ಬಳ್ಳಾ ರಿ ಇಬ್ಭಾಗದ ಕೂಗಿಗೆ ಬಲ!

ವಿಭಜನೆ ವಿರೋ ಧಿಸಿ 4739, ಬೆಂಬಲಿಸಿ 10,513 ಅರ್ಜಿ ಸಲ್ಲಿಕೆ

Team Udayavani, Feb 6, 2021, 4:05 PM IST

6-22

ಬಳ್ಳಾರಿ: ಜಿಲ್ಲೆಯನ್ನು ಅಖಂಡವಾಗಿ ಉಳಿಸುವಂತೆ ಹೋರಾಟ ನಡೆಸಿದವರಿಗಿಂತಲೂ ವಿಜಯನಗರ ಜಿಲ್ಲೆ ರಚನೆ ಬೆಂಬಲಿಸಿರುವ ಅರ್ಜಿಗಳೇ ಅಧಿಕ ಸಂಖ್ಯೆಯಲ್ಲಿ ಸಲ್ಲಿಕೆಯಾಗಿದ್ದು, ಜಿಲ್ಲೆ ಇಬ್ಭಾಗಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ತಡೆ ಇಲ್ಲದಂತಾಗಿದೆ. ಶೀಘ್ರವೇ ನೂತನ ವಿಜಯನಗರ ಜಿಲ್ಲೆ ರಚನೆಯ ಅಂತಿಮ ನಿರ್ಣಯ ಹೊರ ಬೀಳುವ ಸಾಧ್ಯತೆಯಿದೆ.

ಗಣಿ ನಾಡು ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ 4739, ವಿಜಯನಗರ ಜಿಲ್ಲೆ ರಚನೆ ಬೆಂಬಲಿಸಿ 10,513 ಅರ್ಜಿಗಳು
ಸಲ್ಲಿಕೆಯಾಗಿವೆ. ಪ್ರತಿ ಅರ್ಜಿಯನ್ನು ಒಂದೊಂದಾಗಿ ಪರಿಶೀಲನೆ ನಡೆಸಿರುವ ಜಿಲ್ಲಾ ಧಿಕಾರಿಗಳು, ಷರಾ ಬರೆದು ಮುಂದಿನ ಕ್ರಮಕ್ಕಾಗಿ ಕಲಬುರಗಿ ಪ್ರಾದೇಶಿಕ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಇದರಲ್ಲಿ ಪರ-ವಿರೋಧದ ಅರ್ಜಿಗಳ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಲಾಗಿದೆ.
ಕಲಬುರಗಿ ಪ್ರಾದೇಶಿಕ ಆಯುಕ್ತರು, ಸರ್ಕಾರದ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಬಳ್ಳಾರಿ ಡಿಸಿ ಸಲ್ಲಿಸಿರುವ ಪ್ರಸ್ತಾವನೆಯ ಅಡಕಗಳೊಂದಿಗೆ ಮುಂದಿನ ಕ್ರಮ ಕೈಗೊಳ್ಳುವಂತೆ ಪತ್ರ ಬರೆದು ಕೋರಿದ್ದು ಜಿಲ್ಲೆ ಇಬ್ಭಾಗವಾಗುವುದು ಬಹುತೇಕ ಖಚಿತವಾದಂತಾಗಿದೆ.

ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿರುವ ರಾಜ್ಯ ಸರ್ಕಾರ, ಹೊಸಪೇಟೆ ಕೇಂದ್ರವನ್ನಾಗಿಸಿಕೊಂಡು ವಿಜಯನಗರ ಜಿಲ್ಲೆ ರಚನೆಗೆ ಕಳೆದ ಡಿ.14ರಂದು ಪ್ರಾಥಮಿಕ ಅ ಧಿಸೂಚನೆ ಹೊರಡಿಸಿತ್ತು. ಜತೆಗೆ ಅಂದಿನಿಂದ ಒಂದು ತಿಂಗಳವರೆಗೆ (ಡಿ.13) ಪರ-ವಿರೋಧಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ, ಸಲಹೆ ಸೂಚನೆ ಆಹ್ವಾನಿಸಲಾಗಿತ್ತು. ಜಿಲ್ಲೆ ವಿಭಜನೆ ವಿರೋಧಿಸಿ ಬಳ್ಳಾರಿಯಲ್ಲಿ ಅಖಂಡ ಬಳ್ಳಾರಿ ಜಿಲ್ಲಾ
ಹೋರಾಟ ಸಮಿತಿಯಿಂದ ಡಿ.14ರಿಂದ ಒಂದು ತಿಂಗಳ ಕಾಲ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗಿತ್ತು.

