ಬಾಲಕಿ ಅತ್ಯಾಚಾರಿಗಳ ಬಂಧನಕ್ಕೆ ಆಗ್ರಹ
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕ-ಮಹಿಳಾ ಘಟಕದ ಕಾರ್ಯಕರ್ತರಿಂದ ಭಾರೀ ಪ್ರತಿಭಟನೆ
Team Udayavani, Feb 4, 2021, 8:59 PM IST
ಚಿಕ್ಕಮಗಳೂರು: ಶೃಂಗೇರಿ ತಾಲೂಕಿನಲ್ಲಿ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದಿಂದ ಜಿಲ್ಲೆಯ ಜನತೆ ತಲೆತಗ್ಗಿಸುವಂತಾಗಿದೆ. ಬಾಲಕಿ ಮೇಲೆ ದೌರ್ಜನ್ಯ ನಡೆಸಿದ ಎಲ್ಲಾ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಕಾಂಗ್ರೆಸ್ ರಾಜ್ಯ ಮಹಿಳಾ ಉಪಾಧ್ಯಕ್ಷೆ, ಜಿಪಂ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಆಗ್ರಹಿಸಿದರು.
ಮಂಗಳವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕ ಹಾಗೂ ಮಹಿಳಾ ಘಟಕದಿಂದ ಶೃಂಗೇರಿ ತಾಲೂಕಿನಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳನ್ನು ಶೀಘ್ರವೇ ಬಂ ಧಿಸಬೇಕೆಂದು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.
ಉತ್ತರ ಪ್ರದೇಶ ರಾಜ್ಯದಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ಘಟನೆಗಳು ವರದಿಯಾಗುತ್ತಿತ್ತು. ರಾಜ್ಯದಲ್ಲೂ ಇಂತಹ ಘಟನೆಗಳು ವರದಿಯಾಗುತ್ತಿರುವುದು ಖಂಡನೀಯ. 17ಕ್ಕೂ ಹೆಚ್ಚು ಮಂದಿ ಅತ್ಯಾಚಾರ ಕೃತ್ಯ ಎಸಗಿದ್ದು, ಆಕೆಯನ್ನು ಬ್ಲಾಕ್ ಮೇಲ್ ಮಾಡಿ ತಮ್ಮ ವಿಕೃತಿ ಪ್ರದರ್ಶಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಕರಣ ಸಂಬಂಧ 17 ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದ್ದು, 8ಮಂದಿಯನ್ನು ಮಾತ್ರ ಪೊಲೀಸರು ಬಂಧಿಸಿದ್ದಾರೆ. ಕೂಡಲೇ ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದರು.
ಎಐಸಿಸಿ ಕಾರ್ಯದರ್ಶಿ ಸಂದೀಪ್ ಮಾತನಾಡಿ, ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಿಂದ ಜಿಲ್ಲೆಯ ಮಾನ ಹರಾಜಾಗುತ್ತಿದೆ. ಸಣ್ಣ ವಿಚಾರವನ್ನು ಮುಂದಿಟ್ಟುಕೊಂಡು ಬೆಂಕಿ ಹಚ್ಚುವ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಸಿ.ಟಿ.ರವಿ, ಸಿ.ಎಂ. ರಾಜಕೀಯ ಕಾರ್ಯದರ್ಶಿ ಜೀವರಾಜ್ ಪ್ರಕರಣಕ್ಕೆ ಸಂಬಂಧಿ ಸಿದಂತೆ ಏನು ಮಾತನಾಡುತ್ತಿಲ್ಲ. ಪ್ರಕರಣದ ಆರೋಪಿಗಳನ್ನು ಬಿಜೆಪಿ ಖಂಡರು ರಕ್ಷಣೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ|ಅಂಶುಮಂತ್ ಮಾತನಾಡಿ, ಇದೊಂದು ಅಮಾನೀಯ ಘಟನೆಯಾಗಿದ್ದು, 5 ತಿಂಗಳಿಂದ ಬಾಲಕಿಗೆ ಮಾನಸಿಕ,ದೈಹಿಕ ಹಿಂಸೆ ನೀಡಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿ ಸುವ ಮೂಲಕ ಯುವ ಜನತೆಯಲ್ಲಿ ಕಾನೂನಿನ ಭಯ ಮೂಡಿಸಬೇಕೆಂದು ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ|ಡಿ.ಎಲ್. sವಿಜಯ್ಕುಮಾರ್, ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಹೊನ್ನೇಶ್, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವನಮಾನ ದೇವರಾಜ್ ಮಾತನಾಡಿದರು. ಪ್ರತಿಭಟನೆಗೂ ಮುನ್ನಾ ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಅತ್ಯಾಚಾರ ಆರೋಪಿಗಳ ವಿರುದ್ಧ ಘೋಷಣೆ ಕೂಗಿದರು.
ಇದನ್ನೂ ಓದಿ :ಬಿಡಿಸಿಸಿ ಗಾದಿಗೆ ಸಚಿವ ಆನಂದ್ ಸಿಂಗ್ ಸ್ಪರ್ಧೆ?
ಪ್ರತಿಭಟನೆಯಲ್ಲಿ ಮುಖಂಡರಾದ ಎ.ಎನ್.ಮಹೇಶ್, ಅಕ್ಮಲ್, ನಗರಸಭೆ ಮಾಜಿ ಸದಸ್ಯ ರೂಬಿನ್ ಮೋಸೆಸ್, ಸಂಘದ ಜಿಲ್ಲಾಧ್ಯಕ್ಷ ರಸೂಲ್ ಖಾನ್, ಯುವ ಕಾಂಗ್ರೆಸ್ ನ ಶಿವಕುಮಾರ್, ಆದಿತ್ಯಗೌಡ, ನೂರಿ, ನಯಾಝ್, ಮಹಿಳಾ ಕಾಂಗ್ರೆಸ್ನ ಗಾಯತ್ರಿ, ಚೇತನಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.