ತಿರುಗೇಟಿಗೆ ಸಿದ್ಧ :ರಾಜನಾಥ್‌ ಸಿಂಗ್

ಏರೋ  ಇಂಡಿಯಾದಲ್ಲಿ ನೆರೆಯ ದೇಶಗಳಿಗೆ ರಾಜನಾಥ್‌ಎಚ್ಚರಿಕೆ

Team Udayavani, Feb 4, 2021, 7:00 AM IST

rajnath singh speach

ಬೆಂಗಳೂರು: ನಮ್ಮ ಮೇಲೆ ಆಗಾಗ್ಗೆ ನಡೆಯುತ್ತಿವ ಅಹಿತಕರ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ತಿರುಗೇಟು ನೀಡುವುದಕ್ಕೆ ದೇಶ ಸಜ್ಜಾಗುತ್ತಿದೆ. ಗಡಿ ಮತ್ತು ಜನರ ರಕ್ಷಣೆಗಾಗಿ ಹೋರಾಡಲು ನಾವು ಸದಾ ಸಿದ್ಧ.

ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಶತ್ರು ದೇಶಗಳಿಗೆ ರವಾನಿಸಿದ ಸ್ಪಷ್ಟ ಸಂದೇಶ ಇದು. “ಏರೋ ಇಂಡಿಯಾ ಶೋ-2021’ಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು. ಸಿಂಗ್‌ ತಮ್ಮ ಭಾಷಣದಲ್ಲಿ ಯಾವುದೇ ರಾಷ್ಟ್ರದ ಹೆಸರು ಉಲ್ಲೇಖೀಸದೆ, ಗಡಿಯಲ್ಲಿ ಕಾಲು ಕೆರೆಯುವವರಿಗೆ ತಿರುಗೇಟು ನೀಡುವ ಸ್ಪಷ್ಟ ಸಂದೇಶವನ್ನು ರವಾನಿಸಿದರು.

ಒಂದು ರಾಷ್ಟ್ರದ ಪ್ರಾಯೋಜಿತ ಭಯೋತ್ಪಾದನೆಗೆ ಭಾರತ ಗುರಿಯಾಗಿದೆ. ರಕ್ಷಣ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳುವ ಮೂಲಕ ತಕ್ಕ ಉತ್ತರ ನೀಡುವುದಕ್ಕೆ ದೇಶ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದರು.

ಆಧುನೀಕರಣಕ್ಕೆ ಹಣದ ಹೊಳೆ
130 ಶತಕೋಟಿ ಡಾಲರ್‌ ವೆಚ್ಚದಲ್ಲಿ ಸೇನೆಯ ಆಧುನೀಕರಣಕ್ಕೆ ಯೋಜನೆ ರೂಪಿಸಲಾಗಿದೆ. ಇತ್ತೀಚೆಗೆ ಎಚ್‌ಎಎಲ್‌ಗೆ 48 ಸಾವಿರ ಕೋ.ರೂ. ಮೊತ್ತದಲ್ಲಿ 83 ಲಘು ಯುದ್ಧ ವಿಮಾನ (ಎಲ್‌ಸಿಎ)ಗಳ ಪೂರೈಕೆಗೆ ಗುತ್ತಿಗೆ ನೀಡಲಾಗಿದ್ದು, ಇದು “ಮೇಕ್‌ ಇನ್‌ ಇಂಡಿಯಾ’ದ ಅತೀ ದೊಡ್ಡ ಟೆಂಡರ್‌. 2024ರ ವೇಳೆಗೆ ರಕ್ಷಣ ಕ್ಷೇತ್ರದಲ್ಲಿ 1.75 ಲಕ್ಷ ಕೋ.ರೂ. ವಹಿವಾಟು ನಡೆಸುವ ಗುರಿ ಇದ್ದು, ಇದರಲ್ಲಿ 35 ಸಾವಿರ ಕೋಟಿ ರೂ. ಮೊತ್ತದ ವೈಮಾನಿಕ ಮತ್ತು ರಕ್ಷಣ ಉಪಕರಣಗಳ ರಫ್ತು ಸೇರಿದೆ. ಶೇ. 74ರಷ್ಟು ಸ್ವಯಂಪ್ರೇರಿತ ವಿದೇಶಿ ನೇರ ಬಂಡವಾಳ ಹೂಡಿಕೆ ಮತ್ತು ಸರಕಾರದ ಮೂಲಕ ಶೇ. 100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ ಮಾಡಬಹುದಾಗಿದೆ ಎಂದರು.