ಬಳಿಕ ಜಿಲ್ಲೆ ವಿಭಜನೆ ವಿರೋ ಧಿಸಿ ರಾಜ್ಯಸಭೆ ಸದಸ್ಯ ಡಾ| ಸೈಯದ್‌ ನಾಸೀರ್‌ ಹುಸೇನ್‌, ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ, ಹೋರಾಟ ಸಮಿತಿಯ ಸಿರಿಗೇರಿ ಪನ್ನಾರಾಜ್‌, ಟಿ.ಜಿ. ವಿಠuಲ್‌, ಕುಡತಿನಿ ಶ್ರೀನಿವಾಸ್‌, ದರೂರು ಪುರುಷೋತ್ತಮಗೌಡ, ಸಿದ್ಮಲ್‌ ಮಂಜುನಾಥ್‌, ಜಗದೀಶ ಸೇರಿ ಹಲವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸಾವಿರಾರು ಆಕ್ಷೇಪಣೆ ಸಲ್ಲಿಸಿದ್ದರು.

ಸುಮಾರು 35 ಸಾವಿರಕ್ಕೂ ಹೆಚ್ಚು ಆಕ್ಷೇಪಣೆಗಳನ್ನು ಸಲ್ಲಿಸಲಾಗಿದೆ ಎಂದು ಹೋರಾಟಗಾರರು ಹೇಳಿಕೊಂಡಿದ್ದರು. ಜತೆಗೆ ಪ್ರತ್ಯೇಕ ವಿಜಯನಗರ ಜಿಲ್ಲೆ ಪರವಾಗಿಯೂ ಸಹ ಹಲವಾರು ಅರ್ಜಿ ಸಲ್ಲಿಕೆಯಾಗಿದ್ದವು. ಆದರೆ, ಪರ-ವಿರೋಧದ ಅರ್ಜಿಗಳ ಪರಿಶೀಲನೆ ಬಳಿಕ ಜಿಲ್ಲೆ
ವಿಭಜನೆ ವಿರೋಧಕ್ಕಿಂತ ಬೆಂಬಲಿಸುವವರ ಸಂಖ್ಯೆಯೇ ಅ ಧಿಕವಾಗಿರುವುದು ಪಶ್ಚಿಮ ತಾಲೂಕು ಜನರಲ್ಲಿ ಸಂತಸ ಮೂಡಿಸಿದರೆ,
ಬಳ್ಳಾರಿ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.

ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಹೋರಾಟ ಸಮಿತಿಯಿಂದ ಸಾವಿರಾರು ಆಕ್ಷೇಪಣಾ ಅರ್ಜಿ ಸಲ್ಲಿಸಲಾಗಿದೆ. ಒಂದೇ ವಿಷಯವನ್ನು ಆಧರಿಸಿ ಹಲವರು ಬರೆದಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಒಂದೇ ಎಂದು ಪರಿಗಣಿಸಿದ್ದಾರೆ. ಹೀಗಾಗಿ ಜಿಲ್ಲೆ ವಿರೋಧಿ ಸುವವರ ಅರ್ಜಿಗಳ ಸಂಖ್ಯೆ ಕಡಿಮೆಯಾಗಿರಬಹುದು.

ಆದರೆ, ಜಿಲ್ಲೆ ವಿಭಜನೆಯನ್ನು ಬೆಂಬಲಿಸಿ ಪಶ್ಚಿಮ ತಾಲೂಕುಗಳವರು ಸಹ ಅರ್ಜಿ ಸಲ್ಲಿಸಿರಬಹುದು. ಅವರು ತಮ್ಮ ಸ್ವ-ಇಚ್ಛೆಯಂತೆ, ತಮ್ಮ ಸಮಸ್ಯೆಗಳನ್ನು ಬರೆದು ಸಲ್ಲಿಸಿರಬಹುದು. ಹಾಗಾಗಿ ಬೆಂಬಲಿಸಿರುವ ಅರ್ಜಿಗಳ ಸಂಖ್ಯೆ ಹೆಚ್ಚಳವಾಗಿಬಹುದು. ಆದರೂ, ಬಳ್ಳಾರಿ ಜಿಲ್ಲೆಯನ್ನು ಅಖಂಡವಾಗಿ ಉಳಿಸುವ ನಿಟ್ಟಿನಲ್ಲಿ ಹೋರಾಟ ಮುಂದುವರೆಸುವುದಾಗಿ ಹೋರಾಟ ಸಮಿತಿ ಮುಖಂಡ ಸಿರಿಗೇರಿ ಪನ್ನಾರಾಜ್‌ ಸ್ಪಷ್ಟಪಡಿಸಿದ್ದಾರೆ.

ಓದಿ : ಆರ್‌ಆರ್‌ಟಿ ಶಾಖೆ ಗುಮಾಸ್ತ ಎಸಿಬಿ ಬಲೆಗೆ

ಟಾಪ್ ನ್ಯೂಸ್

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.