“ಮಹಾ ಯಡವಟ್ಟು”: 12 ಮಕ್ಕಳಿಗೆ ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್: ಮಕ್ಕಳು ಅಸ್ವಸ್ಥ
ಅಸ್ವಸ್ಥಗೊಂಡಿರುವ ಮಕ್ಕಳನ್ನು ಯವಟ್ಮಾಲ್ ಸರ್ಕಾರಿ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ
Team Udayavani, Feb 2, 2021, 1:13 PM IST
ಮಹಾರಾಷ್ಟ್ರ: ಮುಂಬೈನಿಂದ 700 ಕಿಲೋ ಮೀಟರ್ ದೂರದಲ್ಲಿರುವ ಮಹಾರಾಷ್ಟ್ರದ ಯವಟ್ಮಾಲ್ ಜಿಲ್ಲೆಯ ಹಳ್ಳಿಯಲ್ಲಿ 12 ಮಕ್ಕಳಿಗೆ ಪೋಲೀಯೊ ಲಸಿಕೆ ಹಾಕುವ ಬದಲು ಸ್ಯಾನಿಟೈಸರ್ ನೀಡುವ ಮೂಲಕ ದೊಡ್ಡ ಬೇಜವಾಬ್ದಾರಿಯ ಘಟನೆಯೊಂದು ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಟ್ವೀಟರ್ ಹೇಳುವುದೇನು?; 250 ಖಾತೆಗಳನ್ನು ತಡೆಹಿಡಿದ ಟ್ವಿಟರ್
ಎಲ್ಲಾ ಮಕ್ಕಳು 5 ವರ್ಷಕ್ಕಿಂತ ಕೆಳಗಿನವರಾಗಿದ್ದು, ಪೋಲೀಯೊ ಲಸಿಕೆ ಬದಲು ಸ್ಯಾನಿಟೈಸರ್ ನೀಡಿದ್ದರಿಂದ ಅಸ್ವಸ್ಥಗೊಂಡ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಆರೋಗ್ಯ ಸ್ಥಿರವಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಬೇಜವಾಬ್ದಾರಿಗೆ ಕಾರಣರಾದ ಮೂವರು ಆರೋಗ್ಯ ಸಿಬಂದಿಗಳು ಕ್ರಮ ಎದುರಿಸುವಂತಾಗಿದೆ.
ಭಾನುವಾರ(ಜನವರಿ 31) 1ರಿಂದ 5 ವರ್ಷದ ಮಕ್ಕಳಿಗೆ ರಾಷ್ಟ್ರೀಯ ಪಲ್ಸ್ ಪೋಲೀಯೋ ಲಸಿಕೆ ನೀಡುವ ಅಭಿಯಾನದಲ್ಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ತ್ರಿಪುರಾ-ಬಾಂಗ್ಲಾ ಗಡಿಯಲ್ಲಿ ಗೋ ಕಳ್ಳ ಸಾಗಣೆ, ಬಿಎಸ್ ಎಫ್ ಮೇಲೆ ಹಲ್ಲೆ: ಗುಂಡಿನ ದಾಳಿ
ಪೋಲೀಯೋ ಲಸಿಕೆ ಬದಲು ಎಲ್ಲಾ ಮಕ್ಕಳಿಗೂ ಸ್ಯಾನಿಟೈಸರ್ ನೀಡಿದ್ದು, ಅಸ್ವಸ್ಥಗೊಂಡಿರುವ ಮಕ್ಕಳನ್ನು ಯವಟ್ಮಾಲ್ ಸರ್ಕಾರಿ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪರಿಷತ್ ಸಿಇಒ ಶ್ರೀಕೃಷ್ಣಾ ಪಂಚಾಲ್ ತಿಳಿಸಿದ್ದಾರೆ.
ಈ ಘಟನೆ ನಡೆಯುವ ವೇಳೆ ವೈದ್ಯರು, ಅಂಗನವಾಡಿ ಕಾರ್ಯಕರ್ತೆ ಹಾಗೂ ಆಶಾ ಕಾರ್ಯಕರ್ತೆಯೊಬ್ಬರು ಹಾಜರಿದ್ದರು ಎಂಬುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿರುವುದಾಗಿ ವರದಿ ತಿಳಿಸಿದೆ. ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು, ಮೂವರನ್ನು ಅಮಾನತು ಮಾಡಲು ಆದೇಶ ನೀಡಲಾಗಿದೆ ಎಂದು ಪಂಚಾಲ್ ತಿಳಿಸಿದ್ದಾರೆ.
ಮಹಾರಾಷ್ಟ್ರ, ಪೋಲೀಯೊ ಲಸಿಕೆ, ಸ್ಯಾನಿಟೈಸರ್, Children, Polio Vaccine, Sanitizer, Mumbai, Udayavani kannada news
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.