ರಾಯಚೂರು ವಿವಿ ಬಲವರ್ಧನೆಗೆ ಪ್ರಸಾವನೆ


Team Udayavani, Feb 6, 2021, 1:02 PM IST

JNANA

ರಾಯಚೂರು: ಇಷ್ಟು ದಿನ ಆಮೆ ವೇಗದಲ್ಲೇ ಸಾಗಿದ್ದ ರಾಯಚೂರು ಪ್ರತ್ಯೇಕ ವಿಶ್ವವಿದ್ಯಾಲಯ ಪೂರ್ಣ ಪ್ರಮಾಣದಲ್ಲಿ ಸಕ್ರಿಯವಾಗಲು ಆರ್ಥಿಕ ಅಡಚಣೆಗಳು ಎದುರಾಗಿವೆ. ಈಚೆಗೆ ನೇಮಕಗೊಂಡಿರುವ ಕುಲಪತಿಗಳು ವಿವಿ ಬಲವರ್ಧನೆಗಾಗಿ ಸರ್ಕಾರಕ್ಕೆ 600 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರದ ಸ್ಪಂದನೆ ಬೇಕಿದೆ.

ಸರ್ಕಾರ ಪ್ರತಿ ವರ್ಷ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ದೊಡ್ಡ ಮೊತ್ತದ ಹಣ ಬಿಡುಗಡೆ ಮಾಡುತ್ತದೆ. ಆದರೆ, ರಾಯಚೂರು ಪ್ರತ್ಯೇಕ ವಿವಿ ಘೋಷಣೆಯಾಗಿ ವರ್ಷಗಳೇ ಕಳೆದರೂ ಇಂದಿಗೂ ಅನುದಾನ ಬಿಡುಗಡೆ ಮಾಡದ ಕಾರಣ ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿದೆ. ಕಳೆದ ಎರಡು ತಿಂಗಳ ಹಿಂದೆ ಉಪಕುಲಪತಿಯನ್ನು ನೇಮಿಸಿದ್ದು, ಆಡಳಿತಾತ್ಮಕ ಚಟುವಟಿಕೆಗಳಿಗೆ ತುಸು ಜೀವಕಳೆ ಬಂದಿದೆ. ವ್ಯವಹಾರಗಳ ನಿರ್ವಹಣೆ ಜತೆಗೆ ವಿವಿ ಬಲವರ್ಧನೆಗೆ ಬೇಕಾದ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಸಲಾಗಿದೆ.

ಮೂರು ಪ್ರತ್ಯೇಕ ಪ್ರಸ್ತಾವನೆ: ಗುಲ್ಬರ್ಗ ವಿಶ್ವವಿದ್ಯಾಲಯದೊಂದಿಗೆ ಈಗ ಸಂಯೋಜಿತ ಕಾಲೇಜುಗಳನ್ನು ಪ್ರತ್ಯೇಕಿಸಿ ರಾಯಚೂರು ವಿವಿ ಅ ಧೀನಕ್ಕೆ ನೀಡಲಾಗಿದೆ. ಸುಮಾರು 224 ಕಾಲೇಜುಗಳು, 19 ಸ್ನಾತಕೋತ್ತರ ಕೇಂದ್ರಗಳು ಒಳಗೊಂಡಿವೆ. ಅದರ ಜತೆಗೆ ಹಣಕಾಸು ವ್ಯವಹಾರ ಕೂಡ ಇತ್ಯರ್ಥಗೊಂಡಿದೆ. ಗುಲ್ಬರ್ಗ ವಿವಿ ಸಿಂಡಿಕೇಟ್‌ ಮಂಡಳಿ ಕೂಡ ಪೂರಕವಾಗಿ ಕೆಲಸ ಮಾಡಿದ್ದು, ಆಡಳಿತಾತ್ಮಕ ಪ್ರಕ್ರಿಯೆಗಳು ವಿಳಂಬವಾಗುತ್ತಿಲ್ಲ. ಈಗ ಮುಖ್ಯವಾಗಿ ಬೇಕಿರುವುದು ಅನುದಾನ ಮಾತ್ರ. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯದಿಂದ ಮೂರು ಪ್ರತ್ಯೇಕ ಪ್ರಸ್ತಾವನೆಗಳು ಸಲ್ಲಿಸಲಾಗಿದೆ.ಪೂರ್ಣ ಪ್ರಮಾಣದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ, ಅಗತ್ಯ ಕಟ್ಟಡಗಳು,  ಆಡಳಿತ ಭವನ, ಕ್ಯಾಂಟೀನ್‌, ಸಿಬ್ಬಂದಿ ವಸತಿ  ಸಮುತ್ಛಯ, ವಸತಿ ನಿಲಯ, ಕುಡಿವ ನೀರು ಸೇರಿದಂತೆ ಮೂಲ ಸೌಲಭ್ಯಗಳ ಕುರಿತು ಬೇಡಿಕೆಸಲ್ಲಿಸಲಾಗಿದೆ. ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಕೈಗೊಳ್ಳಬಹುದಾದ ಯೋಜನೆಗಳು ಹಾಗೂ ಗುತ್ತಿಗೆ ನೌಕರರ ನೇಮಕ ಸಂಬಂಧಿ ಸಿದ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಕೆಯಾಗಿವೆ. ಒಟ್ಟಾರೆ 600 ಕೋಟಿಗೂ ಅ ಧಿಕ ಮೊತ್ತದ ಅಂದಾಜು ಪಟ್ಟಿ ಒಳಗೊಂಡ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಸರ್ಕಾರ ಏಕಕಾಲಕ್ಕೆ ಅಷ್ಟು ಅನುದಾನ ನೀಡುವ ಸಾಧ್ಯತೆಗಳು ಕಡಿಮೆಯಿದ್ದು, ಹಂತ-ಹಂತವಾಗಿ ನೀಡುವ ಸಾಧ್ಯತೆಗಳು ಹೆಚ್ಚಾಗಿದೆ. ಮೊದಲ ಹಂತದಲ್ಲಿ ಕನಿಷ್ಟ 150 ಕೋಟಿ ನೀಡಿದರೆ ಅನುಕೂಲವಾಗಲಿದೆ ಎಂಬುದು ಕುಲಪತಿಗಳ ಅನಿಸಿಕೆ.

