ಹುಣಸೋಡು ಕಲ್ಲುಕ್ವಾರಿ ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ
ಪ್ರಕರಣದ ತನಿಖೆಗೆ 6 ತಂಡ ರಚನೆ: ಎಸ್ಪಿ ಕೆ.ಎಂ.ಶಾಂತರಾಜು
Team Udayavani, Feb 6, 2021, 6:02 PM IST
ಶಿವಮೊಗ್ಗ: ಹುಣಸೋಡು ಕ್ರಷರ್‌ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಪಿ ಕೆ.ಎಂ.ಶಾಂತರಾಜು ಅವರು, ಜಮೀನಿನ ಮಾಲೀಕರಾದ ಶಂಕರಗೌಡ ಟಿ. ಕುಲಕರ್ಣಿ, ಅವಿನಾಶ್ ಕುಲಕರ್ಣಿ ಹಾಗೂ ಆಂಧ್ರ ಪ್ರದೇಶದ ಅನಂತಪುರಂ ನಿವಾಸಿಗಳಾದ ಪಿ. ಶ್ರೀರಾಮುಲು ಮತ್ತು ಪಿ.ಮಂಜುನಾಥ್ ಸಾಯಿ ಎಂಬುವವರನ್ನು ಬಂ ಧಿಸಲಾಗಿದೆ ಎಂದರು.
ಈ ಪ್ರಕರಣ ಸಂಬಂಧ ಆರು ತನಿಖಾ ತಂಡಗಳನ್ನು ರಚಿಸಿದ್ದು, ತುಂಗಾನಗರ ಠಾಣೆ ಪಿಐ ದೀಪಕ್ ಮತ್ತು ಸೊರಬ ವೃತ್ತ ಸಿಪಿಐ ಮರುಳಸಿದ್ದಪ್ಪ ಅವರು ಆಂಧ್ರಪ್ರದೇಶದ ಅನಂತಪುರಂಗೆ ತೆರಳಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿಸಿದರು.
ರಾಯದುರ್ಗದಲ್ಲಿ ಶ್ರೀರಾಮುಲು ಅವರಿಗೆ ಸಂಬಂಧಪಟ್ಟ ಸೊ#ಧೀಟಕಗಳ ದಾಸ್ತಾನು ಗೋದಾಮಿದೆ. ಅಲ್ಲಿ ಪರವಾನಗಿ ಪಡೆಯದೇ ಒಂದು ವಾಹನದಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಿಡಲಾಗಿತ್ತು. ಈ ಬಗ್ಗೆ ಅನಂತಪುರಂ ಜಿಲ್ಲೆಯ ಗುಮ್ಮಟಘಟ್ಟ ಪೊಲೀಸ್ ಠಾಣೆಯಲ್ಲಿ ಅಕ್ರಮ ಸ್ಫೋಟ ದಾಸ್ತಾನು ಸಂಬಂಧಪಟ್ಟಂತೆ ಪ್ರಕರಣ ಕೂಡ ದಾಖಲಾಗಿದೆ.
ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಜತೆಗೆ, ಆಂಧ್ರಪ್ರದೇಶದ ಪೊಲೀಸರು,
ವಿಶಾಖಪಟ್ಟಣದ ಡೆಪ್ಯೂಟಿ ಕಂಟ್ರೋಲರ್ ಆಫ್ ಎಕ್ಸ್‌ಪ್ಲೋಸಿವ್ ಅವರಿಗೆ ಶ್ರೀರಾಮುಲು ಲೈಸೆನ್ಸ್ ನಿಯಮವನ್ನು ಉಲ್ಲಂಘಿಸಿರುವ ಬಗ್ಗೆ ಮಾಹಿತಿ ನೀಡಿದ್ದು, ಅವರ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಫೆ.4ರಂದು ಭದ್ರಾವತಿ ಟೌನ್ ಸಿಪಿಐ ರಾಘವೇಂದ್ರ ಕಾಂಡಿಕೆ, ವಿನೋಬನಗರ ಪಿಎಸ್‌ಐ ಉಮೇಶ್, ಸಿಬ್ಬಂದಿ ನಾಗರಾಜ್, ಸಂದೀಪ್ ಅವರನ್ನೊಳಗೊಂಡ ತಂಡವು ಹಾವೇರಿ, ದಾವಣಗೆರೆ, ಜಗಳೂರು, ಚನ್ನಗಿರಿಗೆ ತೆರಳಿ ಮಾಹಿತಿ ಸಂಗ್ರಹಿಸಿದೆ. ಈ ಪ್ರಕರಣದಲ್ಲಿ ಸ್ಫೋಟವಾದ ಜಮೀನಿನ ಮಾಲೀಕರಾದ ಶಂಕರ್‌ಗೌಡ ಮತ್ತು ಅವಿನಾಶ್ ಅವರನ್ನು ದಾವಣಗೆರೆಯಲ್ಲಿ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದೆ ಎಂದರು.
ಮಹಿಳಾ ಪೊಲೀಸ್ ಠಾಣೆ ಪಿಐ ಅಭಯ್ ಪ್ರಕಾಶ್, ಗ್ರಾಮಾಂತರ ಸಿಪಿಐ ಸಂಜೀವ್ ಕುಮಾರ್, ಎಎಸ್‌ಐ ವಿಜಯ್, ಸಿಬ್ಬಂದಿ
ಕಿರಣ್ ಮೋರೆ ಅವರನ್ನೊಳಗೊಂಡ ತಂಡವು ಅನಂತಪುರಂ, ರಾಯದುರ್ಗ ಮುಂತಾದ ಕಡೆಗಳಿಗೆ ಭೇಟಿ ನೀಡಿ ನಂತರ ಹೈದರಾಬಾದ್‌ಗೆ
ತೆರಳಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಬೈಗೆ ತೆರಳಿ ಅಲ್ಲಿ ಶ್ರೀರಾಮುಲು ಮತ್ತು ಮಂಜುನಾಥ್ ಎಂಬುವವರನ್ನು ಬಂಧಿ ಸಿದ್ದಾರೆ ಎಂದು ತಿಳಿಸಿದರು.
ಹುಣಸೋಡಿನಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಸ್ಫೋಟಕಗಳು ಪಿ. ಶ್ರೀರಾಮುಲು ಅವರ ಮಾಲೀಕತ್ವದಲ್ಲಿರುವ ಆಂಧ್ರಪ್ರದೇಶದ
ಅನಂತಪುರಂನ ಗಣೇಶ್ ಟ್ರೇಡರ್‌ನಿಂದ ಪೂರೈಕೆಯಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ. ಪ್ರಕರಣದಲ್ಲಿ ಈವರೆಗೆ ಎಂಟು
ಜನರನ್ನು ಬಂಧಿ ಸಲಾಗಿದೆ ಎಂದು ಎಸ್ಪಿ ಕೆ.ಎಂ. ಶಾಂತರಾಜು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಎಎಸ್ಪಿ ಎಚ್.ಟಿ. ಶೇಖರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.