ವಸಾಯಿ ಕರ್ನಾಟಕ ಸಂಘ: ಶ್ರೀ ಸತ್ಯನಾರಾಯಣ ಮಹಾಪೂಜೆ
Team Udayavani, Feb 6, 2021, 6:26 PM IST
ಮುಂಬಯಿ: ವಸಾಯಿ ಕರ್ನಾಟಕ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ ಮತ್ತು ಸಂಘದ 32ನೇ ವಾರ್ಷಿಕ ಮಹಾಸಭೆಯು ಜ. 26ರಂದು ವಸಾಯಿ ಪಶ್ಚಿಮ ಸಾಯಿ ನಗರದ ಹ್ಯಾಪಿ ಜೀವನ್ ಸೊಸೈಟಿಯಲ್ಲಿರುವ ವಸಾಯಿ ಕರ್ನಾಟಕ ಸಂಘದ ಕಚೇರಿಯಲ್ಲಿ ನಡೆಯಿತು.
ವಸಾಯಿ ಕರ್ನಾಟಕ ಸಂಘದ ಅಧ್ಯಕ್ಷರಾದ ಪಾಂಡು ಎಲ್. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪರಾಹ್ನ 3ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಮಹಿಳಾ ವಿಭಾಗದ ವತಿಯಿಂದ ಸಂಘದ ಮಹಿಳಾ ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸಂಘದ ಪ್ರಾಯೋಜಕತ್ವದ ಶ್ರೀ ಕಟೀಲು ಯಕ್ಷಕಲಾ ವೇದಿಕೆ ಚಾರಿಟೆಬಲ್ ಟ್ರಸ್ಟ್ ಇದರ ಮಹಿಳಾ ಸದಸ್ಯೆಯರಿಂದ ಅರಸಿನ ಕುಂಕುಮ ಕಾರ್ಯಕ್ರಮ ಜರಗಿತು. ಸತ್ಯನಾರಾಯಣ ಮಹಾ ಪೂಜೆಯನ್ನು ನಲಸೋಪರದ ಕೃಷ್ಣ ಭಟ್ ಮತ್ತು ತಂಡದವರು ನೆರವೇರಿಸಿಕೊಟ್ಟರು.
ರವಿಕಾಂತ್ ನಾಯಕ್ ದಂಪತಿ ಪೂಜಾ ಯಜಮಾನತ್ವ ವಹಿಸಿದ್ದರು. ಕೋವಿಡ್ ಮಾರ್ಗಸೂಚಿ ಪ್ರಕಾರ ದಿನವಿಡೀ ನಡೆದ ಕಾರ್ಯಕ್ರಮದಲ್ಲಿ ಸದಸ್ಯ ಬಾಂಧವರು ಪಾಲ್ಗೊಂಡು ಸಹಕರಿಸಿದರು.
ಇದನ್ನೂ ಓದಿ: ಸದಾಶಿವ ವರದಿ ಜಾರಿಗೆ ಒತ್ತಾಯಿಸಿ ರಥಯಾತ್ರೆ
ಪ್ರಮೀಳಾ ಎನ್. ಅಮೀನ್ ಅವರ ಪ್ರಾರ್ಥನೆಗೈದರು. ಜತೆ ಕಾರ್ಯದರ್ಶಿ ವಿಜಯ್ ಪಿ. ಶೆಟ್ಟಿ ಕುತ್ತೆತ್ತೂರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಕರ್ನಾಟಕ ಕೋ. ಅಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್‌ನ ಕಾರ್ಯಾಧ್ಯಕ್ಷ ಭಾಸ್ಕರ್ ಕೆ. ಶೆಟ್ಟಿ, ಎಂ. ಲೋಕೇಶಪ್ಪ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಗೌರವ ಅಧ್ಯಕ್ಷರಾದ ವಿಶ್ವನಾಥ ಪಿ. ಶೆಟ್ಟಿ, ಉಪಾಧ್ಯಕ್ಷರಾದ ದೇವೆಂದ್ರ ಬಿ. ಬುನ್ನನ್, ಕೋಶಾಧಿಕಾರಿ ವಿಜಯ್ ಎಂ. ಶೆಟ್ಟಿ, ಜತೆ ಕೋಶಾಧಿಕಾರಿ ಹರಿಪ್ರಸಾದ್ ಶೆಟ್ಟಿ, ಸಲಹಾ ಸಮಿತಿ ಕಾರ್ಯಾಧ್ಯಕ್ಷ ಓ. ಪಿ. ಪೂಜಾರಿ, ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿ ಕಾರ್ಯಾಧ್ಯಕ್ಷ ಯಶೋಧರ ವಿ. ಕೋಟ್ಯಾನ್, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್ ಎನ್. ಶೆಟ್ಟಿ, ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ಮೋಹಿನಿ ಎಸ್. ಮಲ್ಪೆ, ಯುವ ವಿಭಾಗ ಕಾರ್ಯಾಧ್ಯಕ್ಷ ಪೃಥ್ವಿರಾಜ್ ಶ್ರೀಧರ ಶೆಟ್ಟಿ ಕರ್ನಿರೆ ಇವರುಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desiswara: ನ್ಯೂಯಾರ್ಕ್ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ
Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…
Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ
Kannada Alphanbets: “ಕ’ ಕಾರದಲ್ಲಿನ ವಿಶೇಷ: ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ
ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.