ಇದನ್ನೂ ಓದಿ:ಶೇ.50ರಷ್ಟು ಅತಿಥಿ ಉಪನ್ಯಾಸಕರಿಗೆ ಕೋಕ್‌

ಬಜೆಟ್‌ನತ್ತ ಚಿತ್ತ: ವಿವಿಗೆ ಬೇಕಾದ ವಿಶೇಷ ಅನುದಾನದ ಕುರಿತು ಈಗಾಗಲೇ ಕುಲಪತಿಗಳು ಜಿಲ್ಲೆಯ ಕೆಲ ಜನಪ್ರತಿನಿ ಧಿಗಳೊಟ್ಟಿಗೆ ಚರ್ಚಿಸಿದ್ದು, ಪೂರಕ ಸ್ಪಂದನೆ ಸಿಕ್ಕಿದೆ. ಸರ್ಕಾರದ ಮಟ್ಟದಲ್ಲೂ ರಾಯಚೂರು ವಿವಿ ಅನುಷ್ಠಾನ ಸಂಬಂ ಧಿತ ಅ ಧಿಕಾರಿಗಳ ಮಟ್ಟದ ಸಭೆಯಲ್ಲಿ ಚರ್ಚೆ ಕೂಡ ಆಗಿದೆ. ಹೀಗಾಗಿ ಸರ್ಕಾರ ಈ ಬಜೆಟ್‌ನಲ್ಲಿ ಎಷ್ಟು ಅನುದಾನ ನೀಡಬಹುದು ಎಂಬ ನಿರೀಕ್ಷೆ ಗರಿಗೆದರಿದೆ. ರಾಯಚೂರು ವಿವಿ ಘೋಷಣೆಯಾಗಿದ್ದು, ಬಿಟ್ಟರೆ\ ಈವರೆಗೂ ಯಾವುದೇ ವಿಶೇಷ ಅನುದಾನ ಕಂಡಿಲ್ಲ. ಬಿಜೆಪಿ ನೇತೃತ್ವದ ಸರ್ಕಾರ ಜಿಲ್ಲೆಗೆ ನೀಡುವ ಕೊಡುಗೆಗಳಲ್ಲಿ ಪ್ರತ್ಯೇಕ ವಿವಿಗೆ ವಿಶೇಷ ಅನುದಾನ ಕೂಡ ಇರಲಿದೆಯೇ ಎಂಬ ನಿರೀಕ್ಷೆಗಳಿವೆ. ನಾನು ಅಧಿಕಾರ ವಹಿಸಿಕೊಂಡು ಎರಡೂವರೆ ತಿಂಗಳಾಗಿದೆ.

ಬಂದ ಕೂಡಲೇ ವಿವಿ ಪೂರ್ಣ ಪ್ರಮಾಣದಲ್ಲಿ ಸಕ್ರಿಯವಾಗಲು ಬೇಕಿರುವ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಏನೆಲ್ಲ ಬೇಕು ಎಂಬ ವಿಸ್ತೃತ ವರದಿಯನ್ನು  ಸರ್ಕಾರ ಕೇಳಿದ್ದು, ಮೂರು ಪ್ರಸ್ತಾವನೆಗಳಲ್ಲಿ ನೀಡಲಾಗಿದೆ. ಮೂಲ ಸೌಲಭ್ಯ, ಸಿಬ್ಬಂದಿ ಸೇರಿದಂತೆ ಎಲ್ಲ ಆಡಳಿತಾತ್ಮಕ ಚಟುವಟಿಕೆಗೆ ಆರಂಭಗೊಳ್ಳಬೇಕಾದರೆ ಕನಿಷ್ಟ 600 ಕೋಟಿಗೂ ಅಧಿ ಕ ಹಣ ಬೇಕಾಗಲಿದೆ. ಸರ್ಕಾರ ಈ ಬಜೆಟ್‌ನಲ್ಲಿ ಮೊದಲ ಹಂತದಲ್ಲಿ ಎಷ್ಟು ಹಣ ಬಿಡುಗಡೆ ಮಾಡಲಿದೆ ಎಂಬ ನಿರೀಕ್ಷೆಯಲ್ಲಿದೆ. ಜಿಲ್ಲೆಯ ಜನಪ್ರತಿನಿಧಿಗಳಿಂದಲೂ ಉತ್ತಮ ಸ್ಪಂದನೆ ಸಿಕ್ಕಿದ್ದು, ಸರ್ಕಾರದ ಮಟ್ಟದಲ್ಲೂ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.

ಪ್ರೊ| ಹರೀಶ ರಾಮಸ್ವಾಮಿ, ಕುಲಪತಿ, ರಾಯಚೂರು ವಿವಿ

ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

NEP-training

National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.