ಜಗದೀಶ್ ಅಧಿಕಾರಿ ಕ್ಷಮೆ ಯಾಚಿಸದಿದ್ದರೆ ಬಿಲ್ಲವರಾದ ನಾವು ‘ತಾಂಟಲು’ ಸಿದ್ದ: ಪ್ರತಿಭಾ ಕುಳಾಯಿ

Team Udayavani, Feb 6, 2021, 2:55 PM IST

pratibha-kulai

ಸುರತ್ಕಲ್: “ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯರ ಬಗ್ಗೆ ಮತ್ತು ಸಮಸ್ತ ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ನಮ್ಮ ಗರಡಿಗೆ ಬಂದು ತಪ್ಪು ಕಾಣಿಕೆ ಹಾಕಿ ಸಮಾಜದ ಮುಂದೆ ಬಹಿರಂಗ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಅಧಿಕಾರಿಯವರೇ ಹೇಳುವಂತೆ ಅವರು ಸಿಕ್ಕಲ್ಲೆಲ್ಲ ನಾವು ತಾಂಟಲು ಸಿದ್ದರಿದ್ದೇವೆ” ಎಂದು ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಎಚ್ಚರಿಕೆ ನೀಡಿದ್ದಾರೆ.

ಕೋಟಿ ಚೆನ್ನಯರು ತುಳುನಾಡಿನ ಉದ್ದಗಲಕ್ಕೂ ಗರಡಿ ನಿರ್ಮಿಸಿದ್ದು ಜನಮಾನಸದಲ್ಲಿ ಅಚ್ಚಳಿಯದೆ ಇಂದಿಗೂ ನೆಲೆನಿಂತಿದ್ದಾರೆ. ಅನೇಕ ಪವಾಡಗಳು ಕಾರಣಿಕ ಶಕ್ತಿಗಳು ನೆಲೆನಿಂತ ಗರಡಿಯಲ್ಲಿ ಇಂದಿಗೂ ನಡೆಯುತ್ತಿದ್ದು ತುಳುವರು ಧನ್ಯತಾಭಾವ ಹೊಂದಿದ್ದಾರೆ. ಹೀಗಿರುವಾಗ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಎಂಬ ಇತಿಹಾಸ ತಿಳಿಯದ ರಾಜಕಾರಣಿಯೊಬ್ಬ ಕೋಟಿ ಚೆನ್ನಯರ ಬಗ್ಗೆ ತೀರಾ ಕೆಟ್ಟದಾಗಿ ಮಾತಾಡಿರುವುದು ಖಂಡನೀಯ ಮಾತ್ರವಲ್ಲ ಆಶ್ಚರ್ಯ ಹುಟ್ಟಿಸುತ್ತದೆ. ಮಾತೆತ್ತಿದರೆ ಹಿಂದೂ ಧರ್ಮ, ಹಿಂದೂ ದೈವ ದೇವರನ್ನು ಗುತ್ತಿಗೆ ಪಡೆದುಕೊಂಡಂತೆ ಮಾತಾಡುವ ಬಿಜೆಪಿ ನಾಯಕರ ನಾಲಗೆಯಲ್ಲಿ ಇಂತಹ ಮಾತು ಬರುತ್ತಿರುವುದು ಖೇದಕರ ಅಲ್ಲದೆ ಇನ್ನೇನು? ಎಂದು ಪ್ರತಿಭಾ ಪ್ರಶ್ನಿಸಿದರು.

ಇದನ್ನೂ ಓದಿ:ಟಿಇಎಸ್ 45 2021 ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಭಾರತೀಯ ಸೇನೆ

ಜಗದೀಶ್ ಅಧಿಕಾರಿ ಎನ್ನುವ ತುಳುನಾಡಿನ ಗಂಧ ಗಾಳಿ ಅರಿಯದ ಮೂರ್ಖ ರಾಜಕಾರಣಿ ಬಿಲ್ಲವ ಸಮುದಾಯದ ತಾಳ್ಮೆ ಪರೀಕ್ಷಿಸುವುದು ಬೇಡ. ಕೋಟಿ ಚೆನ್ನಯರ ಜೀವನ ಮತ್ತು ಹೋರಾಟವನ್ನು ಲೇವಡಿ ಮಾಡಲು ಇವರಿಗೆ ಅವಕಾಶ ಕೊಟ್ಟವರಾರು ಎಂದರು.

ಜನಾರ್ದನ ಪೂಜಾರಿ ನಮ್ಮ ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಕಂಡ ನಿಷ್ಕಲಂಕ ರಾಜಕಾರಣಿ. ಇವರ ಕಾಲು ಹಿಡಿಯುವುದಲ್ಲ, ಜಗದೀಶ್ ಅಧಿಕಾರಿಯಂತವರು ಪಾದ ತೊಳೆದರೂ ಪಾಪ ತಟ್ಟುವುದಿಲ್ಲ. ಅವರಿಗೆ ಇನ್ನೊಮ್ಮೆ ಬೈಯುತ್ತೇನೆ, ಪ್ರಚಾರ ಸಿಗುತ್ತದೆ ಎನ್ನುವ ಅಧಿಕಾರಿಗೆ ತಲೆ ಸರಿಯಿಲ್ಲ ಎನ್ನುವುದು ಸತ್ಯ. ಕೋಟಿ ಚೆನ್ನಯರನ್ನು ಮತ್ತು ಬಿಲ್ಲವ ಸಮುದಾಯವನ್ನು ಅವಹೇಳನ ಮಾಡಿರುವ ಜಗದೀಶ್ ಅಧಿಕಾರಿ ಕೂಡಲೇ ತಮ್ಮ ತಪ್ಪಿಗೆ ಕ್ಷಮೆ ಯಾಚಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಅವರ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಣ್ಣಯ್ಯ ಅಂಚನ್ ಮುಕ್ಕ, ಬಿಕೆ ತಾರಾನಾಥ್, ಸೂರ್ಯನಾರಾಯಣ ಹೊಸಬೆಟ್ಟು, ರಾಜೇಶ್ ಕುಳಾಯಿ, ಚರಣ್ ಸನಿಲ್, ಜಗದೀಶ್ ಅಮೀನ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.