ಯುವ ಕಾಂಗ್ರೆಸ್‌ ಮರುಮತದಾನಕ್ಕೆ ಆಗ್ರಹ


Team Udayavani, Feb 6, 2021, 6:49 PM IST

BGK Congress

ಬಾಗಲಕೋಟೆ: ಯುವ ಕಾಂಗ್ರೆಸ್‌ ಪದಾಧಿಕಾರಿಗಳ ಚುನಾವಣೆ ಈ ಬಾರಿ ಇಂಡಿಯನ್‌ ಯೂಥ್‌ ಕಾಂಗ್ರೆಸ್‌ ಆ್ಯಪ್‌ ಮೂಲಕ ನಡೆಸಿದ್ದು, ಜಿಲ್ಲೆಯಲ್ಲಿ ಅಕ್ರಮ ನಡೆದಿದೆ.ಆ್ಯಪ್‌ ಮೂಲಕ ಚುನಾವಣೆ ನಡೆಸಿದ್ದರಿಂದ ಹಲವಾರು ಜನ ಮತದಾನದಿಂದ ವಂಚಿತರಾಗಿದ್ದಾರೆ. ಚುನಾವಣೆಯನ್ನು ಬ್ಯಾಲೇಟ್‌ ಪೇಪರ್‌ ಮೂಲಕ ಮತ್ತೂಮ್ಮೆ ನಡೆಸಬೇಕು ಎಂದು ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪುರ ಒತ್ತಾಯಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮತದಾನ ಮಾಡುವಾಗ ತಂತ್ರಾಂಶದಲ್ಲಿ ದೋಷವಿತ್ತು. ಸರ್ವರ್‌ ಸರಿಯಾಗಿ ಇರಲಿಲ್ಲ. ಹೀಗಾಗಿ ಮತದಾನ ಮಾಡಲು ಎಷ್ಟೋ ಜನರಿಗೆ ಸಾಧ್ಯವಾಗಿಲ್ಲ. ಇದರಿಂದ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ ಎಂದರು.

ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಜಮಖಂಡಿ ತಾಲೂಕಿನ ರಾಹುಲ್‌ ಸೂರ್ಯಕಾಂತ ಕಲೂತಿ ಎಂಬುವವರು ಆಯ್ಕೆಯಾಗಿದ್ದಾರೆ. ಸಾವಳಗಿ, ಜಮಖಂಡಿ ಭಾಗದಲ್ಲಿ ನಮ್ಮ ಪಕ್ಷದ ಸದಸ್ಯರಲ್ಲದವರಿಂದಲೂ ಮತದಾನ ಮಾಡಿಸಲಾಗಿದೆ. ಜಮಖಂಡಿ ತಾಲೂಕಿನಲ್ಲಿ ಹೆಚ್ಚು ಮತದಾನವಾಗಿದೆ. ವಿವಿಧ ತಾಲೂಕಿನಲ್ಲಿ ಮತದಾನ ಮಾಡಲು ತಂತ್ರಾಂಶದಲ್ಲಿನ ಸಮಸ್ಯೆ ಅಡ್ಡಿಯಾಗಿತ್ತು. ಅಲ್ಲದೇ 900 ಮತಗಳನ್ನು ರಿಜೆಕ್ಟ್ ಮಾಡಲಾಗಿದೆ. ಹೀಗಾಗಿ ಫಲಿತಾಂಶದಲ್ಲಿ ವ್ಯತ್ಯಾಸವಿದೆ. ಕೂಡಲೇ ಮರು  ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಯುವ ಕಾಂಗ್ರೆಸ್‌ಗೆ 12 ಸಾವಿರ ಜನ ಮತದಾರರಿದ್ದು, 6,550 ಜನ ಮಾತ್ರ ಮತದಾನ ಮಾಡಿದ್ದಾರೆ. ಅದರಲ್ಲಿ 900  ಮತಗಳನ್ನು ರಿಜೆಕ್ಟ್ ಮಾಡಲಾಗಿದೆ ಎಂದು ತಿಳಿಸಿದರು.

 ಇದನ್ನೂ ಓದಿ :ಸಿನಿಮಾ ಮನರಂಜನಾ ಮಾಧ್ಯಮ

ಜಿಲ್ಲಾ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಶಿಶಿರ ಮಲಘಾಣ, ವಿವಿಧ ಬ್ಲಾಕ್‌ ಅಧ್ಯಕ್ಷರು ಹಾಗೂ ಪ್ರಮುಖರಾದ ಮಹೇಶ ಜಾಲವಾದಿ, ಹುಲ್ಲಪ್ಪ ತೇಜಿ, ರವಿಕುಮಾರ ನಾಗನಗೌಡರ, ಹನಮಂತ ನಾಯ್ಕರ, ಚಿದಾನಂದ ನಂದ್ಯಾಳ, ಪ್ರವೀಣ ಪಾಟೀಲ, ಗೋಪಾಲ ಲಮಾಣಿ, ಮಾಳಿಂಗ ಪಾಟೀಲ, ಬಸವರಾಜ ಹೂವಿನಹಳ್ಳಿ, ಮಹಾಲಿಂಗ ಪಾಟೀಲ, ಮಲ್ಲೇಶ ಕಂಬಾರ  ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.