ್ಳತನ, ಭಗವಧ್ವಜಕ್ಕೆ ಅವಮಾನ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ
ಆರ್ಥಿಕ ಪುನಶ್ಚೇತನಕ್ಕೆ ಒತ್ತು ಹಾಗೂ ಜನತೆಯ ಮನಸ್ಸಿನಲ್ಲಿ ವಿಶ್ವಾಸ ಮೂಡಿಸುವ ಬಜೆಟ್ ಇದಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.