ಕಂದಾಚಾರ ಖಂಡಿಸಿದ್ದವರು ಮಡಿವಾಳ ಮಾಚಿದೇವ
Team Udayavani, Feb 2, 2021, 6:50 PM IST
ಚಿಕ್ಕಬಳ್ಳಾಪುರ: 12ನೇ ಶತಮಾನದಲ್ಲಿ ಸಮಾಜ ದಲ್ಲಿನ ಮೂಢನಂಬಿಕೆ, ಧಾರ್ಮಿಕ ಕಂದಾಚಾರ ಗಳನ್ನು ಖಂಡಿಸಿ, ಸಮಾಜಕ್ಕೆ ಸನ್ಮಾರ್ಗ ತೋರಿದ ಶರಣರಲ್ಲಿ ಮಡಿವಾಳ ಮಾಚಿದೇವ ಪ್ರಮುಖರಾಗಿ ದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಎಚ್. ಅಮರೇಶ್ ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಮಡಿವಾಳ ಮಾಚಿ ದೇವರ ಜಯಂತಿ ಕಾರ್ಯಕ್ರಮದಲ್ಲಿ ಮಾಚಿ ದೇವರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ ಅವರು ಮಾತನಾಡಿದರು.
ಮಹಾನ್ ಶರಣರು ನಡೆಸಿದ ವಚನ ಚಳವಳಿಯು ಅದ್ಭುತ ಕಾರ್ಯವಾಗಿತ್ತು ಮಡಿವಾಳ ಮಾಚಿದೇವ ಶರಣರ ಬಟ್ಟೆಗಳನ್ನು ಮಡಿ ಮಾಡುವ ಕಾರ್ಯ ಬಹಳ ನಿಷ್ಠೆಯಿಂದ ಮಾಡುತ್ತಿದ್ದರು. ಅವರ ಕಾರ್ಯ ನಿಷ್ಠೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದರು.
ಇದನ್ನೂ ಓದಿ:ಶೀಘ್ರದಲ್ಲೇ ನರ್ಸರಿಗಳನ್ನು ಪ್ರಾರಂಭಿಸುತ್ತೇವೆ : ಕೇಜ್ರಿವಾಲ್
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ರೇಣುಕಾ, ಜಿಲ್ಲಾ ಪಂಚಾ ಯತ್ ಯೋಜನಾ ನಿರ್ದೇಶಕ ಗಿರಿಜಾಶಂಕರ್, ಮಡಿವಾಳ ಸಮಾಜದ ಮುಖಂಡ ಡಾ . ರಂಗಯ್ಯ, ಮಡಿವಾಳ ಮಾಚಿದೇವರ ಸಂಘದ ಜಿಲ್ಲಾ ಧ್ಯಕ್ಷ ಪದ್ಮಾವತಮ್ಮ, ತಾಲೂಕು ಅಧ್ಯಕ್ಷ ಮುನಿ ನಾರಾಯಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇತರೆ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.