ಸೂರಿಕುಮೇರು: ಗ್ಯಾಸ್ ಟ್ಯಾಂಕರ್ ಪಲ್ಟಿ; ಸುತ್ತಮುತ್ತಲಿನಲ್ಲಿ ಬೆಂಕಿ ಬಳಸದಂತೆ ಮನವಿ
Team Udayavani, Feb 2, 2021, 7:47 AM IST
ವಿಟ್ಲ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರು ಬಳಿ ಗ್ಯಾಸ್ ಟ್ಯಾಂಕರ್ ಒಂದು ರಸ್ತೆಗೆ ಉರುಳಿದ ಘಟನೆ ನಡೆದಿದೆ. ಪರಿಣಾಮ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಸುತ್ತಮುತ್ತಲಿನ ಮನೆಗಳಲ್ಲಿ ಗ್ಯಾಸ್ ಬಳಸದಂತೆ ಮನವಿ ಮಾಡಲಾಗಿದೆ.
ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಅನಿಲ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದು ರಸ್ತೆ ಉರುಳಿದೆ. ಇದರಿಂದ ಅನಿಲ ಸೋರಿಗೆ ಉಂಟಾಗುವ ಸಾಧ್ಯತೆಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲಾ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅನಿಲ ಸೋರಿಕೆ ನಿಯಂತ್ರಿಸುವ ತಾಂತ್ರಿಕ ತಂಡ ಸ್ಥಳಕ್ಕೆ ಆಗಮಿಸಿ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಇನ್ನೂ ಮಂಗಳೂರು ಕಡೆಯಿಂದ ಬರುವ ವಾಹನವನ್ನು ಕಲ್ಲಡ್ಕ, ವಿಟ್ಲ ರಸ್ತೆ ಮೂಲಕ ಹಾಗೂ ಬೆಂಗಳೂರು, ಉಪ್ಪಿನಂಗಡಿ ಕಡೆಯಿಂದ ಬರುವ ವಾಹನಗಳನ್ನು ಮಾಣಿ, ಬುಡೋಳಿ, ಕಬಕ ಮೂಲಕ ಬದಲಿ ರಸ್ತೆಯ ವ್ಯವಸ್ಥೆ ಮಾಡಲಾಗಿದೆ. ಸ್ಥಳದಲ್ಲಿ ವಿಟ್ಲ ಪೊಲೀಸರು, ಅಗ್ನಿಶಾಮಕದಳವರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವಿವಿಧ ಭಾಗದಲ್ಲಿ ಬುಡೋಳಿ ಯೂತ್ ಫೆಡರೇಶನ್, ಸೂರಿಕುಮೇರು ಬದ್ರಿಯಾ ಯಂಗ್ ಮೆನ್ಸ್ ಸದಸ್ಯರು, ಸಾರ್ವಜನಿಕರು ವಾಹನ ಸಂಚಾರವನ್ನು ನಿಯಂತ್ರಿಸುತ್ತಿದ್ದಾರೆ. ಅನಿಲ ಸೋರಿಕೆಯಾಗದ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಇನ್ನೂ ಮಸೀದಿ ಧ್ವನಿ ವರ್ಧಕದ ಮೂಲಕ ಸುತ್ತಮುತ್ತಲಿನ ಭಾಗದ ಮನೆಗಳಲ್ಲಿ ಬೆಂಕಿ ಬಳಸದಂತೆ ಸೂಚನೆ ನೀಡಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.