ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಮೀಸಲು ರದ್ದುಪಡಿಸಿ
ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿನ್ನಸಮುದ್ರ ಶೇಖರ ನಾಯ್ಕ ಸುದ್ದಿಗೋಷ್ಠಿ ನಡೆಸಿದರು
Team Udayavani, Feb 5, 2021, 12:39 PM IST
ದಾವಣಗೆರೆ: ದಾವಣಗೆರೆ ತಾಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಿಗದಿಯಾಗಿರುವ ಮೀಸಲಾತಿ ರದ್ದುಗೊಳಿಸಿ ಚುನಾವಣಾ ಆಯೋಗದ ಸೂಚನೆಯಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿನ್ನಸಮುದ್ರ ಶೇಖರ ನಾಯ್ಕ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ಜ. 28 ರಂದು ದಾವಣಗೆರೆ ತಾಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ ಪಡಿಸಿರುವುದು ಸರಿ ಇಲ್ಲ. ಸಾಫ್ಟ್‌ವೇರ್ ಮೂಲಕವೇ ಮೀಸಲಾತಿ ನಿಗದಿಪಡಿಸಲಾಗಿದೆ. ನಮ್ಮ ಪ್ರಕಾರ ಸಾಫ್ಟ್‌ವೇರ್ ಎಲ್ಲಿಯೋ ನಿಯಂತ್ರಣ ಕಳೆದುಕೊಂಡಿರಬಹುದು.
ಕಾಣದ ಕೈಗಳು ಕೆಲಸ ಮಾಡಿರಬಹುದಾದ ಹಿನ್ನೆಲೆಯಲ್ಲಿ ನಿಗದಿತ ಮೀಸಲಾತಿ ರದ್ದುಗೊಳಿಸಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ಅಧಿನಿಯಮ 1993ರ ಪ್ರಕರಣ 44(2) ಆನುಸಾರ ಮತ್ತು ಚುನಾವಣಾ ಆಯೋಗದ ನಿಯಮದಂತೆ ಹಿಂದೆ ಇದ್ದಂತಹ ಮೀಸಲಾತಿ ಮತ್ತೆ ಬರುವಂತಿಲ್ಲ. ಆದರೆ, ಕೆಲವಾರು ಗ್ರಾಮ ಪಂಚಾಯತ್‌ಗಳಲ್ಲಿ ಹಿಂದೆ ಇದ್ದಂತಹ
ಮೀಸಲಾತಿಯೇ ಈಗಲೂ ನಿಗದಿಯಾಗಿದೆ. ಹಾಗಾಗಿ ನಿಗದಿಪಡಿಸಿರುವ ಮೀಸಲಾತಿ ರದ್ದುಪಡಿಸಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗಕ್ಕೆ ಫೆ. 1 ರಂದು ಮನವಿ ಸಲ್ಲಿಸಲಾಗಿತ್ತು. 2 ರಂದು ಚುನಾವಣಾ ಆಯೋಗ ಮೀಸಲಾತಿ ನಿಗದಿಪಡಿಸಲು ಕೈಗೊಂಡ ಕ್ರಮದ ಬಗ್ಗೆ ಜಿಲ್ಲಾಡಳಿತದಿಂದ ವಿವರ ಕೇಳಿದೆ. ಜಿಲ್ಲಾಡಳಿತ ಈವರೆಗೆ ಆಯೋಗಕ್ಕೆ ವರದಿ ಸಲ್ಲಿಸಿಲ್ಲ ಎಂದರು.
1993ರಿಂದ ನೇರ್ಲಿಗೆ, ಬಸವನಾಳ, ಕಂದನಕೋವಿ, ಮುದಹದಡಿ, ಶಿರಮಗೊಂಡನಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಎಸ್ಟಿ ಮೀಸಲಾತಿ ಬಂದೇ ಇಲ್ಲ. ಕೊಡಗನೂರು, ಲೋಕಿಕೆರೆ, ಹೊನ್ನೂರು, ಹದಡಿ ಗ್ರಾಮ ಪಂಚಾಯತ್ ನಲ್ಲಿ ಎರಡೆರೆಡು ಬಾರಿ ಎಸ್‌ಟಿ ಮೀಸಲಾತಿ ಪುನರಾವರ್ತನೆ ಆಗಿವೆ. ನೇರ್ಲಿಗೆ ಒಳಗೊಂಡಂತೆ ಕೆಲವಾರು ಗ್ರಾಮ ಪಂಚಾಯತ್‌ನಲ್ಲಿ ಈ ಬಾರಿಯೂ ಸಾಮಾನ್ಯ ವರ್ಗದ
ಮೀಸಲಾತಿ ಮುಂದುವರೆದಿದೆ ಆಕ್ಷೇಪಿಸಿದರು. ದಾವಣಗೆರೆ ತಾಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ
ಪಡಿಸಿರುವುದರಲ್ಲಿ ಪಾರದರ್ಶಿಕತೆ ಇಲ್ಲ. ಸಾಮಾಜಿಕ ನ್ಯಾಯ ಒದಗಿಸಲಾಗಿಲ್ಲ. ಹಾಗಾಗಿ ಈಗ ನಿಗದಿ ಪಡಿಸಿರುವ ಮೀಸಲಾತಿ ರದ್ದುಪಡಿಸಬೇಕು. ಇಲ್ಲದಿದ್ದಲ್ಲಿ ಜಿಲ್ಲಾಡಳಿತ, ಚುನಾವಣಾ ಆಯೋಗದ ವಿರುದ್ಧ ನ್ಯಾಯಾಲಯದ ಮೊರೆ
ಹೋಗಲಾಗುವುದು ಎಂದು ಎಚ್ಚರಿಸಿದರು.
ಓದಿ : ಲಸಿಕಾ ಅಭಿಯಾನ ಯಶಸ್ವಿ ಗೊಳಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.