![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 5, 2021, 11:14 AM IST
ಬೆಂಗಳೂರು: ಸಭಾಪತಿ ಚುನಾವಣೆ ಹಿನ್ನಲೆಯಲ್ಲಿ ವಿಧಾನ ಪರಿಷತ್ ಕಲಾಪವನ್ನು ಮೂರು ದಿನ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ಇಂದು ನಡೆದ ಪರಿಷತ್ ಸದನ ಸಲಹಾ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಲಾಗಿದೆ.
ಮುಂದಿನ ಸೋಮವಾರ, ಮಂಗಳವಾರ ಮತ್ತು ಬುಧವಾರವೂ ಪರಿಷತ್ ಕಲಾಪ ನಡೆಯಲಿದೆ. ಫೆ.10 ರಂದು ಪರಿಷತ್ ಕಲಾಪ ಅಂತ್ಯವಾಗಲಿದೆ.
ಇದನ್ನೂ ಓದಿ:ರಾಜ್ಯದಲ್ಲಿ 2 ಹಂತಗಳ ಪಂಚಾಯತ್ ವ್ಯವಸ್ಥೆ ಜಾರಿಗೆ ಬರುವ ದಿನ ಹತ್ತಿರವಾಗುತ್ತಿವೆ :ಈಶ್ವರಪ್ಪ
ಸಲಹಾ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ, ಮುಂದಿನ ಬುಧವಾರದವರೆಗೆ ಪರಿಷತ್ ಕಲಾಪ ಮುಂದುವರೆಸಲು ನಿರ್ಧಾರ ಮಾಡಲಾಗಿದೆ. ಸಭಾಪತಿ ಆಯ್ಕೆ ಮಾಡಬೇಕಾದ ಹಿನ್ನೆಲೆಯಲ್ಲಿ ಮೂರು ದಿನ ಮುಂದುವರಿಕೆ ಮಾಡಲು ನಿರ್ಧರಿಸಲಾಗಿದೆ ಎಂದರು.
ಇದನ್ನೂ ಓದಿ: ಖಂಡ್ರೆ ರಾಜೀನಾಮೆ ಕೊಡ್ತೇನೆ ಅಂದ್ರೆ, ವಿ. ಸೋಮಣ್ಣ ನೇಣು ಹಾಕಿಕೊಳ್ತೇನೆ ಅಂದ್ರು
ಸಭಾಪತಿ ಸ್ಥಾನಕ್ಕೆ ನಮ್ಮ ಪಕ್ಷದಿಂದ ನನ್ನನ್ನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ಬಹುತೇಕ ನಾನೇ ಅಭ್ಯರ್ಥಿಯಾಗಲಿದ್ದೇನೆ ಎಂದು ಅವರು ಗೋಹತ್ಯೆ ತಡೆ ಮಸೂದೆ ವಿಚಾರದಲ್ಲಿ ಜೆಡಿಎಸ್ ನಿಲುವಿನ ಕುರಿತು ನಮ್ಮ ಪಕ್ಷದ ವರಿಷ್ಠರನ್ನು ಕೇಳಿ ಹೇಳುತ್ತೇನೆ ಎಂದರು.
You seem to have an Ad Blocker on.
To continue reading, please turn it off or whitelist Udayavani.