ಉದ್ಯಮಿಗಳಿಗೆ ಮುಕ್ತ ಆಹ್ವಾನ

ದೇಶವು ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಅತೀ ವೇಗವಾಗಿ ಬೆಳೆಯುತ್ತಿದೆ. ಜಾಗತಿಕ ವೈಮಾನಿಕ ಉದ್ದಿಮೆಗಳು ಇಲ್ಲಿ ಹೂಡಿಕೆ ಮಾಡಬೇಕು. ಇದಕ್ಕೆ ಸರಕಾರ ಎಲ್ಲ ಅಗತ್ಯ ಸಹಕಾರ ನೀಡಲು ಬದ್ಧ ಎಂದು ಮುಕ್ತ ಆಹ್ವಾನ ನೀಡಿದರು.

ಏರೋ ಇಂಡಿಯಾ ಸಂದರ್ಭ ಹಿಂದೂ ಮಹಾಸಾಗರ ಪ್ರದೇಶದ ರಾಷ್ಟ್ರಗಳ ರಕ್ಷಣ ಸಚಿವರ ಸಮಾವೇಶ ನಡೆಯಲಿದೆ. ಚೀಫ್ ಆಫ್ ಏರ್‌ ಸ್ಟಾಫ್ಗಳ ಸಮಾವೇಶ ಕೂಡ ಏರ್ಪಾಡಾಗಿದೆ ಎಂದರು.

ಇದಕ್ಕೆ ಮುನ್ನ ಸಚಿವ ರಾಜನಾಥ್‌ ಸಿಂಗ್‌, 83 ಎಲ್‌ಸಿಎ ಪೂರೈಕೆಗೆ ಸಂಬಂಧಿಸಿದ ಒಪ್ಪಂದ ಪ್ರಮಾಣಪತ್ರವನ್ನು ಎಚ್‌ಎಎಲ್‌ ಅಧ್ಯಕ್ಷ ಮತ್ತು ಎಂಡಿ ಮಾಧವನ್‌ ಅವರಿಗೆ ಹಸ್ತಾಂತರಿಸಿದರು.

ಇದನ್ನೂ ಓದಿ:ದಲಿತ ಮಕ್ಕಳಿಗೆ ನಾಲ್ಕು ಸೈನಿಕ ಶಾಲೆ: ಗೋವಿಂದ ಕಾರಜೋಳ

ಉದ್ಯಮಿಗಳಿಗೆ ಸಹಕಾರ

ಸಿಎಂ ಯಡಿಯೂರಪ್ಪ ಮಾತನಾಡಿ, ಬೆಂಗಳೂರು ವಿಶ್ವದ ವೈಮಾನಿಕ ಕ್ಷೇತ್ರದ ಹೂಡಿಕೆಯಲ್ಲಿ 3ನೇ ಅತೀ ದೊಡ್ಡ ನಗರ ಆಗಿದೆ. ಇದಕ್ಕೆ ಕಾರಣ ಇಲ್ಲಿರುವ ಕೈಗಾರಿಕೆಗೆ ಪೂರಕವಾದ ವಾತಾವರಣ. ಹೆಚ್ಚುವರಿ ವಿದ್ಯುತ್‌, ವೈಮಾನಿಕ ಕ್ಷೇತ್ರದ ಅಭಿವೃದ್ಧಿಗಾಗಿಯೇ ಪ್ರತ್ಯೇಕ ನೀತಿ ಸಹಿತ ಅನೇಕ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಕೊರೊನಾ ಹಾವಳಿ ನಡುವೆಯೂ 14 ರಾಷ್ಟ್ರಗಳು ಈ ಬಾರಿಯ ಪ್ರದ ರ್ಶನಕ್ಕೆ ಸಾಕ್ಷಿಯಾಗಿರುವುದು ರಾಜ್ಯ ಸರಕಾರದ ಆಡಳಿತದ ಮೇಲಿನ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ಉದ್ಯಮಿಗಳ ಹೂಡಿಕೆಗೆ ಅಗತ್ಯ ಸಹಕಾರ ನೀಡಲು ಸರಕಾರ ಸಿದ್ಧ ಎಂದರು.

ಟಾಪ್ ನ್ಯೂಸ್

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.