ನಿರಾಶ್ರಿತರಿಗೆ ಪಿಂಚಣಿ ಸೌಲಭ್ಯಕ್ಕೆ ಕ್ರಮ
ನಿರಾಶ್ರಿತರಿಗೆ ಉಚಿತ ನೇತ್ರ ತಪಾಸಣಾ ಶಿಬಿರ
Team Udayavani, Feb 6, 2021, 4:44 PM IST
ಬಳ್ಳಾರಿ: ನಿರಾಶ್ರಿತರಿಗೆ ಪಿಂಚಣಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿ ಕಾರಿಗಳು ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ಪವನಕುಮಾರ್ ಮಾಲಪಾಟಿ ಅವರು ಭರವಸೆ ನೀಡಿದರು.
ನಗರದ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಜಿಪಂ, ಸಮಾಜಕಲ್ಯಾಣ ಇಲಾಖೆ, ಡಾ| ವಿಜಯ ನಾಗರಾಜ್ ಕಣ್ಣಿನ ಆಸ್ಪತ್ರೆ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನಿರಾಶ್ರಿತರಿಗೆ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಿಬಿರದಲ್ಲಿ ಈಗಾಗಲೇ 122 ಜನ ನಿರಾಶ್ರಿತರಿಗೆ ಕಣ್ಣಿನ ತಪಾಸಣೆ ಮಾಡಿಸಿದ್ದು, ಅತ್ಯಂತ ಸಂತೋಷದ ವಿಷಯವಾಗಿದೆ ಎಂದು ತಿಳಿಸಿದ ಡಿಸಿ ಮಾಲಪಾಟಿ ಅವರು ಈ ನಿರಾಶ್ರಿತರ ಕೇಂದ್ರದಲ್ಲಿರುವ ನಿರಾಶ್ರಿತರಿಗೆ ಆಧಾರ್‌ಕಾರ್ಡ್ ಮಾಡಿಸಲಾಗಿದೆ ಎಂದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಅನೇಕ ಸಮಾಜಮುಖೀ ಕಾರ್ಯಗಳನ್ನು ಮಾಡುತ್ತಿದ್ದು, ರೆಡ್ ಕ್ರಾಸ್ ಸ್ವಯಂಸೇವಕರ ಸೇವಾಕಾರ್ಯ ಶ್ಲಾಘನೀಯ ಎಂದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಆರೋಗ್ಯ ಉಪಸಮಿತಿ ಅಧ್ಯಕ್ಷ ಡಾ| ನಾಗರಾಜ ಮಾತನಾಡಿ ಇಂದು ತಪಾಸಣೆ ಮಾಡಿಸಲಾದವರಲ್ಲಿ 90 ಜನರಿಗೆ ಉಚಿತವಾಗಿ ಕನ್ನಡಕ ನೀಡಲಾಗುವುದು ಮತ್ತು 25 ಜನರಿಗೆ ಉಚಿತ ನೇತ್ರ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದರು.
ವಿಮ್ಸ್ ನಿರ್ದೇಶಕ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಭಾಪತಿ ಡಾ| ಗಂಗಾಧರಗೌಡ, ಉಪಸಭಾಪತಿ ಡಾ| ಎಸ್.ಜೆ.ವಿ.ಮಹಿಪಾಲ್, ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ಡಾ| ವಿಜಯ ನಾಗರಾಜ್ ಮತ್ತು ಅವರ ತಂಡ ನೇತ್ರ ತಜ್ಞ ಮಂಜುನಾಥ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಕಾರ್ಯದರ್ಶಿ ಎಂ.ಎ. ಷಕೀಬ್, ನಿರಾಶ್ರಿತರ ಪರಿಹಾರ ಕೇಂದ್ರದ ಅ ಧೀಕ್ಷಕ ಅರುಣ್, ಬೆಪಾರ್ ಮಹಮ್ಮದ್ ಇಜಾಝ್, ಪಿ.ವಾಸು, ಸಮೀಮ್ ಜಕಾಲಿ, ಮಂಜನಾಥ್ ಮತ್ತು ಎಂ.ವಲಿ ಬಾಷಾ ಇತರರು ಉಪಸ್ಥಿತರಿದ್ದರು.
ಓದಿ : ಕೊಲೆಗೆ ಕಾರಣವಾಯ್ತು 20 ರೂ. ಇಡ್ಲಿ: ತಳ್ಳುಗಾಡಿ ವ್ಯಾಪಾರಿಯ ಕೊಲಗೈದ ಮೂವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.