ಶಾಲಾ-ಕಾಲೇಜು ಶುಲ್ಕ ಸಮಸ್ಯೆ ಪರಿಹಾರಕ್ಕೆ ಸಮಿತಿಗಳ ರಚನೆ: ಸುರೇಶ್ ಕುಮಾರ್
Team Udayavani, Feb 3, 2021, 10:45 PM IST
ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಅನುದಾನರಹಿತ ಶಾಲಾ ಕಾಲೇಜುಗಳ ಶುಲ್ಕಗಳ ಕುರಿತ ಪೋಷಕರ ತಕರಾರುಗಳ ಪರಿಹಾರಕ್ಕೆ ಅಧಿಕಾರಯುಕ್ತ ಸಮಿತಿಗಳನ್ನು ರಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ 2020-21ನೇ ಸಾಲಿನಲ್ಲಿ ಖಾಸಗಿ ಅನುದಾನರಹಿತ ಶಾಲೆಗಳು 2019-20ನೇ ಸಾಲಿನ ಬೋಧನಾ ಶುಲ್ಕದ ಶೇ. 70ರಷ್ಟು ಮೊತ್ತವನ್ನು ಒಟ್ಟಾರೆ ಶುಲ್ಕವನ್ನಾಗಿ ಪಡೆಯಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಜ. 29ರಂದು ಆದೇಶ ಹೊರಡಿಸಿದ್ದು, ಆದೇಶದ ಭಾಗವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತಾಲಯ ಈ ಕುರಿತಾದ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಯುಕ್ತ ಸಮಿತಿಗಳನ್ನು ರಚಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ 6 ವಲಯಗಳಲ್ಲಿ ಪ್ರತ್ಯೇಕ ಸಮಿತಿಗಳು, ಮೈಸೂರು ಜಿಲ್ಲೆಯಲ್ಲಿ 2 ಸೇರಿದಂತೆ ರಾಜ್ಯದ ಎಲ್ಲ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಂದೊಂದು ಸಮಿತಿಯನ್ನು ರಚಿಸಲಾಗಿದೆ. ಇಲಾಖಾ ನಿರ್ದೇಶಕರು, ಸಹ ನಿರ್ದೇಶಕರು, ಡಿಡಿಪಿಐ, ಡಯಟ್ ಪ್ರಾಚಾರ್ಯರು, ಡಯಟ್‍ನ ಹಿರಿಯ ಉಪನ್ಯಾಸಕರನ್ನೊಳಗೊಂಡ ವಿವಿಧ ಜಿಲ್ಲಾ ಸಮಿತಿಗಳನ್ನು ರಚಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ:ಶಾಸಕ ಶ್ರೀನಿವಾಸ್ ಮಂತ್ರಿಯಾಗಲಿ: ಜಿ.ಟಿ.ದೇವೇಗೌಡ
ಪೋಷಕರು ಪ್ರಸ್ತುತ ವರ್ಷದ ಶುಲ್ಕ ಪಾವತಿಯ ಕುರಿತಾದ ಸಮಸ್ಯೆಗಳನ್ನು ಈ ಸಮಿತಿಯ ಮುಂದೆ ಪ್ರಸ್ತಾಪಿಸಿ ಪರಿಹರಿಸಕೊಳ್ಳಬಹುದೆಂದು ಸಚಿವರು ತಿಳಿಸಿದ್ದಾರೆ.
ಇಂತಹ ಸಮಸ್ಯೆಗಳ ಸಂದರ್ಭದಲ್ಲಿ, ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸುವ ಕುರಿತು ಪೋಷಕರು, ಶಾಲೆಗಳು ಯಾವ ಕ್ರಮಗಳನ್ನು ಅನುಸರಿಸಬೇಕು ಮತ್ತು ಅರ್ಜಿ ಸ್ವೀಕರಿಸುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸಮಿತಿಗಳ ಕರ್ತವ್ಯಗಳ ಕುರಿತು ಸವಿವರ ಕ್ರಮಗಳನ್ನು ಸುತ್ತೋಲೆಯಲ್ಲಿ ವಿವರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.