ಪಿಡಿಒ ವಿರುದ್ಧ ತನಿಖೆ ವಿಳಂಬ ; ಸದಸ್ಯರಿಂದ ಅಧಿಕಾರಿಗಳ ತರಾಟೆ 

ಶಾಸಕರು ಸೂಚನೆ ನೀಡಿದರೂ ಕ್ರಮಕ್ಕೆ ಹಿಂದೇಟು-ಆರೋಪ

Team Udayavani, Feb 5, 2021, 7:01 PM IST

PDO

ಗುಳೇದಗುಡ್ಡ: ಕಟಗೇರಿ ಗ್ರಾಪಂ ಪಿಡಿಒ ಆರತಿ ಕ್ಷತ್ರಿಯ ವಿರುದ್ಧ ತನಿಖೆ ಕೈಗೊಳ್ಳಲು ವಿಳಂಬವಾಗುತ್ತಿರುವುದಕ್ಕೆ ತಾಪಂ ಇಒ ಸಿದ್ದಪ್ಪ ನಕ್ಕರಗುಂದ ಅವರನ್ನು ತಾಪಂ ಸದಸ್ಯ ಕೈಲಾಸ ಕುಂಬಾರ ತೀವ್ರ ತರಾಟೆ ತಗೆದುಕೊಂಡಿದ್ದಾರೆ.

ಗುರುವಾರ ತಾಪಂ ಕಚೇರಿಯಲ್ಲಿ ಅಧ್ಯಕ್ಷೆ ರೇಣುಕಾ ಗಾಜಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ, ಕಳೆದ ಎಂಟು  ತಿಂಗಳಿಂದ ಶಾಸಕರಾದ ಸಿದ್ದರಾಮಯ್ಯ ಹಾಗೂ ಜಿಪಂ ಅಧ್ಯಕ್ಷರು, ಪಿಡಿಒ ವಿರುದ್ಧ ತನಿಖೆ ಕೈಗೊಳ್ಳಬೇಕು ಎಂದು  ಸೂಚಿಸಿದ್ದಾರೆ. ಆದರೂ ಇಲ್ಲಿಯವರೆಗೆ ಪಿಡಿಒ ವಿರುದ್ಧ ತನಿಖೆ ನಡೆಸುತ್ತಿಲ್ಲ. ಪಿಡಿಒ ಎಲ್ಲದರಲ್ಲಿಯೂ ಅಕ್ರಮ ನಡೆಸಿದ್ದಾರೆ ಎಂದು ಸದಸ್ಯರು ದೂರಿದರು.

ಪಿಡಿಒ ವಿರುದ್ಧ ತನಿಖೆಗೆ ಅಧಿಕಾರಿಗಳು ಬಂದರೂ ಅವರೊಂದಿಗೆ ಸಹಕರಿಸುತ್ತಿಲ್ಲ. ತನಿಖಾಧಿಕಾರಿಗಳ ದಾರಿ ತಪ್ಪಿಸುವ ಕೆಲಸ ನಡೆದಿದೆ. ತಾಪಂ ಇಒ, ಪಿಡಿಒ ವಿರುದ್ಧ ಕ್ರಮ ಕೈಗೊಳ್ಳದೇ ದಿನ ಕಳೆಯುತ್ತಿದ್ದಾರೆ. ಅವರ ಮೇಲೆ ತನಿಖೆ ಕೈಗೊಳ್ಳದಿದ್ದರೆ   ಮುಂದಿನ ಸಭೆ ನಡೆಸಲು ಬಿಡುವುದಿಲ್ಲ ಎಂದು ಜಿಪಂ ಸದಸ್ಯೆ ಸರಸ್ವತಿ ಮೇಟಿ ಹಾಗೂ ತಾಪಂ ಸದಸ್ಯ ಕೈಲಾಸ ಕುಂಬಾರ ಪಟ್ಟು ಹಿಡಿದರು.

ಸಾಮಾನ್ಯ ಸಭೆಯಲ್ಲಿದ್ದ ಜಿಪಂ ಸದಸ್ಯ ಆಸಂಗೆಪ್ಪ ನಕ್ಕರಗುಂದಿ ಮಧ್ಯಪ್ರವೇಶಿಸಿ ತನಿಖೆ ವಿಳಂಬದ ಬಗ್ಗೆ ವಿವರ ಪಡೆದು ಅ ಧಿಕಾರಿಗಳ ಮೇಲೆ ಒತ್ತಡ ಹೇರಿದರು. ಅವರ ವಿರುದ್ಧದ ತನಿಖೆ ವಿಳಂಬಕ್ಕೆ ಕಾರಣ ನೀಡಿ, ಮತ್ತು ಅದರ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿ ಕಾರಿಗಳಿಗೆ ತಾಕೀತು ಮಾಡಿದರು. ತನಿಖೆ ವಿಳಂಬದ ಕುರಿತು ಮೇಲಧಿ ಕಾರಿಗಳನ್ನು ಭೇಟಿಯಾಗಿ  ವಿಚಾರಿಸೋಣ ಎಂದು ಸದಸ್ಯರನ್ನು ಮನವೊಲಿಸಲು ಮುಂದಾದರು.

ಮೇಲಧಿಕಾರಿಗಳು ಸಭೆಗೆ ಬರುವವರೆಗೂ ಸಭೆ ನಡೆಸಲು ಬಿಡುವುದಿಲ್ಲ ಎಂದು ಸದಸ್ಯರು ಪಟ್ಟು ಹಿಡಿದು ಸಭೆಯಿಂದ ಹೊರ  ನಡೆದರು. ಸಭಾತ್ಯಾಗ ಮಾಡಿ ಹೊರ ನಡೆದ ಕಾಂಗ್ರೆಸ್‌ನ ತಾಪಂ ಹಾಗೂ ಜಿಪಂ ಸದಸ್ಯರನ್ನು ಅಧಿಕಾರಿಗಳು ಸಮಾಧಾನ ಪಡಿಸಿ ಸಭೆಗೆ ವಾಪಸ್‌ ಕರೆದುಕೊಂಡು ಬಂದು ಬೇರೆ ಕೊಠಡಿಯೊಳಗೆ ಸದಸ್ಯರೊಂದಿಗೆ ಕುಳಿತು ತನಿಖೆ ವಿಳಂಬದ ಬಗ್ಗೆ ಚರ್ಚಿಸಿದರು.

 ಇದನ್ನೂ ಓದಿ :ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ  

ಜಿಪಂ ಸದಸ್ಯ ಆಸಂಗೆಪ್ಪ ನಕ್ಕರಗುಂದಿ ಎರಡು ದಿನಗಳಲ್ಲಿ ಮೇಲಧಿಕಾರಿಗಳನ್ನು ಭೇಟಿ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡೋಣ ಎಂದು ಹೇಳಿದ ನಂತರ ಸಾಮಾನ್ಯ ಸಭೆ ಮುಂದುವರಿಯಿತು. ಉಪಾಧ್ಯಕ್ಷ ಯಮನಪ್ಪ ವಡ್ಡರ, ಸದಸ್ಯರಾದ  ಕನಕಪ್ಪ ಬಂದಕೇರಿ, ದೇವಕ್ಕೆವ್ವ ಪಾದನಕಟ್ಟಿ, ತಾಪಂ ಇಒ ಸಿದ್ದಪ್ಪ ನಕ್ಕರಗುಂದಿ ಹಾಜರಿದ್ದರು.

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.