ಇಂದು ರಸ್ತೆ ತಡೆ: ಆರ್ಕೆಎಸ್ನಿಂದ ಜಾಗೃತಿ
ಹೆದ್ದಾರಿ ತಡೆ ಬಗ್ಗೆ ಆರ್ಕೆಎಸ್ ಸಂಘಟನೆಯಿಂದ ಪ್ರಚಾರ ಸಭೆ ನಡೆಸಿತು.
Team Udayavani, Feb 6, 2021, 4:16 PM IST
ಬಳ್ಳಾರಿ: ದೆಹಲಿಯಲ್ಲಿ ರೈತರ ಹೋರಾಟವನ್ನು ಬೆಂಬಲಿಸಿ ಫೆ. 6ರಂದು ದೇಶಾದ್ಯಂತ ರಾಜ್ಯ, ರಾಷ್ಟ್ರೀಯ ಹೆದ್ದಾರಿ ರಸ್ತೆತಡೆಗೆ ಕರೆ
ನೀಡಿರುವ ಹಿನ್ನೆಲೆಯಲ್ಲಿ ರೈತ, ಕೃಷಿ, ಕಾರ್ಮಿಕ ಸಂಘಟನೆ ವತಿಯಿಂದ ಜಿಲ್ಲೆಯ ಕೋಳೂರು, ದಮ್ಮೂರು, ವದ್ದಟ್ಟಿ ಇನ್ನಿತರೆ ಗ್ರಾಮಗಳಲ್ಲಿ ಶುಕ್ರವಾರ ಪ್ರಚಾರ ಸಭೆಗಳನ್ನು ನಡೆಸಿತು.
ಕೇಂದ್ರ ಸರ್ಕಾರದ ಮೂರು ಕೃಷಿ ಸಂಬಂ ಧಿತ ಕಾನೂನುಗಳನ್ನು ರದ್ದು ಮಾಡಬೇಕು, ವಿದ್ಯುತ್ ಮಸೂದೆ-2020 ನ್ನು ವಾಪಸು ಪಡೆಯಬೇಕು ಹಾಗೂ ಎಲ್ಲ ಕೃಷಿ ಉತ್ಪನ್ನಗಳಿಗೆ ಡಾ| ಎಂ.ಎಸ್. ಸ್ವಾಮಿನಾಥನ್ ವರದಿಯನ್ವಯ ಕನಿಷ್ಠ ಬೆಂಬಲ ಬೆಲೆ ಖಾತರಿ ಮಾಡುವ
ಕಾನೂನನ್ನು ರಚಿಸಬೇಕೆಂದು ಆಗ್ರಹಿಸಿ ಕಳೆದ ಮೂರು ತಿಂಗಳಿಂದ ದೆಹಲಿಯಲ್ಲಿ ಲಕ್ಷಾಂತರ ರೈತರು ಹೋರಾಟ ನಡೆಸುತ್ತಿದ್ದಾರೆ.
ಶಾಂತಯುತವಾಗಿ ಹೋರಾಟ ನಡೆಸುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ದೌರ್ಜನ್ಯ, ದಬ್ಟಾಳಿಕೆ ನಡೆಸುತ್ತಿದ್ದು, ಕೂಡಲೇ ನಿಲ್ಲಿಸಬೇಕು. ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಇ.ಹನುಮಂತಪ್ಪ, ರೈತ ಮುಖಂಡ ಮಾಧವರೆಡ್ಡಿ
ಒತ್ತಾಯಿಸಿದರು. ರೈತ ಪರ ಹೋರಾಟದಲ್ಲಿ ರಾಜ್ಯದ ರೈತರು, ದಲಿತರು, ಕಾರ್ಮಿಕರು, ವಿದ್ಯಾರ್ಥಿ, ಯುವಜನ, ಮಹಿಳೆಯರು ಹಾಗೂ ಎಲ್ಲ ದೇಶ ಪ್ರೇಮಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕೋರಿದರು. ಈ ವೇಳೆ ಜಿಲ್ಲಾ ಮುಖಂಡ ಗೋವಿಂದ್ ಸೇರಿ
ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ
AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.