“ಸಂಧಾನ’ ವಿಫಲ: ಆದೇಶ ಸಿಗುವವರೆಗೆ ಪಾದಯಾತ್ರೆ ಸ್ಥಗಿತವಿಲ್ಲ ಎಂದ ಶ್ರೀಗಳು
Team Udayavani, Feb 5, 2021, 5:50 AM IST
ಚಿತ್ರದುರ್ಗ: ಕುರುಬ ಸಮುದಾಯಕ್ಕೆ ಎಸ್‌ಟಿ ಹಾಗೂ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಿಗೆ ಆಗ್ರಹಿಸಿ ಉಭಯ ಸಮುದಾಯದ ಶ್ರೀಗಳ ಪಾದಯಾತ್ರೆ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಗುರುವಾರ ಸರಕಾರದ ಸಂದೇಶ ಹೊತ್ತು ಬಸವಜಯ ಮೃತ್ಯುಂಜಯ ಶ್ರೀ ಹಾಗೂ ವಚನಾನಂದ ಶ್ರೀ ಬಳಿಗೆ ತೆರಳಿದ್ದ ಸಚಿವರಾದ ಮುರುಗೇಶ ನಿರಾಣಿ ಹಾಗೂ ಸಿ.ಸಿ. ಪಾಟೀಲ್ ಬರಿಗೈಯಲ್ಲಿ ಮರಳಿದ್ದಾರೆ.
ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಿಗೆ ಆಗ್ರಹಿಸಿ ನಿರಂಜನಾನಂದ ಪುರಿ ಶ್ರೀ ನೇತೃತ್ವದಲ್ಲಿ ನಡೆದ ಪಾದಯಾತ್ರೆ ಈಗಾಗಲೇ ಬೆಂಗಳೂರು ತಲುಪಿದ್ದರೆ, ಪಂಚಮಸಾಲಿ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 2ಎ ಮೀಸಲಿಗೆ ಆಗ್ರಹಿಸಿ ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಶ್ರೀ ನೇತೃತ್ವದ ಪಾದಯಾತ್ರೆ ಕೂಡ ರಾಜಧಾನಿ ಸನಿಹಲ್ಲೇ ಬಂದು ನಿಂತಿದೆ. ಇದರಿಂದ ಎಚ್ಚೆತ್ತ ಸಿಎಂ ಗುರುವಾರ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹಾಗೂ ಸಣ್ಣ ಕೈಗಾರಿಕೆ ಸಚಿವ ಸಿ.ಸಿ.ಪಾಟೀಲ್ ನೇತೃತ್ವದ ನಿಯೋಗವನ್ನು ಸಂಧಾನಕ್ಕೆ ಕಳುಹಿಸಿದ್ದರು. ಆದರೆ ಸರಕಾರದ ಆದೇಶ ಕೈಗೆ ಸಿಗುವವರೆಗೆ ಪಾದಯಾತ್ರೆ ನಿಲ್ಲಿಸುವುದಿಲ್ಲ ಎಂದು ಶ್ರೀಗಳು ಹೇಳಿದ್ದಾರೆ.
ಯಾರ್ಯಾರಿದ್ದರು?
ಸಚಿವರಾದ ಸಿ.ಸಿ.ಪಾಟೀಲ್, ಮುರುಗೇಶ್ ನಿರಾಣಿ, ಶಾಸಕರಾದ ಅರವಿಂದ ಬೆಲ್ಲದ, ಆರ್. ಶಂಕರ್, ಮಹೇಶ ಕುಮಟಳ್ಳಿ, ಅರುಣಕುಮಾರ್ ಪೂಜಾರ, ವಿರೂಪಾಕ್ಷಪ್ಪ ಬಳ್ಳಾರಿ, ಮೋಹನ ಲಿಂಬಿಕಾಯಿ ಮತ್ತಿತರರು ನಿಯೋಗದಲ್ಲಿದ್ದರು.
ಸಂದೇಶ ಏನು?
ಹಿರಿಯೂರು ತಾಲೂಕಿನ ಐಮಂಗಲ ಬಳಿ ಉಭಯ ಶ್ರೀಗಳನ್ನು ಸಚಿವರು ಹಾಗೂ ಶಾಸಕರ ನಿಯೋಗ ಭೇಟಿಯಾಯಿತು. ಸಮುದಾಯದ ಬೇಡಿಕೆಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ನಿಟ್ಟಿನಲ್ಲಿ ಆಡಳಿತಾತ್ಮಕ ಪ್ರಕ್ರಿಯೆ ನಡೆಸಲು ಒಪ್ಪಿದ್ದಾರೆ. ಶಾಶ್ವತ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರಿಗೆ ಈ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಆದೇಶ ನೀಡಲಿದ್ದಾರೆ ಎಂದು ವಿವರಿಸಿದರು.
ಶ್ರೀಗಳು ಏನೆಂದರು?
ಇದನ್ನು ನಯವಾಗಿಯೇ ತಿರಸ್ಕರಿಸಿದ ಉಭಯ ಶ್ರೀಗಳು, ಸರಕಾರ ನಮ್ಮ ಮನವಿಗೆ ಸ್ಪಂದಿಸಿರುವುದು ಉತ್ತಮ ಬೆಳವಣಿಗೆ. ಆದರೆ, ಮೀಸಲಾತಿ ಆದೇಶ ಪ್ರತಿ ನಮ್ಮ ಕೈಗೆ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ. ಪಾದಯಾತ್ರೆ ಬೆಂಗಳೂರು ತಲುಪುವುದ ರೊಳಗೆ ಸರ್ಕಾರದ ಆದೇಶದ ಪ್ರತಿ ನಮ್ಮ ಕೈ ಸೇರು ವಂತಾಗಲಿ. ಈ ನಿಟ್ಟಿನಲ್ಲಿ ಸಮುದಾಯದ ಎಲ್ಲ ಸಚಿವರು, ಶಾಸಕರು ಪ್ರಯತ್ನ ಮಾಡಲಿ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.