ಮೃಗಾಲಯ ನಿರ್ವಹಣೆಗೆ 104 ಕೋಟಿ ರೂ.ಮೀಸಲಿಡಿ


Team Udayavani, Feb 5, 2021, 1:44 PM IST

Yadiyurappa

ಮೈಸೂರು: ಕರ್ನಾಟಕ ರಾಜ್ಯ ಮೃಗಾಲಯ ಪ್ರಾಧಿಕಾರವು ಮೃಗಾಲಯಗಳ ನಿರ್ವಹಣೆಗೆ 104 ಕೋಟಿ ರೂ. ಆಯವ್ಯಯ ಪಟ್ಟಿ  ತಯಾರಿಸಿದ್ದು, ಇದಕ್ಕೆ ರಾಜ್ಯ ಸರ್ಕಾರ ತನ್ನ ಬಜೆಟ್‌ನಲ್ಲಿ ಅನುಮೋದನೆ ನೀಡುವಂತೆ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರಿಗೆ ಪ್ರಾಧಿಕಾರದ ಅಧ್ಯಕ್ಷ ಮನವಿ ಸಲ್ಲಿಸಿದರು.

ಈ ಕುರಿತು ಮಾಹಿತಿ ನೀಡಿರುವ ಪ್ರಾಧಿಕಾರದ ಅಧ್ಯಕ್ಷ ಎಲ್‌.ಆರ್‌. ಮಹದೇವಸ್ವಾಮಿ, ರಾಜ್ಯದಲ್ಲಿ ಮೈಸೂರು, ಬನ್ನೇರುಘಟ್ಟ, ಕಮಲಾಪುರ, ಕಲುಬುರುಗಿ, ದಾವಣಗೆರೆ, ಬೆಳಗಾವಿ, ಗದಗ, ಶಿವಮೊಗ್ಗ ಹಾಗೂ ಚಿತ್ರದುರ್ಗ ಸೇರಿದಂತೆ 9 ಕಡೆ  ಮೃಗಾಲಯಗಳಿದ್ದು, 2021-22ನೇ ಸಾಲಿನ ಎಲ್ಲಾ ಮೃಗಾಲಯಗಳ ಆಡಳಿತಾತ್ಮಕ ವೆಚ್ಚ, ಪ್ರಾಣಿಗಳ ಆಹಾರ ಮತ್ತು ನಿರ್ವಹಣೆ, ಪಶುವೈದ್ಯ ಆರೈಕೆ, ಸ್ಟಿಲ್‌ ಓವರ್‌ ಕಾಮಗಾರಿ ಹಾಗೂ ಅಭಿವೃದ್ಧಿ ಕಾಮಗಾರಿಗಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 104 ಕೋಟಿ ರೂ. ಆಯವ್ಯಯ ಪಟ್ಟಿ ತಯಾರಿದ್ದು, ಈ ಬಾರಿಯ ಬಜೆಟ್‌ನಲ್ಲಿ ಅನುಮೋದನೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು.

ಇದನ್ನೂ ಓದಿ :ಕ್ಯಾನ್ಸರ್‌ ಆರಂಭದಲೇ ಪತ್ತೆಯಾದರೆ ಗುಣ ಸಾಧ್ಯ

ಕೊರೊನಾ ಹಿನ್ನೆಲೆ ಮೃಗಾಲಯಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದ್ದು, ಆದಾಯ ಕಡಿಮೆಯಾಗಿದೆ. ಇದರಿಂದ ಮೃಗಾಲಯಗಳಲ್ಲಿರುವ ಪ್ರಾಣಿ ಮತ್ತು ಪಕ್ಷಿಗಳ ನಿರ್ವಹಣೆಗೆ ಸಮಸ್ಯೆಯಾಗಿದೆ. ಅಲ್ಲದೇ ಇತ್ತೀಚೆಗೆ ಸರ್ಕಾರ ಗೋ ಹತ್ಯೆ ನಿಷೇಧ  ಕಾಯಿದೆ ಜಾರಿ ಮಾಡಿರುವುದರಿಂದ ಮೃಗಾಲಯದಲ್ಲಿನ ಹುಲಿ, ಸಿಂಹ, ಚಿರತೆ ಸೇರಿದಂತೆ ಹಲವು ಪ್ರಾಣಿಗಳಿಗೆ ದನದ ಮಾಂಸ ಬದಲಿಗೆ ಕೋಳಿ ಅಥವಾ ಮೇಕೆ, ಕುರಿ ಮಾಂಸ ನೀಡಬೇಕಾಗಿದೆ. ಇದರಿಂದ ವೆಚ್ಚ ಮತ್ತಷ್ಟು ಹೆಚ್ಚಾಗಿದೆ. ಈ ಎಲ್ಲಾ ಖರ್ಚುಗಳನ್ನು ನಿರ್ವಹಣೆ ಮಾಡುವ ಉದ್ದೇಶದಿಂದ ಮೃಗಾಲಯಗಳ ನಿರ್ವಹಣೆಗೆ 104 ಕೋಟಿ ರೂ. ಆಯವ್ಯಯ ಪಟ್ಟಿ ತಯಾರಿಸಿದ್ದು, ಇದಕ್ಕೆ ಪ್ರಸಕ್ತ ಸಾಲಿನಲ್ಲಿ ಮಂಡನೆಯಾಗುವ ಬಜೆಟ್‌ನಲ್ಲಿ ಅನುಮೋದನೆ ನೀಡುವಂತೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ ಎಂದರು.

ಈ ವೇಳೆ ಗುಂಡ್ಲುಪೇಟೆ ಶಾಸಕ ಸಿ.ಎಸ್‌. ನಿರಂಜನ್‌ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.